ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಚಾಲಕ ಸೇರಿದಂತೆ ಹಲವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕುಂಸಿ ಬಳಿ ನಡೆದಿದೆ.
ಶಿಕಾರಿಪುರದಿಂದ ಶಿವಮೊಗ್ಗ ಹಾಗೂ ಶಿವಮೊಗ್ಗದಿಂದ ಶಿಕಾರಿಪುರ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 10ಕ್ಕೂ ಹೆಚ್ಚು ಜನ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಅಪಘಾತಕ್ಕೀಡಾದ ಬಸ್‌ಗಳಲ್ಲಿ 75-80 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.
ಗಾಯಗೊಂಡವರನ್ನು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಬಸ್ ಡಿಕ್ಕಿಯಾಗಿರುವ ರಭಸಕ್ಕೆ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ಬಸ್‌ಗಳನ್ನು ಬೇರ್ಪಡಿಸಲಾಗಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post