ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶದ ಹೊರ ಭಾಗದಲ್ಲಿರುವ ಉಗ್ರರಿಗೆ ಬೆಂಬಲ ನೀಡುತ್ತಿರುವ ದೇಶದ ಒಳಗಿನ ಶತ್ರುಗಳಿಗೂ ಈಗ ನಡುಕ ಪ್ರಾರಂಭವಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಭಯೋತ್ಪಾದಕರ ಅಡಗುತಾಣಗಳನ್ನು ಧ್ವಂಸ ಮಾಡಿ ನೂರಕ್ಕೂ ಹೆಚ್ಚು ಉಗ್ರರ ಸಂಹಾರ ಮಾಡಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರ #Freedom fighters ಆತ್ಮಗಳಿಗೆ ಇದರಿಂದ ಶಾಂತಿ ಸಿಕ್ಕಿದೆ. ರಾಷ್ಟ್ರದ್ರೋಹಿಗಳು ಕೂಡ ಶೀಘ್ರದಲ್ಲೇ ಸೂಕ್ತ ಪಾಠ ಕಲಿಯುತ್ತಾರೆ ಎಂದರು.
ದೇಶದ ಜನ ನಮ್ಮ ಸೈನಿಕರ ಹೋರಾಟಕ್ಕೆ ಬೆಂಬಲಕ್ಕೆ ನಿಂತಿದ್ದಾರೆ. 26 ಜನ ಪ್ರವಾಸಿಗರನ್ನು ಉಗ್ರರು ಹತ್ಯೆ ಮಾಡಿದಾಗಲೇ ಇದು ಪಾಕಿಸ್ತಾನದ ನಾಶಕ್ಕೆ ಮೊದಲ ಹೆಜ್ಜೆ ಎಂದು ನಾನು ಹೇಳಿದ್ದೆ. ಅದು ಈಗ ನಿಜವಾಗಿದೆ. ಯಾವ ಕಾರಣಕ್ಕೂ ಭಯೋತ್ಪಾದನೆಗೆ ನಮ್ಮ ದೇಶದಲ್ಲಿ ಅವಕಾಶವಿಲ್ಲ ಎಂದು ಮೋದಿ ಸರ್ಕಾರ ಆಪರೇಷನ್ ಸಿಂಧೂರದ ಮೂಲಕ ತೋರಿಸಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















