No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪತ್ರಕರ್ತರ ಮೇಲಿನ ಹಲ್ಲೆ ಹಾಗೂ ಬೆದರಿಕೆಗೆ ಎಸ್‌ಡಬ್ಲ್ಯೂಜೆಎ ಖಂಡನೆ

kalpa News by kalpa News
February 24, 2022
in ಶಿವಮೊಗ್ಗ
0
ನಾಳೆ ಪತ್ರಿಕಾ ದಿನಾಚರಣೆ: ಆಯುಷ್ ಕಿಟ್, ಮಾಸ್ಕ್, ಗುರುತಿನ ಚೀಟಿ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆ #Bajarangadala activist Harsha murder ಅತ್ಯಂತ ಖಂಡನಾರ್ಹ. ಆದರೆ, ಇದನ್ನು ಖಂಡಿಸುವ ಭರದಲ್ಲಿ ಕೆಲವು ಸಂಘಟನೆಗಳು ಪತ್ರಕರ್ತರಿಗೆ ಬೆದರಿಕೆವೊಡ್ಡುವ, ಹಲ್ಲೆ ನಡೆಸುವ ಪ್ರಕರಣಗಳು ಅಲ್ಲಲ್ಲಿ ನಡೆದಿದ್ದು, ಈ ಧಮನಕಾರಿ ನೀತಿಯನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ #SWJA ತೀವ್ರವಾಗಿ ಖಂಡಿಸುತ್ತದೆ.

ಈ ಸಂಬಂಧವಾಗಿ ಹೇಳಿಕೆ ನೀಡಿರುವ, ಸಂಘದ ಅಧ್ಯಕ್ಷ ಕೆ. ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವೈದ್ಯ, ನಗರ ಕಾರ್ಯದರ್ಶಿ ವಿ. ಟಿ. ಅರುಣ್ ಹಾಗೂ ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್ ಸೇರಿದಂತೆ ಕಾರ್ಯಕಾರಿ ಮಂಡಳಿ ಸದಸ್ಯರು, ಪತ್ರಕರ್ತರು ಪೂರ್ವಾಗ್ರಹ ಪೀಡಿತರಾಗಿ ಕಾರ್ಯನಿರ್ವಹಿಸುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ಹರ್ಷ ಹತ್ಯೆಯ ಬೆನ್ನಲ್ಲೆ ನಡೆದ ಘಟನಾವಳಿಗಳಿಂದ ಪ್ರಕ್ಷುಬ್ದಗೊಂಡಿರುವ ಶಿವಮೊಗ್ಗದಲ್ಲಿ ಮತೀಯ ಶಕ್ತಿಗಳು ಶಾಂತಿ – ಸೌಹಾರ್ದತೆ ಬಯಸುವ ಪತ್ರಕರ್ತರನ್ನು ಗುರಿಯಾಗಿಸಿಕೊಂಡು ಬೆದರಿಕೆ ಹಾಕುವ ಆತಂಕಕಾರಿ ಬೆಳವಣಿಗೆಗಳು ನಡೆಯಲಾರಂಭಿಸಿವೆ ಎಂದಿದ್ದಾರೆ.

Also read: ಫೆ.25ರಂದು ವಿಶ್ವವಿದ್ಯಾಲಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ

ಹರ್ಷನ ಶವ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟದಲ್ಲಿ ತೊಡಗಿದ್ದವರ ಪೋಟೋ ಚಿತ್ರೀಕರಣ ಮಾಡುತ್ತಿದ್ದ ಪ್ರಜಾವಾಣಿ ಹಿರಿಯ ವರದಿಗಾರ ಚಂದ್ರಹಾಸ ಹಿರೇಮಳಲಿ, ಪತ್ರಕರ್ತ ಬಿ. ರೇಣುಕೇಶ್ ಅವರ ಮೊಬೈಲ್ ಮತ್ತು ಕ್ಯಾಮರಾಗಳನ್ನು ಮೆರವಣಿಗೆಯಲ್ಲಿದ್ದ ಗುಂಪೊಂದು ಕಿತ್ತುಕೊಳ್ಳಲು ಯತ್ನಿಸಿತ್ತು. ಇದೇ ಸಂದರ್ಭದಲ್ಲಿ ಪೊಟೋ ಜರ್ನಲಿಸ್ಟ್ ನಿಂಗನಗೌಡ, ಮತ್ತು ವರದಿಗಾರ ರಫೀಕ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಹರ್ಷ ಹತ್ಯೆ ಖಂಡಿಸಿ ತೀರ್ಥಹಳ್ಳಿಯಲ್ಲಿ ಬಜರಂಗದಳ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಬಹಿರಂಗವಾಗಿ ಪತ್ರಕರ್ತರಿಗೆ ಬೆದರಿಕೆ ಹಾಕಲಾಗಿದೆ. ಸ್ಥಳೀಯ ’ಛಲಗಾರ’ ಪತ್ರಿಕೆಯ ಸಂಪಾದಕ ನಿಶಾಂತ್ ಸೇರಿದಂತೆ ಹಲವಾರು ವರದಿಗಾರರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ಹಾಕುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನಗಳು ನಡೆದಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸುವ ನಿಟ್ಟಿನಲ್ಲಿ ನಿಷ್ಪಕ್ಷಪಾತವಾಗಿ ವರದಿ ಮಾಡುವ ಪತ್ರಕರ್ತರನ್ನೆ, ಸುದ್ದಿ ಮಾಧ್ಯಮಗಳನ್ನು ನಿರ್ದಿಷ್ಟವಾಗಿ ಗುರಿ ಮಾಡಿ ಹಲ್ಲೆ ನಡೆಸಿರುವುದು, ಬೆದರಿಕೆ ಹಾಕುತ್ತಿರುವುದು ಅತ್ಯಂತ ಖಂಡನೀಯ. ಈ ಘಟನಾವಳಿಗಳನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ ಎಂದಿದ್ದಾರೆ.

Also read: ಉತ್ತರಾಧಿ ಮಠದಿಂದ ಹರ್ಷ ಕುಟುಂಬಕ್ಕೆ ಆರ್ಥಿಕ ನೆರವು: ಸಾಂತ್ವಾನ



ತೀರ್ಥಹಳ್ಳಿಯ ಛಲಗಾರ ಪತ್ರಿಕೆ ಸಂಪಾದಕ ನಿಶಾಂತ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿ ಜೀವ ಬೆದರಿಕೆ ಒಡ್ಡುತ್ತಿರುವವರ ಮತ್ತು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದವರ ವಿರುದ್ದ ತಕ್ಷಣವೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಗೃಹ ಸಚಿವರು ಈ ನಿಟ್ಟಿನಲ್ಲಿ ಗಮನಹರಿಸಿ, ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ಕ್ರಮ ವಹಿಸಬೇಕು. ಹಾಗೂ ಬೆದರಿಕೆವೊಡ್ಡುವವರು, ಹಲ್ಲೆಕೋರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮನವಿ ಮಾಡಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: AAP MLA disqualificationBajarangadala activist Harsha murderKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsNews in KannadaNews KannadaShimogaShivamoggaShivamogga NewsSWJAಬಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಫೆ.25ರಂದು ವಿಶ್ವವಿದ್ಯಾಲಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ

Next Post

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರ್ಷನ ಕುಟುಂಬಕ್ಕೆ 10ಲಕ್ಷ ರೂ. ನೆರವು: ಸಚಿವ ಅಶ್ವತ್ಥನಾರಾಯಣ ಘೋಷಣೆ

kalpa News

kalpa News

Next Post
ಆಧುನಿಕ ತಂತ್ರಜ್ಞಾನಗಳೊಂದಿಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ವಿವಿ ಸ್ಥಾಪನೆ: ಸಚಿವ ಅಶ್ವತ್ಥನಾರಾಯಣ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರ್ಷನ ಕುಟುಂಬಕ್ಕೆ 10ಲಕ್ಷ ರೂ. ನೆರವು: ಸಚಿವ ಅಶ್ವತ್ಥನಾರಾಯಣ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL