ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡು ರೈತ ಹೋರಾಟ ಸಮಿತಿ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S Eshwarappa ಅವರಿಗೆ ಬೆಂಬಲ ನೀಡಲಿದೆ ಎಂದು ಸಮಿತಿ ಜಿಲ್ಲಾ ಸಂಚಾಲಕ ತೀ.ನಾ. ಶ್ರೀನಿವಾಸ್ ಹೇಳಿದರು.
ಅವರು ಇಂದು ಕೆ.ಎಸ್. ಈಶ್ವರಪ್ಪನವರ ಜೊತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಲೆನಾಡು ರೈತರ ಸಮಸ್ಯೆಯನ್ನು ಯಾವ ಸರ್ಕಾರಗಳೂ ಬಗೆಹರಿಸಲಿಲ್ಲ. ಯಡಿಯೂರಪ್ಪ, ಬಿ.ವೈ. ರಾಘವೇಂದ್ರ ಸಂಸದರಾಗಿದ್ದರು. ಸಂಸತ್ ನಲ್ಲಿ ಧ್ವನಿಯೂ ಎತ್ತಲಿಲ್ಲ. ಇತ್ತ ಕಾಂಗ್ರೆಸ್ ಸರ್ಕಾರ ಕೂಡ ಶರಾವತಿ ಸಂತ್ರಸ್ತರ ಮತ್ತು ಬಗರ್‍ಹುಕುಂ ಸಾಗುವಳಿದಾರರ ಸಮಸ್ಯೆ ಬಗೆಹರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹಾಗಾಗಿ ನಾವು ಈ ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಬೆಂಬಲಿಸುತ್ತಿದ್ದೇವೆ. ಅವರು ಗೆದ್ದರೆ ಖಂಡಿತಾ ಮಲೆನಾಡು ಭಾಗದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದರು.

Also read: ಗೀತಾ ಶಿವರಾಜ್ ಕುಮಾರ್ ಈ ನಾಡಿನ ಅಪರೂಪದ ರಾಜಕಾರಣಿ: ಸಾ.ರಾ. ಗೋವಿಂದು
ಇದರ ಜೊತೆಗೆ ಹಿಂದುಳಿದ ವರ್ಗಗಳ ಪರ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳು ಏನನ್ನೂ ಮಾಡಲಿಲ್ಲ. ಕೆ.ಎಸ್. ಈಶ್ವರಪ್ಪನವರು ಹಿಂದುಳಿದ ವರ್ಗದ ನಾಯಕರಾಗಿದ್ದಾರೆ. ಖಂಡಿತಾ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ನಮ್ಮದು. ಹಾಗಾಗಿ ಅವರು ಈ ಬಾರಿ ಗೆಲ್ಲಬೇಕು. ಮತ್ತು ಗೆದ್ದೇ ಗೆಲ್ಲುತ್ತಾರೆ ಎಂದರು.

ನಾನು ಗೆದ್ದರೆ ಖಂಡಿತಾ ಮಲೆನಾಡು ಭಾಗದ ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಕಂದಾಯ ಸಚಿವನಾಗಿದ್ದಾಗ 94ಸಿ ಕಾಯ್ದೆಯನ್ನು ವಿರೋಧಗಳ ನಡುವೆಯೂ ಜಾರಿಗೆ ತಂದಿದ್ದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕೆ.ಇ. ಕಾಂತೇಶ್ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post