ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಕೆಲವು ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 8 ಜನರ ವಿರುದ್ಧ ಲಘು ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ.
ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೂಳೆಬೈಲು, ಮದಾರಿಪಾಳ್ಯ, ಎಂಆರ್ ಎಸ್ ವೃತ್ತ, ಪ್ರಿಯಾಂಕಾ ಲೇಔಟ್ ಮತ್ತು ವಡ್ಡಿನ ಕೊಪ್ಪ ಗ್ರಾಮದ ಹೊರವಲಯದಲ್ಲಿ ಸಿಬ್ಬಂದಿಗಳ ತಂಡವು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 11 ಜನರನ್ನು ವಿಚಾರಣೆ ನಡೆಸಿದಾಗ, ಸಾರ್ವಜನಿಕರಿಗೆ ತೊಂದರೆ ನೀಡಿದ ಹಿನ್ನೆಲೆಯುಳ್ಳ 8 ವ್ಯಕ್ತಿಗಳ ವಿರುದ್ಧ ಲಘು ಪ್ರಕರಣ ದಾಖಲಿಸಿರುವುದಾಗಿ ತಿಳಿದುಬಂದಿದೆ.












Discussion about this post