No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಲೋಕ್ ಅದಾಲತ್ ನ ಉಪಯೋಗ ಪಡೆದುಕೊಳ್ಳಿ: ನ್ಯಾ.ಮುಸ್ತಫಾ ಹುಸೇನ್ ಸಲಹೆ

kalpa News by kalpa News
September 28, 2021
in ಶಿವಮೊಗ್ಗ
0
ಲೋಕ್ ಅದಾಲತ್ ನ ಉಪಯೋಗ ಪಡೆದುಕೊಳ್ಳಿ: ನ್ಯಾ.ಮುಸ್ತಫಾ ಹುಸೇನ್ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ಕಟ್ಟಕಡೆಯ ವ್ಯಕ್ತಿಗೂ ಕಾನೂನು ಅರಿವು, ನೆರವು ಮತ್ತು ಶೀಘ್ರನ್ಯಾಯವನ್ನು ದೊರಕಿಸಬೇಕೆಂದ ಉದ್ದೇಶದಿಂದ ಸಮಾಜದ ಕೊಂಡಿಯಾಗಿರುವ ಅಂಚೆ ಇಲಾಖೆ ಸಹಯೋಗದೊಂದಿಗೆ ಜನಸಾಮಾನ್ಯರಿಗೆ ಮಾಹಿತಿ ತಲುಪಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎಲ್ಲರ ಸಹಕಾರದಿಂದ ಇದು ಯಶಸ್ಸು ಕಾಣಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಮುಸ್ತಫಾ ಹುಸೇನ್.ಎಸ್.ಎ ಹೇಳಿದರು.


ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಅಂಚೆ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಮುಖ್ಯ ಅಂಚೆ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾನೂನು ಸೇವೆಗಳ ಪ್ರಾಧಿಕಾರದ ಉದ್ದೇಶ ಹಾಗೂ ಲೋಕ್ ಅದಾಲತ್‍ನಿಂದ ಆಗುವ ಪ್ರಯೋಜನೆಗಳ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸುವ ಭಿತ್ತಿಪತ್ರಗಳ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ರಾಜ್ಯ ನೀತಿಯ ನಿರ್ದೇಶಕ ತತ್ವವು ಜನಸಾಮಾನ್ಯರಿಗೆ ಕಾನೂನಿನ ಅರಿವು-ನೆರವು ನೀಡುವಂತೆ ಸೂಚಿಸಿದ್ದು, ಇದೇ ಉದ್ದೇಶದಿಂದ 1987 ರಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ರಚಿತವಾಗಿ ಜನ ಸಾಮಾನ್ಯರಿಗೆ ಉಚಿತ ಕಾನೂನು ಅರಿವು ಮತ್ತು ನೆರವು ಹಾಗೂ ಶೀಘ್ರ ನ್ಯಾಯದಾನ ಒದಗಿಸಲಾಗುತ್ತಿದೆ. ಜನ ಸಾಮಾನ್ಯರಿಗೆ ಕಾನೂನು ಬಗ್ಗೆ ಅರಿವನ್ನುಟು ಮಾಡಿ ಉಚಿತ ಕಾನೂನು ನೆರವು ಮತ್ತು ಸಲಹೆ ನೀಡುವುದು ಹಾಗೂ ಲೋಕ್ ಅದಾಲತ್ ಮೂಲಕ ನ್ಯಾಯಾಲಯದಲ್ಲಿ ಅಥವಾ ಇತರೆ ಕಚೇರಿಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗುತ್ತಿದ್ದು ಜನರು ಇದರ ಉಪಯೋಗ ಪಡೆಯಬೇಕು ಎಂದರು.

ನಾಲ್ಸಾ ಮೊಬೈಲ್ ಆಪ್ ಮೂಲಕ ಸಹಾಯ :
ಇದೀಗ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನು ಅರಿವು ಮತ್ತು ಇದರ ಉಚಿತ ಸೌಲಭ್ಯಗಳು ತಲುಪಬೇಕೆಂಬ ಉದ್ದೇಶದಿಂದ ರಾಷ್ಟ್ರಾದ್ಯಂತ ಅಂಚೆ ಇಲಾಖೆಯ ಸಹಯೋಗದೊಂದಿಗೆ ಈ ಬಗ್ಗೆ ಮಾಹಿತಿ ನೀಡುತ್ತಿದೆ. ಪ್ರತಿ ಅಂಚೆ ಕಚೇರಿಗಳಲ್ಲಿ ಭಿತ್ತಿಪತ್ರ ಮೂಲಕ ಕಾನೂನು ಸೇವಾ ಪ್ರಾಧಿಕಾರ ಮತ್ತು ಲೋಕ ಅದಾಲತ್ ಕುರಿತು ಮಾಹಿತಿ ಹಾಗೂ ಸಮಾಜದ ಸಂಪರ್ಕ ಸೇತುವಾಗಿರುವ ಪೋಸ್ಟ್‍ಮ್ಯಾನ್‍ಗಳಿಗೆ ನಾಲ್ಸಾ ಮೊಬೈಲ್ ಆಪ್ಯ್ (NALSA mobile app) ನೀಡಿ, ಅವರ ಮೂಲಕ ಅಗತ್ಯವಿರುವವರಿಗೆ ಪ್ರಾಧಿಕಾರದ ಸೌಲಭ್ಯಗಳ ಕುರಿತು ಮಾಹಿತಿ ಒದಗಿಸುವ ಪ್ರಯತ್ನ ಮಾಡುತ್ತಿದೆ. ಪೋಸ್ಟ್‍ಮ್ಯಾನ್‍ಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಆಪ್ಯ್‍ನ್ನು ಡೌನ್‍ಲೋಡ್ ಮಾಡಿಕೊಂಡು ತರಬೇತಿ ಪಡೆದು ಹಳ್ಳಿ ಹಳ್ಳಿ, ಬೀದಿ ಬೀದಿಗಳಲ್ಲಿ ಈ ಅರಿವನ್ನು ಹಂಚಬೇಕೆಂದು ಕರೆ ಅವರು ನೀಡಿದರು.

ಪ.ಜಾ, ಪ.ಪಂ ಸೇರಿದದವರು, ಮಾನಸಿಕ ಇತರೆ ನ್ಯೂನ್ಯತೆ ಹೊಂದಿರುವವರು, ಮಹಿಳೆಯರು, ಮಕ್ಕಳು, ಸಂತ್ರಸ್ತರು, ದೌರ್ಜನ್ಯಕ್ಕೊಳಗಾದವರು, ವಾರ್ಷಿಕ ಆದಾಯ ರೂ.3 ಲಕ್ಷದೊಳಗೆ ಇರುವವರು ಹಾಗೂ ಇತರೆ ಯಾವುದೇ ಕಾನೂನಿನ ಅಡಿಯಲ್ಲಿ ಉಚಿತ ಕಾನೂನು ಸಲಹೆ ಮತ್ತು ನೆರವನ್ನು ಪಡೆಯಲು ಅರ್ಹ ವ್ಯಕ್ತಿಗಳು ತಮ್ಮ ಸಮೀಪದ ನ್ಯಾಯಾಲಯದ ಆವರಣದಲ್ಲಿರುವ ತಾಲ್ಲೂಕು ಸೇವಾ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಉಚಿತ ಕಾನೂನು ಸಲಹೆ ಮತ್ತು ನೆರವನ್ನು ಪಡೆಯಬಹುದು. ಹಾಗೂ ಪ್ರಾಧಿಕಾರದ ಟೋಲ್‍ಫ್ರೀ ಸಂಖ್ಯೆ : 1800-425-90900 ಅತವಾ 080-22111730 ಗೆ ಕರೆ ಮಾಡಿ ಉಚಿತ ಕಾನೂನು ಸಲಹೆ ಮತ್ತು ನೆರವನ್ನು ಪಡೆಯಬಹುದು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಕೆ.ಎನ್. ಪ್ರಾಸ್ತಾವಿಕವಾಗಿ ಮಾತನಾಡಿ, ನವದೆಹಲಿಯ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಹೋಬಳಿ ಮಟ್ಟದಿಂದ ಹಿಡಿದು ಎಲ್ಲ ಅಂಚೆ ಇಲಾಖೆಗಳಲ್ಲಿ ಕಾನೂನು ಸೇವಾ ಪ್ರಾಧಿಕಾರದಲ್ಲಿ ದೊರೆಯುವ ಸೌಲಭ್ಯಗಳನ್ನು ತಿಳಿಸುವ ಭಿತ್ತಿಪತ್ರ ಪ್ರದರ್ಶನ ಹಾಗೂ ಪೋಸ್ಟ್‍ಮ್ಯಾನ್‍ಗಳಿಗೆ ನಾಲ್ಸಾ(ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ) ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ತಮ್ಮ ಗಮನಕ್ಕೆ ಬರುವ ಅಗತ್ಯವಿರುವವರಿಗೆ ಉಚಿತ ಕಾನೂನು ನೆರವು ಹಾಗೂ ಕಾನೂನು ಸೇವಾ ಪ್ರಾಧಿಕಾರಗಳಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಲ್ಲರೂ ಇದರ ಸದುಪಯೋಗ ಪಡೆಯಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಅಂಚೆ ಇಲಾಖೆ ಅಧೀಕ್ಷಕ ಜಿ. ಹರೀಶ್ ಮಾತನಾಡಿ, ನಮ್ಮ ಪೋಸ್ಟ್‍ಮ್ಯಾನ್‍ಗಳು ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದು ಅವರಿಗೆ ಸಮುದಾಯಗಳಲ್ಲಿನ ಸಮಸ್ಯೆಗಳ ಅರಿವು ಇರುತ್ತದೆ. ಇದೀಗ ರಾಷ್ಟ್ರೀಯ ಸೇವಾ ಕಾನೂನು ಪ್ರಾಧಿಕಾರದಿಂದ ಹೆಚ್ಚುವರಿಯಾಗಿ ನೀಡಿರುವ ಈ ಜವಾಬ್ದಾರಿಯನ್ನು ಸಹ ಅವರು ಉತ್ತಮವಾಗಿ ನಿರ್ವಹಿಸಲಿದ್ದಾರೆಂಬ ಭರವಸೆ ಇದೆ ಎಂದ ಅವರು ನಮ್ಮ ಜಿಲ್ಲೆಯಲ್ಲಿ 1500 ಸಿಬ್ಬಂದಿಗಳು ಇದ್ದು, ಹೆಚ್ಚಿನ ಸಂಖ್ಯೆಯ ಸಿಬ್ಬಂದಿಗಳು ಕಾನೂನು ಸೇವಾ ಪ್ರಾಧಿಕಾರದಿಂದ ನೀಡುವ ಮೊಬೈಲ್ ಆಪ್ಯ್ ಡೌನ್‍ಲೋಡ್ ಮಾಡಿಕೊಂಡು, ತರಬೇತಿ ಪಡೆಯಲು ಸಹಕರಿಸುವುದಾಗಿ ತಿಳಿಸಿದರು.

ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್.ದೇವೇಂದ್ರಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಧಾನ ಅಂಚೆ ಕಚೇರಿ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KanandaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಲೋಕ್ ಅದಾಲತ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಕ್ಟೋಬರ್ 30ರಂದು ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ…

Next Post

ಹಿರಿಯ ಮಾಧ್ಯಮ ತಜ್ಞ ಶೇಷಚಂದ್ರಿಕ ಅವರಿಗೆ ಪಾಟೀಲ ಪುಟ್ಟಪ್ಪ ದತ್ತಿ ಪ್ರಶಸ್ತಿ

kalpa News

kalpa News

Next Post
ಹಿರಿಯ ಮಾಧ್ಯಮ ತಜ್ಞ ಶೇಷಚಂದ್ರಿಕ ಅವರಿಗೆ ಪಾಟೀಲ ಪುಟ್ಟಪ್ಪ ದತ್ತಿ ಪ್ರಶಸ್ತಿ

ಹಿರಿಯ ಮಾಧ್ಯಮ ತಜ್ಞ ಶೇಷಚಂದ್ರಿಕ ಅವರಿಗೆ ಪಾಟೀಲ ಪುಟ್ಟಪ್ಪ ದತ್ತಿ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL