ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಈಗಾಗಲೇ ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ಪಡೆಯುವ ಅಂತರವನ್ನು ಸರ್ಕಾರ ಪರಿಷ್ಕರಿಸಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ತಿಳಿಸಿದ್ದಾರೆ.
ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದ ನಂತರ 12 ರಿಂದ 14 ವಾರಗಳ ಅಂತರದಲ್ಲಿ ಎರಡನೇ ಡೋಸ್ ಪಡೆಯುವಂತೆ ಲಸಿಕಾಕರಣದ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‌ಟಿಎಜಿಐ) ಮತ್ತು ರಾಷ್ಟ್ರೀಯ ಪರಿಣಿತಿ ಗುಂಪು (ಎನ್‌ಇಜಿವಿಎಸಿ) ಶಿಫಾರಸ್ಸಿನ ಆಧಾರದ ಮೇಲೆ ಸರ್ಕಾರ ತಿಳಿಸಿದೆ. ಎರಡು ಡೋಸ್‌ಗಳ ನಡುವಿನ ಈ ಪರಿಷ್ಕೃತ ಸಮಯದ ಅಂತರ ಕೋವಿಶೀಲ್ಡ್ ಲಸಿಕೆಗೆ ಮಾತ್ರ ಅನ್ವಯಿಸುತ್ತದೆ ಮತ್ತು ಕೋವ್ಯಾಕ್ಸಿನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post