ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಮಾಜಮುಖಿ ಚಟುವಟಿಕೆಗಳನ್ನು ನಿರಂತರವಾಗಿ ಮಾಡುತ್ತಿರುವ ರೋಟರಿ ಸಂಸ್ಥೆಯು ಸೇವಾ ಕ್ಷೇತ್ರದಲ್ಲಿ ಅಪಾರ ಕೊಡುಗೆ ಸಲ್ಲಿಸುತ್ತಿದೆ ಎಂದು ಅನುಷ್ಠಾನಾಧಿಕಾರಿ ಪಿಡಿಜಿ ಎಚ್.ಎಲ್. ರವಿ ಹೇಳಿದರು.
ನಗರದಲ್ಲಿ ಆಯೋಜಿಸಿದ್ದ ರೋಟರಿ ಕ್ಲಬ್ ಶಿವಮೊಗ್ಗ ರಿವರ್‌ಸೈಡ್ ಸಂಸ್ಥೆಯ ಪದಾಧಿಕಾರಿಗಳ ಪದಗ್ರಹಣ ಹಾಗೂ ಇನ್ನರ್‌ವ್ಹೀಲ್ ಕ್ಲಬ್ ರಿವರ್ಸೈಡ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಒದಗಿಸುವ ಕೆಲಸವನ್ನು ರೋಟರಿ ಸೇವಾ ಸಂಸ್ಥೆಗಳು ನಡೆಸುತ್ತಿವೆ. ನಿರಂತರ ಸೇವಾ ಚಟುವಟಿಕೆಗಳ ಮೂಲಕ ರೋಟರಿ ಸಂಸ್ಥೆಯು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ದೊಡ್ಡ ಸ್ಥಾನ ಪಡೆದಿದೆ ಎಂದು ತಿಳಿಸಿದರು.
ಪಲ್ಸ್ ಪೊಲಿಯೋ ಅಭಿಯಾನದಲ್ಲಿ ರೋಟರಿ ಸಂಸ್ಥೆ ಮಹತ್ತರ ಸೇವೆ ಸಲ್ಲಿಸಿತ್ತು. ರಕ್ತದಾನ ಶಿಬಿರಗಳನ್ನು ನಿರಂತರವಾಗಿ ಆಯೋಜಿಸುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಕೈ ಜೋಡಿಸಿದೆ. ಗ್ರಾಮೀಣ ಪ್ರದೇಶಗಳ ಶಾಲೆಗಳಿಗೆ ಮೂಲಸೌಕರ್ಯದ ವ್ಯವಸ್ಥೆ ಮಾಡುತ್ತಿದೆ ಎಂದರು.
ರೋಟರಿ ಕ್ಲಬ್ ಶಿವಮೊಗ್ಗ ರಿವರ್‌ಸೈಡ್ ಅಧ್ಯಕ್ಷರಾಗಿ ಆರ್. ದೇವೆಂದ್ರಪ್ಪ, ಕಾರ್ಯದರ್ಶಿಯಾಗಿ ಮಂಜು ಕರ್ನಲ್ಲಿ ಅವರು ಅಧಿಕಾರ ವಹಿಸಿಕೊಂಡರು. ಇನ್ನರ್‌ವ್ಹೀಲ್ ರಿವರ್‌ಸೈಡ್ ಕ್ಲಬ್ ಅಧ್ಯಕ್ಷರಾಗಿ ಸಹನಾ ಸತೀಶ್ ಮತ್ತು ಕಾರ್ಯದರ್ಶಿಯಾಗಿ ಗಾಯತ್ರಿ ಮಂಜು ಕರ್ನಲ್ಲಿ ಅಧಿಕಾರ ವಹಿಸಿಕೊಂಡರು.
Also read: ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ: ಸಚಿವ ಸಿ. ಸಿ. ಪಾಟೀಲ್
ಇದೇ ಸಂದರ್ಭದಲ್ಲಿ ರೋಟರಿ ದರ್ಶನ್ ಅವರ ಕೊಡುಗೆಯಿಂದ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಯೂನಿಫಾರಂ ವಿತರಣೆ ಮಾಡಲಾಯಿತು.
ರೋಟರಿ ಸಹಾಯಕ ಗವರ್ನರ್ ಸುನೀತಾ ಶ್ರೀಧರ್, ಜೋನಲ್ ಲೆಪ್ಟಿನೆಂಟ್ ವಾದಿರಾಜ, ಮಾಜಿ ಸಹಾಯಕ ಗವರ್ನರ್ ಎಂ.ಪಿ. ಆನಂದಮೂರ್ತಿ, ಜಿ. ವಿಜಯ್‌ಕುಮಾರ್, ಮಾಜಿ ಜೋನಲ್ ಲೆಫ್ಟಿನೆಂಟ್ ಕೆ.ಪಿ.ಶೆಟ್ಟಿ ಹಾಗೂ ರೋಟರಿ ಕ್ಲಬ್‌ನ ಎಲ್ಲ ಸದಸ್ಯರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post