ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ತಿರುಪತಿ ಚೆನ್ನೈ ಎಕ್ಸ್ಪ್ರೆಸ್ ರೈಲಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ Minister Narayana Gowda ಅವರು ಹಾಗೂ ಸಂಸದ ಬಿ.ವೈ. ರಾಘವೇಂದ್ರ MP Raghavendra ಹಸಿರು ನಿಶಾನೆ ತೋರಿಸಿದರು.
ಶಿವಮೊಗ್ಗದಿಂದ ವಾರದಲ್ಲಿ ಎರಡು ಬಾರಿ ತಿರುಪತಿ, ಚೆನ್ನೈಗೆ ತೆರಳಲಿದೆ. ಇದರಿಂದ ತಿರುಪತಿಗೆ ನೇರವಾಗಿ ತೆರಳಲು ಈ ರೈಲು ಅನುಕೂಲವಾಗಲಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಶಿವಮೊಗ್ಗ ದೇಶದಲ್ಲೇ ವೇಗವಾಗಿ ಬೆಳೆಯುತ್ತಿರುವ ನಗರ, ಹಾಗಾಗಿ ಈ ರೈಲು ಸೇವೆ ಆರಂಭಿಸಿರುವುದರಿಂದ ಶಿವಮೊಗ್ಗ ಮಾತ್ರವಲ್ಲದೇ ಸುತ್ತಮುತ್ತಲಿನ ಜಿಲ್ಲೆಗಳ ಸಾವಿರಾರು ಜನರಿಗೆ ಅನುಕೂಲವಾಗಲಿದೆ ಎಂದು ಸಚಿವ ಡಾ. ನಾರಾಯಣಗೌಡ ಅವರು ಹೇಳಿದರು.
ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ, ಸೂಡಾ ಅಧ್ಯಕ್ಷ ನಾಗರಾಜ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post