ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಒಂದು ಕಾಲದಲ್ಲಿ ಏನು ಇಲ್ಲದ ಸಮಯದಲ್ಲಿ ಪಕ್ಷ ಕಟ್ಟಲು ಸಹಾಯ ಮಾಡಿದ ಸಮುದಾಯ ಎಂದರೆ ಗೌಡ ಸರಸ್ವತ ಸಮಾಜ. ಬಿ.ಎಸ್. ಯಡಿಯೂರಪ್ಪ ಅವರು ಕೊನೆಯ ಕ್ಯಾಬಿನೆಟ್‌ನಲ್ಲಿ ಆರ್ಥಿಕವಾಗಿ ಹಿಂದುಳಿದ ವಿವಿಧ ಸಮಾಜದ ಬಂಧುಗಳಿಗೆ ಶೇ.10ರಷ್ಟು ಮೀಸಲಾತಿಯನ್ನು ಜಾರಿಗೆ ತಂದಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ಶಿವಮೊಗ್ಗ ಜಿಲ್ಲಾ ಗೌಡ ಸಾರಸ್ವತ ಸಮಾಜ ಒಕ್ಕೂಟದ ವತಿಯಿಂದ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದೇವೆ. ಕೋವಿಡ್ ಸಂಕಷ್ಟದ ಸಮಯದಲ್ಲೂ ಕೂಡ ನಮ್ಮ ಶಿವಮೊಗ್ಗಕ್ಕೆ ಯಾವುದೇ ಹಣಕಾಸಿನ ಸಮಸ್ಯೆಯಾಗಿಲ್ಲ. ಮುಂದಿನ ದಿನದಲ್ಲಿ ವಿವಿಧ ಕಾಮಗಾರಿಗಳು ಪೂರ್ಣಗೊಳ್ಳುವ ಸಮಯ ಹತ್ತಿರ ಬಂದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಮೇಯರ್ ಸುನೀತಾ ಅಣ್ಣಪ್ಪ, ಜಿಲ್ಲಾ ಗೌರವ ಅಧ್ಯಕ್ಷ ದೇವದಾಸ್ ನಾಯ್ಕ್, ಒಕ್ಕೂಟದ ಅಧ್ಯಕ್ಷ ಶ್ರೀನಿವಾಸ್ ಕಾಮತ್, ರಾಜೇಂದ್ರ ಪೈ, ಮನೋಹರ್ ಕಾಮತ್, ರಾಜೇಶ್ ಕಾಮತ್, ಹೃಶಿಕೇಶ್ ಪೈ, ಸಂದೇಶ್ ಜವಳಿ, ರಾಜೇಂದ್ರ ನಾಯ್ಕ್ ಮತ್ತಿತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post