ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಮೇಲಿನ ಕುಂಚೇನಹಳ್ಳಿ ಬಳಿಯ ಕಲ್ಲಾಪುರದಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.
ಶಿವಮೊಗ್ಗದಿಂದ ಸವಳಂಗ ಕಡೆಗೆ ಹೊರಟಿದ್ದ ಬಲೆನೋ ಕಾರು ಹಾಗೂ ಸವಳಂಗ ಕಡೆಯಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಓರ್ವ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ದಾವಣಗೆರೆ ಮೂಲದವರು ಎನ್ನಲಾಗಿದ್ದು, ವಿವೇಕ್, ಕಾರ್ತಿಕ್ ಹಾಗೂ ಮೋಹನ್ ಎಂದು ಗುರುತಿಸಲಾಗಿದೆ.
ಗಾಯಾಳುವನ್ನು ರುದ್ರೇಶ್ ಪಾಟೀಲ್ ಎಂದು ತಿಳಿದುಬಂದಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿ ಪಕ್ಕದ ಹಳ್ಳಕ್ಕೆ ಬಿದ್ದಿರುವುದು ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post