ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ಹಾಗೂ ಮಸ್ಲೀಮರ ವಿರುದ್ಧ ರಕ್ತಕ್ರಾಂತಿಯ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಡಿಸಿಎಂ, ರಾಷ್ಟ್ರ ಭಕ್ತರ ಬಳಗದ ಸಂಚಲಕರಾದ ಕೆ.ಎಸ್. ಈಶ್ವರಪ್ಪ #K S Eshwarappa ಅವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಜಯನಗರ ಪೊಲೀಸ್ ಇನ್ಸ್’ಪೆಕ್ಟರ್ ಎಚ್.ಎಂ. ಸಿz್ದೆÃಗೌಡ ಅವರು ಸ್ವದೂರು ನೀಡಿದ್ದು, ಇದರಂತೆ ಈಶ್ವರಪ್ಪನವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Also read: ಸಾಗರ | ನಿಯಂತ್ರಣ ತಪ್ಪಿ ಪಲ್ಟಿಯಾಗಿ ದೇವಾಲಯದ ಕಾಂಪೌಂಡ್’ಗೆ ಡಿಕ್ಕಿಯಾದ ಕ್ಯಾಂಟರ್
ನವೆಂಬರ್ 14ರಂದು 81/2024ರಂತೆ, ಕಲಂ 196(1)(ಎ), 299 ಬಿಎನ್’ಎಸ್’ನಂತೆ ಪ್ರಕರಣ ದಾಖಲಾಗಿದೆ.
ಏನಿದು ಪ್ರರಕಣ?
ನವೆಂಬರ್ 13ರಂದು ಬೆಳಗ್ಗೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಕೆ.ಎಸ್. ಈಶ್ವರಪ್ಪ ಅವರು, ವಕ್ಫ್ ಪ್ರಕರಣಗಳ ಬಗ್ಗೆ, ಅಂಬೇಡ್ಕರ್ ಇಸ್ಲಾಂ ಸೇರ್ಪಡೆ ಹೇಳಿಕೆ ಬಗ್ಗೆ, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರ ಮೀಸಲಾತಿ ಬಗ್ಗೆ ಕಾಂಗ್ರೆಸ್ ಸ್ಪಂದಿಸಿ ಹಿಂದೂಸ್ಥಾನವನ್ನು ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಆರೋಪಿಸಿದ್ದರು.
ಈ ಕೆಲಸಗಳು ಹೀಗೆಯೇ ಮುಂದುವರೆದರೆ ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳುವ ಕಾಲ ದೂರವಿಲ್ಲ ಎಂದು ಹೇಳಿದ್ದರು ಎಂದು ಆರೋಪಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಅನ್ಯ ಕೋಮಿನ ವಿರುದ್ಧ ದ್ವೇಷ ಭಾವನೆಗಳನ್ನು ಕೆರಳಿಸಿ ಸಮಾಜದಲ್ಲಿ ಸೌಹರ್ದತೆ ಕೆಡಿಸುವ ಹೊತ್ತಿಸುವ ರೀತಿಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಲಾಗಿದೆ. ಈ ರೀತಿ ಪ್ರಚೋದನಕಾರಿ ಮಾತನಾಡಿರುವ ಕೆ.ಎಸ್. ಈಶ್ವರಪ್ಪ ಅವರ ಮೇಲೆ ಕಾನೂನು ರೀತಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post