ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಸಿಎ ವಿಭಾಗದ ವತಿಯಿಂದ ಜು.12 ರಂದು ಎಂಬಿಎ-ಎಂಸಿಎ ಸಭಾಂಗಣದಲ್ಲಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಟೆಕ್ ಕ್ರಂಚ್’ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಅಂದು ಬೆಳಗ್ಗೆ 10:00 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಜೀ ಕನ್ನಡದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸ್ಟಾಂಡ್ ಅಪ್ ಕಾಮಿಡಿಯನ್ ರಾಘವೇಂದ್ರ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್, ಉಪಾಧ್ಯಕ್ಷರಾದ ಸಿ.ಆರ್. ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ. ನಾರಾಯಣ್, ಖಜಾಂಚಿಗಳಾದ ಡಿ.ಜಿ. ರಮೇಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ.ಮಂಜುನಾಥ ಅಧ್ಯಕ್ಷತೆ ವಹಿಸಲಿದ್ದು, ಎಂಸಿಎ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ಪ್ರಭುದೇವ ಉಪಸ್ಥಿತರಿರುವರು.
Discussion about this post