ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ 2025-26 ನೇ ಸಾಲಿನ ಪಿಯು ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹೆಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ.
ಬಾಲಕರ ಖೋಖೋ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ, ಕಬ್ಬಡಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಉದ್ದ ಜಿಗಿತ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಶರತ್ ದ್ವಿತೀಯ ಸ್ಥಾನ, ಎತ್ತರ ಜಿಗಿತ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಸುಮಂತ್ ತೃತೀಯ ಸ್ಥಾನ, ಪೋಲೋ ವಾಲ್ಟ್ ನಲ್ಲಿ ವಿದ್ಯಾರ್ಥಿ ಶ್ರೀನಿವಾಸ ಪ್ರಥಮ ಸ್ಥಾನ, ಅಡೆತಡೆ ಮತ್ತು ಉದ್ದ ಜಿಗಿತ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಚಿತ್ರಲೇಖ ತೃತೀಯ ಸ್ಥಾನ, ಗುಂಡು ಎಸೆತದಲ್ಲಿ ವಿದ್ಯಾರ್ಥಿ ಧನುಷ್ ಪ್ರಥಮ ಸ್ಥಾನ ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಅಂಜನಾಮೂರ್ತಿ, ದೈಹಿಕ ಶಿಕ್ಷಣ ಉಪನ್ಯಾಸಕಿ ಶೀಲಾ ಸೇರಿದಂತೆ ಸಿಬ್ಬಂದಿ ವರ್ಗ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post