ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ #INDIA ಒಕ್ಕೂಟ ಯಾವುದೇ ಕಾರಣಕ್ಕೂ ಟೇಕಾಫ್ ಆಗುವುದಿಲ್ಲ. ಮೋಡಿ (ಮೋದಿ) ಪ್ರಧಾನಿಯಾವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ #Annamalai ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಂಡಿಯಾ ಒಕ್ಕೂಟದ ಅನೇಕ ಸದಸ್ಯರುಗಳಲ್ಲಿಯೇ ಹೊಂದಾಣಿಕೆ ಇಲ್ಲವಾಗಿದೆ. ಕೇರಳ ರಾಜ್ಯದಲ್ಲಿ ಈಗಾಗಲೇ ಜಗಳ ಪ್ರಾರಂಭವಾಗಿದೆ. ಸಿಪಿಐ, ಕಾಂಗ್ರೆಸ್ ನಾಯಕರ ನಡುವೆ ಕಿತ್ತಾಟ ಶುರುವಾಗಿದೆ. ರಾಹುಲ್ ಗಾಂಧಿ #Rahul Gandhi ಬಂಧನವಾಗುವ ಬಗ್ಗೆಯೇ ಮಾತುಕತೆಯಾಗುತ್ತಿದೆ. ತಮಿಳುನಾಡಿನಲ್ಲಿ ಬಿಜೆಪಿ ತನ್ನ ಖಾತೆ ತೆರೆಯಲಿದೆ. ಆಂಧ್ರಪ್ರದೇಶದಲ್ಲೂ ಕೂಡ ಕಾಂಗ್ರೆಸ್ ಗೆ ಮಹತ್ವವಿಲ್ಲವಾಗಿದೆ. ಈ ಎಲ್ಲಾ ಕಾರಣಗಳಿಂದ ಇಂಡಿಯಾ ಒಕ್ಕೂಟ ಟೇಕಾಫ್ ಆಗಲು ಸಾಧ್ಯವೇ ಇಲ್ಲ ಎಂದರು.

Also read: ಮೋದಿ ಮಾಡಿರುವ ಸೇವೆಯ ಕೂಲಿಯಾಗಿ ಮತ ಹಾಕಿ | ಅಣ್ಣಾಮಲೈ ಕರೆ
ಬರ ಪರಿಹಾರದ ಬಗ್ಗೆ ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಮೋಸ ಮಾಡಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಆದರೆ, ಬರ ಪರಿಹಾರವಾಗಲಿ, ನೆರೆ ಪರಿಹಾರವಾಗಲಿ ಅದನ್ನು ನೀಡಲು ಕೇಂದ್ರ ಸರ್ಕಾರಕ್ಕೆ ತನ್ನದೇ ಇತಿ ಮಿತಿಗಳಿವೆ. ಎಸ್.ಡಿ.ಆರ್.ಎಫ್. ಮತ್ತು ಎನ್.ಡಿ.ಆರ್.ಎಫ್. ಗಳ ಮೂಲಕ ಅದನ್ನು ನೀಡಬೇಕಾಗುತ್ತದೆ. ಹಾಗೆ ನೋಡಿದರೆ ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯಗಳಿಗೂ ಹಣ ನೀಡಿಲ್ಲ. ನೆರವು ಕೇಳಲು ಸ್ನೇಹಿತನ ತರಹ ಹೋಗಬೇಕೆ ವಿನಹ ಪ್ರತಿಭಟನೆಯ ಮೂಲಕ ಅಲ್ಲ. ಈಗಾಗಲೇ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಹಣ ನೀಡಲು ಒಪ್ಪಿದೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅದು ಮುಂದಕ್ಕೆ ಹೋಗಿದೆ ಅಷ್ಟೇ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post