ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರ ಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಅವರ ವಿರುದ್ಧ ಸುಮೊಟೋ ದೂರು ದಾಖಲಾಗುತ್ತಿದ್ದಂತೆ ಅವರ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಬೀದಿಗಿಳಿದಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಮೆರವಣಿಗೆ ನಡೆಸುವ ಮೂಲಕ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿದರು.

Also read: Reserve Bank of India Celebrates 90th Anniversary with Nationwide RBI90 Quiz
ಕೈಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು, ಈಶ್ವರಪ್ಪ ಅವರ ವಿರುದ್ದ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿ ಬಂದ ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್ ನಾಯಕರು ಕೈ ಕಟ್ಟಿ ಕೂರುವುದಿಲ್ಲ, ಕೋಮು ಪ್ರಚೋದನೆಯ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರಲ್ಲದೆ, ಈಶ್ವರಪ್ಪ ನಾಲಿಗೆ ಹರಿಬಿಡುವುದನ್ನು ನಿಲ್ಲಿಸಬೇಕೆಂದು ಕಿಡಿಕಾರಿದರು. ಮೆರವಣಿಗೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಹಿರಿಯರಾದ ಕೆ.ಎಸ್. ಈಶ್ವರಪ್ಪ ತಾವೊಬ್ಬ ಅನುಭವಿ ರಾಜಕಾರಣಿ ಎನ್ನುವುದನ್ನೇ ಮರೆತಿದ್ದಾರೆ. ಇತ್ತೀಚೆಗೆ ಅವರು ವಿಚಿತ್ರವಾಗಿ ಮಾತನಾಡುತ್ತಿದ್ದಾರೆ.ಸದಾ ಕೋಮು ಪ್ರಚೋದನೆಯ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನಾಯಕರನ್ನು ಹೊಡೆಯಿರಿ, ಕಡಿಯಿರಿ ಎಂದು ಹೇಳಿಕೆ ನೀಡುತ್ತಿದ್ದಾರೆಂದು ಆರೋಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post