ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಮಂಡೇನಕೊಪ್ಪದಲ್ಲಿ ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ವತಿಯಿಂದ ಸುರಭಿ ಗೋಶಾಲೆ ಆವರಣದಲ್ಲಿ ನಿರ್ಮಾಣವಾಗಿರುವ ವಸತಿ ಸಮುಚ್ಛಯ ಏ.6ರ ಬುಧವಾರ ಲೋಕಾರ್ಪಣೆಗೊಳ್ಳಲಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಸಂಜೆ 6ಗಂಟೆಗೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಚಿವ ಈಶ್ವರಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಕೆ.ಸಿ. ನಟರಾಜ್ ಭಾಗವತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್.ಆರ್. ಕೇಶವಮೂರ್ತಿ ಅವರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡರು, ಡಿ.ಎಸ್. ಅರುಣ್, ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಭದ್ರಾ ಅಚ್ಚಕಟ್ಟು ಪ್ರಾಧಿಕಾರ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಎಸ್. ದತ್ತಾತ್ರಿ, ಎಂ.ಬಿ. ಭಾನುಪ್ರಕಾಶ್, ಮಧುಸೂಧನ್ ಉಪಸ್ಥಿತರಿರಲಿದ್ದಾರೆ.
Also read: ಜ್ಯೋತಿಶ್ ಮನೆಗೆ ಶಿವಮೊಗ್ಗ ಹರ್ಷ ಕುಟುಂಬ ಭೇಟಿ : 2 ಲಕ್ಷ ಧನ ಸಹಾಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post