Friday, September 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿಕ್ಷಕರು ಭಾರತೀಯ ಶ್ರೇಷ್ಟ ಸಂಸ್ಕೃತಿಯ ಕುರಿತು ಮಕ್ಕಳಿಗೆ ತಿಳಿಸಿ: ಶಾಸಕ ಈಶ್ವರಪ್ಪ

September 5, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿಕ್ಷಕ ನಮ್ಮೆಲ್ಲರ ಗುರು. ದೇಶದ ಉದ್ದಾರಕರಾದ ಅವರು ಭಾರತೀಯ ಶ್ರೇಷ್ಟ ಸಂಸ್ಕøತಿಯ ಕುರಿತು ಮಕ್ಕಳಿಗೆ ತಿಳಿಸಬೇಕೆಂದು ಶಾಸಕ ಕೆ.ಎಸ್.ಈಶ್ವರಪ್ಪ MLA Eshwarappa ನುಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಕ್ಷಕರು ಎಲ್ಲಿಯವರೆಗೆ ‘ನನ್ನ ಶಾಲೆ ನನ್ನ ಮನೆ’ ಎಂದು ಅರಿತುಕೊಳ್ಳುವುದಿಲ್ಲವೋ ಅಲ್ಲೀವರೆಗೆ ಅಲ್ಲಿ ಅಭಿವೃದ್ದಿ ಸಾಧ್ಯವಾಗುವುದಿಲ್ಲ. ಶಾಲೆಗಳಿಗೆ ಏನು ಬೇಕೆಂದು ಶಿಕ್ಷಕರು, ಎಸ್‍ಡಿಎಂಸಿ ಯವರು ಚರ್ಚಿಸಬೇಕು. ಜನಪ್ರತಿನಿಧಿಗಳ ಬಳಿ ತಿಳಿಸಬೇಕು. ಆಗ ಸುಧಾರಣೆ ಸಾಧ್ಯ. ಉದಾಹರಣೆಗೆ ನಗರದ ಕೆ.ಆರ್.ಪುರಂ ಶಾಲೆಯಲ್ಲಿ ಕಳೆದ ಸಾಲಿನಲ್ಲಿ ಮೂಲಭೂತ ಸೌಕರ್ಯದಿಂದ ಕೇವಲ 8 ಮಕ್ಕಳು ಇದ್ದರು. ಈಗ ಎಲ್ಲ ಮೂಲಭೂತ ಸೌಕರ್ಯದೊಂದಿಗೆ ಉತ್ತಮ ವ್ಯವಸ್ಥೆ ಸೃಷ್ಟಿಸಿರುವುದರಿಂದ ಪ್ರಸ್ತುತ 300 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

30 ವರ್ಷಗಳ ಹಿಂದೆ ಶಾಸಕನಾದಾಗ ನಗರದ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಇರಲಿಲ್ಲ. ಪ್ರಸ್ತುತ ನಗರದ 89 ಶಾಲೆಗಳಿಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡಲಾಗಿದೆ. ಇನ್ನೂ ಕೆಲವು ಶಾಲೆಗಳಿಗೆ ಒದಗಿಸಬೇಕಿದೆ. ಈ ವರ್ಷ ಸರ್ಕಾರದಿಂದ ಜಿಲ್ಲೆಗೆ 210 ಕೊಠಡಿಗಳು ಮಂಜೂರಾಗಿದ್ದು, ಇದೇ ವರ್ಷ ಇಷ್ಟು ಹೆಚ್ಚು ಕೊಠಡಿಗಳ ಮಂಜೂರಾತಿ ಆಗಿರುವುದು. ಸರ್ಕಾರ ಶಾಲೆಗಳ ಅಭಿವೃದ್ದಿಗೆ ಏನೇನು ಸೌಲಭ್ಯ ನೀಡಬೇಕೋ ಎಲ್ಲವನ್ನೂ ನೀಡುತ್ತಿದೆ. ಆದರೂ ಶಿಕ್ಷಕರಿಗೆ ಅನೇಕ ಸಮಸ್ಯೆಗಳಿವೆ. ಹಂತ ಹಂತವಾಗಿ ಇವುಗಳಿಗೆ ಪರಿಹಾರ ಕಂಡುಕೊಳ್ಳೋಣ. ನಿರಾಶರಾಗುವುದು ಬೇಡ. ಶಾಲೆಗಳ ಸುಧಾರಣೆ ಮತ್ತು ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಖಂಡಿತ ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಅತ್ಯುತ್ತಮ ಪ್ರಜೆಗಳನ್ನು ತಯಾರು ಮಾಡುವ ದೊಡ್ಡ ಜವಾಬ್ದಾರಿ ಹೊತ್ತಿರುವ ಶಿಕ್ಷಕರಿಗೆ ಪ್ರಸ್ತುತ ವೈಜ್ಞಾನಿಕ ಯುಗದಲ್ಲಿ ತಾವು ಅಪ್‍ಗ್ರೇಡ್ ಆಗಿ ಮಕ್ಕಳಿಗೆ ಶಿಕ್ಷಣ ನೀಡುವ ದೊಡ್ಡ ಸವಾಲು ಇದೆ. ಯಾವುದೇ ರೀತಿಯ ಬಡ್ತಿ ಇಲ್ಲದೇ ಒಂದೇ ಹುದ್ದೆಯಲ್ಲಿ ಪಾಠ ಹೇಳುವ ಶಿಕ್ಷಕರನ್ನು ಗುರುತಿಸುವ ಕೆಲಸ ಹಾಗೂ ಅವರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಸರ್ಕಾರದ್ದಾಗಿದೆ ಎಂದರು.

ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ ಮಾತನಾಡಿ, ಶಿಕ್ಷಕರು ರಾಷ್ಟ್ರ ನಿರ್ಮಾತೃಗಳು. ಸಜ್ಜನರ ಸೃಷ್ಟಿ ಶಿಕ್ಷಕರ ಕೈಯಲ್ಲಿದೆ. ಪ್ರಸ್ತುತ ನೂತನ ಶಿಕ್ಷಣ ನೀತಿ ಜಾರಿಗೆ ಬಂದಿದೆ. ಅದನ್ನು ಸ್ವಾಗತಿಸೋಣ. ಆದರೆ ಅದಕ್ಕೆ ತಕ್ಕುದಾದ ಮೂಲಭೂತ ಸೌಕರ್ಯ ಸೇರಿದಂತೆ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು. ಇಂದು ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಯೋಜನೆಗಳು, ಕಾರ್ಯಕ್ರಮಗಳನ್ನು ತಂದು ಹೆಚ್ಚುವರಿ ಶಿಕ್ಷಕರು, ಸಿಬ್ಬಂದಿ, ಪೂರಕ ವ್ಯವಸ್ಥೆ ಮಾಡದೇ ಇರುವ ಶಿಕ್ಷಕರ ಕೈಯಲ್ಲೇ ಎಲ್ಲ ಕೆಲಸ ಮಾಡಿಸುತ್ತಿದೆ. ಬಿಸಿಯೂಟ, ವಿದ್ಯಾರ್ಥಿವೇತನಗಳು, ಜನಗಣತಿ, ಚುನಾವಣೆ ಇನ್ನೂ ಹಲವಾರು ಕಾರ್ಯದಲ್ಲಿ ಶಿಕ್ಷಕರನ್ನೇ ಸಂಪೂರ್ಣವಾಗಿ ತೊಡಗಿಸುತ್ತಿದ್ದು, ಮಕ್ಕಳಿಗೆ ಪಾಠ ಹೇಳುವವರು ಯಾರು ಎಂಬಂತಾಗಿದೆ ಎಂದ ಅವರು ಶಾಸಕರು ಇತ್ತ ಗಮನ ಹರಿಸಬೇಕೆಂದು ಅವರ ಗಮನ ಸೆಳೆದರು.
ಶಿಕ್ಷಕರು ಪಾಠ ಮಾಡುವುದನ್ನು ಬಿಡಿಸಿ ಇತರೆ ಕೆಲಸಕ್ಕೆ ಹಚ್ಚುವ ಅವೈಜ್ಞಾನಿಕ ಸುತ್ತೋಲೆಗಳು ನಿಲ್ಲಬೇಕು. ಶಿಕ್ಷಕರಿಗೆ ಪಾಠ ಮಾಡಲು ಬಿಡಬೇಕು. ಪಠ್ಯ ಪುಸ್ತಕ ವಿತರಣೆಯಿಂದ ಹಿಡಿದು ಎನ್‍ಪಿಎಸ್(ನ್ಯೂ ಪೆನ್ಶನ್ ಸ್ಕೀಂ) ವರೆಗೆ ಗೊಂದಲಗಳಿವೆ. ಅದೇ ರೀತಿ ಸರ್ಕಾರಿ ಶಿಕ್ಷಕರಿಗೆ ದೊರೆಯುವ ಹೆರಿಗೆ ರಜೆ, ವೇತನ, ನಗದುರಹಿತ ಆರೋಗ್ಯ ಯೋಜನೆಯಂತಹ ಸೌಲಭ್ಯಗಳು ಅನುದಾನಿತ, ಖಾಸಗಿ ಶಾಲಾ ಶಿಕ್ಷಕರಿಗೂ ಲಭ್ಯವಾಗಬೇಕು. ಎಲ್ಲ ಶಿಕ್ಷಕರೂ ಸಮಾನರು. ಶಿಕ್ಷಕರ ವರ್ಗಾವಣೆ ವಿಷಯದಲ್ಲಿ ಅನೇಕ ಸಮಸ್ಯೆಗಳು, ಗೊಂದಲಗಳಿವೆ. ರಾಜಕಾರಣಿಗಳಿಗೇ ಓಪಿಎಸ್(ಓಲ್ಡ್ ಪೆನ್ಶನ್ ಸ್ಕೀಂ)ಇದ್ದು, ಈಗಿನ ಸರ್ಕಾರಿ ನೌಕರರಿಗೇಕೆ ಎನ್‍ಪಿಎಸ್? ನೌಕರರ ಹಕ್ಕಾದ ಪಿಂಚಣಿ ನೀಡಬೇಕು. ಪ್ರಸ್ತುತ ವ್ಯವಸ್ಥೆಯಲ್ಲಿ ಇರುವ ಹಲವಾರು ತಾರತಮ್ಯಗಳನ್ನು ಹೋಗಲಾಡಿಸಬೇಕಾದರೆ ಆಡಳಿತದಲ್ಲಿ ಸಂಚಲನ ಮೂಡಿಸುವ ಕೆಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

Also read: ಅವಧಿಗೂ ಮುನ್ನವೇ ಗರ್ಭಿಣಿಗೆ ಸಿಸೇರಿಯನ್: ಬೆಳೆಯದ ಭ್ರೂಣ ಕಂಡು ಮತ್ತೆ ಹೊಲಿಗೆ ಹಾಕಿದ ವೈದ್ಯರು

ವಿಧಾನ ಪರಿಷತ್ ಶಾಸಕರಾದ ಎಸ್.ರುದ್ರೇಗೌಡರು ಮಾತನಾಡಿ, ಪ್ರಸ್ತುತ ಶೇ.84 ಸಾಕ್ಷರತೆ ಸಾಧಿಸಿದ್ದೇವೆ. ಇದು ಶಿಕ್ಷಕರ ಕೊಡುಗೆಯಾಗಿದೆ. ಸಾಕ್ಷರ ಸಮಾಜದಲ್ಲಿ ಎಲ್ಲ ಚಟುವಟಿಕೆಗಳು ಪ್ರಜ್ಞಾಪೂರ್ವಕವಾಗಿ ನಡೆಯಲು ಸಾಧ್ಯ. ಆದ್ದರಿಂದ ಶಿಕ್ಷಣಕ್ಕೆ ಅತಿ ಹೆಚ್ಚು ಮಹತ್ವವಿದೆ. ಶಿಕ್ಷಕರ ಅನೇಕ ಸಮಸ್ಯೆಗಳಿದ್ದು ಅವುಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು ಎಂದರು.
ಚಿಕ್ಕಮಗಳೂರು ಜಿಲ್ಲೆಯ ಸಾಹಿತಿಗಳಾದ ಚಟ್ನಹಳ್ಳಿ ಮಹೇಶ್ ಶಿಕ್ಷಕರ ದಿನಾಚರಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು 28 ಶಿಕ್ಷಕರಿಗೆ ನೀಡಿ ಗೌರವಿಸಲಾಯಿತು.

ಡಿಡಿಪಿಐ ಪರಮೇಶ್ವರಪ್ಪ ಸಿ.ಆರ್ ಸ್ವಾಗತಿಸಿದರು. ಮಹಾನಗರಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಎನ್.ಜಿ.ನಾಗರಾಜ್, ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾದಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ,ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ.ಸಿದ್ದಬಸಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಕೆ.ದಿವಾಕರ, ಕ.ರಾ.ಪ್ರಾ.ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ.ಬಿ.ರುದ್ರಪ್ಪ, ದೈ.ಶಿ.ಶಿ ಸಂಘದ ಜಿಲ್ಲಾಧ್ಯಕ್ಷ ಅಂಜನಪ್ಪ, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ಎಂ.ವೈ.ಧರ್ಮಪ್ಪ, ಎಂ.ರವಿ, ರಾಘವೇಂದ್ರ ಸಿ.ಎಸ್, ಕಾಳಾನಾಯ್ಕ ಎಸ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ.ಪಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಬಸವರಾಜಪ್ಪ.ಬಿ.ಆರ್, ಜನಪ್ರತಿನಿಧಿಗಳು, ಅಧಿಕಾರಿಗಳು, ಶಿಕ್ಷಕರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಅವಧಿಗೂ ಮುನ್ನವೇ ಗರ್ಭಿಣಿಗೆ ಸಿಸೇರಿಯನ್: ಬೆಳೆಯದ ಭ್ರೂಣ ಕಂಡು ಮತ್ತೆ ಹೊಲಿಗೆ ಹಾಕಿದ ವೈದ್ಯರು

Next Post

150ಕ್ಕೂ ಹೆಚ್ಚು ಸ್ಥಾನ ಗಳಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ: ಶಾಸಕ ಈಶ್ವರಪ್ಪ ವಿಶ್ವಾಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

150ಕ್ಕೂ ಹೆಚ್ಚು ಸ್ಥಾನ ಗಳಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ: ಶಾಸಕ ಈಶ್ವರಪ್ಪ ವಿಶ್ವಾಸ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

2025ರ ಎನ್‌ಐಆರ್‌ಎಫ್ ರ‍್ಯಾಂಕಿಂಗ್ | ಟಾಪ್ 100ರಲ್ಲಿ ಕುವೆಂಪು ವಿಶ್ವವಿದ್ಯಾಲಯ

September 5, 2025

Shocking Injury, Stunning Recovery: Life Reclaimed After Brain Exposure

September 5, 2025

ಮುಂಜಾನೆ ಸುವಿಚಾರ | ಪ್ರಪಂಚದ ಜನರಿಗಾಗಿ ನಮ್ಮ ಮೂಲ ಸ್ವಭಾವ ಬದಲಾವಣೆ ಮಾಡಿಕೊಳ್ಳಬಾರದು

September 5, 2025

ವಿದ್ಯುತ್ ದುರಂತದಲ್ಲಿ ತೀವ್ರ ಮೆದುಳು ಗಾಯಗೊಂಡ ಯುವಕನಿಗೆ ಹೊಸ ಜೀವ ನೀಡಿದ ವೈದ್ಯ

September 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

2025ರ ಎನ್‌ಐಆರ್‌ಎಫ್ ರ‍್ಯಾಂಕಿಂಗ್ | ಟಾಪ್ 100ರಲ್ಲಿ ಕುವೆಂಪು ವಿಶ್ವವಿದ್ಯಾಲಯ

September 5, 2025

Shocking Injury, Stunning Recovery: Life Reclaimed After Brain Exposure

September 5, 2025

ಮುಂಜಾನೆ ಸುವಿಚಾರ | ಪ್ರಪಂಚದ ಜನರಿಗಾಗಿ ನಮ್ಮ ಮೂಲ ಸ್ವಭಾವ ಬದಲಾವಣೆ ಮಾಡಿಕೊಳ್ಳಬಾರದು

September 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!