ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಒಂದು ರಸ್ತೆ ಬದಿಗೆ ಪಲ್ಟಿಯಾಗಿದ್ದು, ಅದರಲ್ಲಿದ್ದ ಪೆಟ್ರೋಲ್ ತುಂಬಿಸಿಕೊಳ್ಳಲು ಜನರು ಮುಗಿಬಿದ್ದ ಘಟನೆ ಇಂದು ನಡೆದಿದೆ.
ಶಿವಮೊಗ್ಗದಿಂದ ಚನ್ನಗಿರಿ ಕಡೆಗೆ ತೆರಳುತಿದ್ದ ಟ್ಯಾಂಕರ್ ಜಾವಳ್ಳಿ ಬಳಿ ಪಲ್ಟಿಯಾಗಿದೆ. ಪರಿಣಾಮವಾಗಿ ಇದರಲ್ಲಿದ್ದ ಪೆಟ್ರೋಲ್ ಸೋರಿಕೆಯಾಗಿ ಹರಿಯುತ್ತಿತ್ತು. ಈ ವಿಷಯ ತಿಳಿದ ಅಕ್ಕಪಕ್ಕದ ಜನ ಪೆಟ್ರೋಲ್ ತುಂಬಿಸಿಕೊಳ್ಳಲು ಮುಗಿಬಿದ್ದಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಮಿಸಿರುವ ಪೊಲೀಸರು ಜನರನ್ನು ಚದುರಿಸಿ, ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.
Also read: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಶಾಸಕ ಖಾಶೆಂಪುರ್ ಮನವಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post