No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧ ಜಾಥಾಕ್ಕೆ ರಾಷ್ಟ್ರಭಕ್ತರ ಬಳಗ ಬೆಂಬಲ: ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 10, 2026
in ಶಿವಮೊಗ್ಗ
0
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧ ಜಾಥಾಕ್ಕೆ ರಾಷ್ಟ್ರಭಕ್ತರ ಬಳಗ ಬೆಂಬಲ: ಕೆ.ಎಸ್. ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪರಿಸರ ವಿರೋಧಿ, ಜನವಿರೋಧಿ, ಅವೈಜ್ಞಾನಿಕ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು #Sharavathi Pumped Storage Plan ವಿರೋಧಿಸಿ ಫೆ.12ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿರುವ ಬೃಹತ್ ಜಾಥಾಕ್ಕೆ ರಾಷ್ಟ್ರಭಕ್ತರ ಬಳಗ ಸಂಪೂರ್ಣ ಬೆಂಬಲ ನೀಡಿದ್ದು, ರಾಷ್ಟ್ರಭಕ್ತ ಬಳಗದ 1000ಕ್ಕೂ ಹೆಚ್ಚು ಕಾರ್ಯಕರ್ತರು ಈ ಜಾಥಾದಲ್ಲಿ ಭಾಗವಹಿಸಲಿದ್ದಾರೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಮುಂದಾಗಿರುವುದು ಪ್ರಕೃತಿ ಮೇಲಿನ ಬಹಿರಂಗ ಅತ್ಯಾಚಾರವಾಗಿದೆ. ಬಹುಶಃ ಕೆಲ ಅಧಿಕಾರಿಗಳಿಂದ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಈ ಯೋಜನೆಯ ಸಾಧಕ-ಬಾಧಕದ ಕುರಿತು ಪೂರ್ಣ ಅರಿವಿಲ್ಲದಂತೆ ತೋರುತ್ತದೆ. 10ಸಾವಿರ 700 ಕೋಟಿ ರೂಪಾಯಿ ಲೂಟಿಮಾಡುವ ಸಂಚು ಈ ಯೋಜನೆಯಲ್ಲಿದ್ದಂತೆ ಕಾಣಿಸುತ್ತದೆ. ಈ ಯೋಜನೆಯಲ್ಲಿ ಇರಬೇಕಾದ ಸಂಗತಿಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಪತ್ರ ನೀಡಿದ್ದೇವೆ. ಫೆ.12ರೊಳಗೆ ಈ ಕುರಿತು ಕೆಪಿಸಿಎಲ್‍ನಿಂದ ಉತ್ತರ ಬರುವ ನಿರೀಕ್ಷೆಯಿದೆ ಎಂದರು.
ಈ ಕುರಿತಂತೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ್ ಜೋಷಿ, ರಾಜ್ಯ ಇಂಧನಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿಮಾಡಿ, ಯೋಜನೆ ಸ್ಥಗಿತಗೊಳಿಸುವಂತೆ ಆಗ್ರಹಿಸಲಾಗುವುದು. ಪರಿಸರ ಹೋರಾಟಗಾರರ ಜೊತೆ ಚರ್ಚಿಸಿ, ನ್ಯಾಯಾಲಯದ ಮೊರೆ ಹೋಗಲು ಯೋಚಿಸಲಾಗುವುದು ಎಂದ ಅವರು, ಈ ಯೋಜನೆಯನ್ನು ಖಂಡಿತಾ ನಿಲ್ಲಿಸುತ್ತೇವೆ. ಯಾವುದೇ ಕಾರಣಕ್ಕೂ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಖಡಕ್ಕಾಗಿಯೇ ಪ್ರತಿಕ್ರಿಯಿಸಿದರು.

ಖ್ಯಾತ ಪರಿಸರ ಹೋರಾಟಗಾರ ಪ್ರೊ.ಬಿ.ಎಂ. ಕುಮಾರಸ್ವಾಮಿ ಮಾತನಾಡಿ, ಅರಣ್ಯ ಸಂರಕ್ಷಣಾ ಕಾಯ್ದೆ, ವನ್ಯಜೀವಿ ಸಂರಕ್ಷಣಾ ಕಾಯ್ದೆಯಂತಹ ಕಠಿಣ ಕಾನೂನುಗಳಿದ್ದರೂ ಅಧಿಕಾರಿಗಳು ಈ ಪರಿಸರ ಮಾರಕ ಯೋಜನೆಯನ್ನು ಜಾರಿಗೊಳಿಸಲು ಮುಂದಾಗುತ್ತಿರುವುದು ಪರಿಸರದ ಮೇಲಿನ ಸಾಮೂಹಿಕ ಅತ್ಯಾಚಾರ ಎಂದು ಕಿಡಿಕಾರಿದರು.

ಕೇಂದ್ರ ಅರಣ್ಯ ಮತ್ತು ಪರಿಸರ ಮಂತ್ರಾಲಯದ ಅಧಿಕಾರಿ ಪ್ರಣೀತಾಪೌಲ್, ಅಳಿವಿನಂಚಿನಲ್ಲಿರುವ ಸಿಂಗಳೀಕ, ಮಂಗಟ್ಟೆ ಪಕ್ಷಿಗಳು ಪಶ್ವಿಮಘಟ್ಟದ ಈ ಸಂರಕ್ಷಣಾ ಅರಣ್ಯ ವಲಯದಲ್ಲಿದ್ದು, ಇಲ್ಲಿ ಯಾವುದೇ ಕಾರಣಕ್ಕೂ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿಸಬಾರದು ಎಂದು ವರದಿ ನೀಡಿದ್ದರೂ ಅದನ್ನು ಮೆಟ್ಟಿ ರಾಜ್ಯ ಅರಣ್ಯ ಅಧಿಕಾರಿ ಸೆಂಥಿಲ್‍ಕುಮಾರ್ ಎನ್ನುವವರು ಒಂದೇ ಪುಟದ ವರದಿಯನ್ನು ನೀಡಿ, ಇಲ್ಲಿ ಯಾವುದೇ ಪ್ರಾಣಿ, ಪಕ್ಷಿಗಳಿಗೆ ಹಾನಿಯಾಗುವುದಿಲ್ಲ. ಈ ಯೋಜನೆಯನ್ನು ಜಾರಿಗೊಳಿಸಬಹುದು ಎಂದು ವರದಿ ನೀಡಿದ್ದು ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅರಣ್ಯನಾಶ ಮಾಡಿ ಪಂಪ್ಡ್ ಸ್ಟೋರೇಜ್ ನಿರ್ಮಿಸುವ ಬದಲು ಬ್ಯಾಟರಿ ಸ್ಟೋರೇಜ್ ತಂತ್ರಜ್ಞಾನವನ್ನು ಬಳಸಿ ಪರಿಸರ ಹಾನಿಯನ್ನು ತಡೆಗಟ್ಟಬಹುದು. 135 ಕಿ.ಮೀ. ಹರಿಯುವ ನದಿಗೆ 25 ಕಿ.ಮೀ.ದಷ್ಟು ಸ್ವತಂತ್ರವಾಗಿ ಹರಿಯಲು ಬಿಡುತ್ತಿಲ್ಲ ಸಿಡಿಮಿಡಿಗೊಂಡರು.

ಇನ್ನೋರ್ವ ಪರಿಸರ ಹೋರಾಟಗಾರ ಡಾ.ಶ್ರೀಪತಿ ಎಲ್.ಕೆ., ವಿದ್ಯುತ್ತಿನ ಶೇಖರಣೆಯ ನೆಪದಲ್ಲಿ ಹರಿಯುವ ನೀರನ್ನು ಕಳೆದುಕೊಳ್ಳುತ್ತೇವೆ. 18,000 ಟನ್ ಜೆಲೆಟಿನ್‍ಗಳನ್ನು ಬಳಸಿ ಭೂಮಿಯನ್ನು ಸಿಡಿಸುತ್ತೇವೆ. ಜಲಚರ, ಕೃಷಿಭೂಮಿ, ಮತ್ಸೋದ್ಯಮ, ಸಸ್ಯ ಸಂಪತ್ತಿನ ಹಾನಿಗಳ ಬಗ್ಗೆ ಕೆಪಿಸಿಎಲ್ ನೀಡುವ ಪರಿಹಾರ ಏನು ಎಂಬುದರ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರಲ್ಲದೆ ಆಗುಂಬೆ ಘಾಟಿನಲ್ಲಿ ಸುರಂಗಮಾರ್ಗದಿಂದ ಪರಿಸರದ ಮೇಲೆ ಇನ್ನಿಲ್ಲದ ಹಾನಿ ಉಂಟಾಗುತ್ತದೆ. ಅದರ ಬದಲು ಈಗಿರುವ ರಸ್ತೆಯ ಅಗಲೀಕರಣವೇ ವಾಸಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆ.ಈ. ಕಾಂತೇಶ್, ಎಂ. ಶಂಕರ್, ಈ. ವಿಶ್ವಾಸ್, ಡಾ.ಶೇಖರ್‍ಗೌಳೇರ್, ಮೋಹನ್ ಜಾದವ್, ಜನಾರ್ಧನ್ ಪೈ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

    

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSharavathi Pumped Storage PlanShimogaShivamoggaNewsಮಲೆನಾಡು_ಸುದ್ಧಿಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಮೈಸೂರು ಸ್ಯಾಂಡಲ್ ಸೋಪಿಗೆ ಇಂದಿನಿಂದ ನಟಿ ತಮನ್ನಾ ಭಾಟಿಯಾ ರಾಯಭಾರಿ

Next Post

ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
‘ಜೆಕೆ ಟೈರ್ – WIAA ಮಹಿಳಾ ಕಾರ್ ರ್ಯಾಲಿ ಟು ವ್ಯಾಲಿ 2026’ಕ್ಕೆ ಅದ್ಧೂರಿ ಚಾಲನೆ: 200ಕ್ಕೂ ಹೆಚ್ಚು ಮಹಿಳೆಯರ ಭಾಗಿ!

‘ಜೆಕೆ ಟೈರ್ – WIAA ಮಹಿಳಾ ಕಾರ್ ರ್ಯಾಲಿ ಟು ವ್ಯಾಲಿ 2026’ಕ್ಕೆ ಅದ್ಧೂರಿ ಚಾಲನೆ: 200ಕ್ಕೂ ಹೆಚ್ಚು ಮಹಿಳೆಯರ ಭಾಗಿ!

March 28, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಏಕ ಕಂಠದಲ್ಲಿ ಶ್ರೀ ವಿಷ್ಣುಸಹಸ್ರನಾಮ ಪಾರಾಯಣ ಸಮರ್ಪಣೆ

March 28, 2026
ಶ್ರೀ ರಾಮನ ಚಿಂತನೆಗಳು ಸರ್ವರಿಗೂ ಮಾದರಿ: ಉಮ್ಮತ್ತೂರು ಇಂದು ಶೇಖರ್

ಶ್ರೀ ರಾಮನ ಚಿಂತನೆಗಳು ಸರ್ವರಿಗೂ ಮಾದರಿ: ಉಮ್ಮತ್ತೂರು ಇಂದು ಶೇಖರ್

March 28, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL