ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿಮುಲ್ ಸದೃಢವಾಗಿ ಇರಲು ಪ್ರಾಥಮಿಕ ಹಾಲು ಉತ್ಪಾದಕ ಸಂಘಗಳು ಬಲಿಷ್ಠವಾಗಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಆರ್ ಎಂ ಮಂಜುನಾಥ ಗೌಡ ಅವರು ತಿಳಿಸಿದರು.
ಮಾಚೇನಹಳ್ಳಿಯ ಶಿಮುಲ್ #Shimul ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಹಾಗೂ ಸಹಕಾರ ಇಲಾಖೆ ಇವರ ಸಹಯೋಗದೊಂದಿಗೆ ಶಿವಮೊಗ್ಗ ಸಹಕಾರಿ ಜಿಲ್ಲಾ ಹಾಲು ಒಕ್ಕೂಟದ ಅಧಿಕಾರಿಗಳ ಮತ್ತು ಸಿಬ್ಬಂದಿಗಳಿಗೆ ಆಯೋಜಿಸಲಾಗಿದ ರಾಜ್ಯಮಟ್ಟದ ಒಂದು ದಿನದ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

Also read: ಕೃಷಿ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ ಅಗತ್ಯ: ಸಚಿವ ಮಧು ಬಂಗಾರಪ್ಪ
ತಾಲೂಕ್ ಕೇಂದ್ರಗಳಲ್ಲಿ ಸಣ್ಣ ಸಣ್ಣ ಕಾರ್ಯಾಗಾರಗಳನ್ನು ನಡೆಸುವ ಮೂಲಕ ಪ್ರಾಥಮಿಕ ಸಂಘಗಳ ಬಲಿಷ್ಠವಾಗಿಸುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆಗಳು ಕಾರ್ಪೋರೆಟ್ ಮಾದರಿಯಲ್ಲಿ ಸುಧಾರಣೆ ಆಗಬೇಕು ಸ್ಪರ್ಧಾತ್ಮಕ ಯುಗದಲ್ಲಿ ಒಕ್ಕೂಟ ಸದೃಢವಾಗಿ ಇರಲು ಸಹಕಾರಿಯಾಗುತ್ತದೆ. ಸಮಯಕ್ಕೆ ಸರಿಯಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವುದರ ಜೊತೆಗೆ ಮೌಲ್ಯಗಳ ಅಳವಡಿಸಿಕೊಂಡು ಪ್ರಮಾಣಿಕವಾಗಿ ಸೇವೆ ಸಲ್ಲಿಸಬೇಕು ಕೃಷಿ ಕಾರ್ಮಿಕರ ನೆರವು ಆಗಲು ಪ್ರಾಥಮಿಕ ಹಾಲು ಒಕ್ಕೂಟಗಳ ಭದ್ರ ಬುನಾದಿಯಾಗಿದ್ದು ಉತ್ತಮಗುಣ ಮಟ್ಟದ ಮತ್ತು ಪರಿಶುದ್ಧತೆಯನ್ನು ಕಾಪಾಡಿಕೊಂಡು ಇನ್ನೂ ಹೆಚ್ಚಿನ ಮಾರುಕಟ್ಟೆಗಳನ್ನು ಸೃಷ್ಠಿಸಬೇಕಾಗಿದೆ. ನಂದಿನ ಮಿಲ್ಕ್ ಪಾರ್ಲರ್ ಗಳು ಇಡೀ ರಾಜ್ಯಾದ್ಯಂತ ಕೇಂದ್ರಗಳನ್ನು ಹೊಂದಿದ್ದು ಶಿಮುಲ್ ವತಿಯಿಂದ ತೆರೆಯಲಾಗಿರುವ ಮಿಲ್ಕ್ ಪಾರ್ಲರ್‌ಗಳು ಗುಣಮಟ್ಟ ಪರಿಶೀಲಿಸಿ ಮೂರು ಜಿಲ್ಲೆಗಳಲ್ಲಿ 500ಕ್ಕೂ ಹೆಚ್ಚು ಕೇಂದ್ರವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸಹಕಾರ ಯೂನಿಯನ್ ಅಧ್ಯಕ್ಷರಾದ ಸುರೇಶ್ ವಾಟಗೋಡು, ಶಿಮುಲ್ ಅಧ್ಯಕ್ಷರಾದ ಹೆಚ್ .ಎನ್ ವಿದ್ಯಾಧರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಕೆ ಮರಿಯಪ್ಪ, ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕರಾದ ಡಿ.ಆನಂದ್, ಹೆಚ್ ಬಿ ದಿನೇಶ್ ,ಟಿ.ಎಸ್ ದಯಾನಂದ ಗೌಡ್ರು, ಎಸ್ ಕುಮಾರ್, ಯೂನಿಯನ್ ನಿರ್ದೇಶಕರಾದ ಡಿ.ಎಸ್ ಈಶ್ವರಪ್ಪ, ಕರಿಯಪ್ಪ, ನಿಖಿಲ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರಾದ ತೇಜವಮೂರ್ತಿ ಆರ್, ವ್ಯವಸ್ಥಾಪಕ ನಿರ್ದೇಶಕ ಎಸ್‌ಜಿ ಶೇಖರ್, ತರಬೇತಿ ಸಂಪನ್ಮೂಲ ವ್ಯಕ್ತಿ ಜಿ.ಕೆ ರಾಮಪ್ಪ, ಸಿಇಓ ಯಶವಂತ್ ಹಾಗೂ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post