No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೊರೋನಾ ನಿಯಂತ್ರಣ ಕಾರ್ಯದಲ್ಲಿ ವಾಣಿಜ್ಯೋದ್ಯಮಿಗಳು ಸಹಕರಿಸಲು ಜಿಲ್ಲಾಧಿಕಾರಿ ಮನವಿ

kalpa News by kalpa News
April 23, 2021
in ಶಿವಮೊಗ್ಗ
0
ಕೊರೋನಾ  ನಿಯಂತ್ರಣ ಕಾರ್ಯದಲ್ಲಿ ವಾಣಿಜ್ಯೋದ್ಯಮಿಗಳು ಸಹಕರಿಸಲು ಜಿಲ್ಲಾಧಿಕಾರಿ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ವಿಶ್ವವ್ಯಾಪಿಯಾಗಿ ಜನಜೀವನ ಅಸ್ತವ್ಯಸ್ಥಗೊಳಿಸಿರುವ ಹಾಗೂ ಅತೀ ವೇಗದಲ್ಲಿ ಹರಡುತ್ತಿರುವ ಮಾರಣಾಂತಿಕ ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಕೈಗೊಳ್ಳುವ ನಿರ್ಧಾರಗಳಿಗೆ ಜಿಲ್ಲೆಯ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು, ವ್ಯವಹಾರಸ್ಥರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮನವಿ ಮಾಡಿದರು.

ಅವರು ಜಿಲ್ಲಾಡಳಿತ ಸಭಾಂಗಣದಲ್ಲಿ ವಾಣಿಜ್ಯೋದ್ಯಮಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಸೋಂಕು ಹರಡುವಿಕೆಯು ಶೇ.10ರಷ್ಟಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ನಿನ್ನೆಯಿಂದ ಆರಂಭಗೊಂಡು ವಾರದ ದಿನಗಳಲ್ಲಿ ಮೇ 4ರವರೆಗೆ ಜಿಲ್ಲೆಯಾಧ್ಯಂತ ಕೆಲವು ನಿರ್ಬಂಧಗಳನ್ನು ಹೊರಡಿಸಲಾಗಿದೆ. ಇದರಿಂದಾಗಿ ಜನಸಾಮಾನ್ಯರ ಜೀವನ ನಿರ್ವಹಣೆಗೆ ಅಲ್ಪಮಟ್ಟಿನ ಅಡಚಣೆ ಆಗಬಹುದಾದರೂ ನಿಯಂತ್ರಣ ಕ್ರಮ ಅನಿವಾರ್ಯವಾಗಿದೆ. ಆದ್ದರಿಂದ ಸಾರ್ವಜನಿಕರು ಜಿಲ್ಲಾಡಳಿತದ ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಸೂಚಿಸಿದರು.

ಈ ಅವಧಿಯಲ್ಲಿ ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಕಟ್ಟಡ ಕಾಮಗಾರಿಗಳು, ಕಟ್ಟಡ ಸಾಮಗ್ರಿಗಳ ವಹಿವಾಟು, ದಿನಸಿ, ಆಹಾರ ಸಾiಗ್ರಿಗಳ ಪೂರೈಸುವ ಅಂಗಡಿ, ಪಶು ಆಹಾರ ಪೂರೈಕೆ ಘಟಕಗಳು, ತರಕಾರಿ, ಹಾಲು ಹಣ್ಣು ವ್ಯಾಪಾರಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ಉಳಿದಂತೆ ಹೋಲ್‌ಸೇಲ್ ವ್ಯವಹಾರಸ್ಥರು ತಮ್ಮ ಕ್ಷೇತ್ರದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಸೂಚಿಸಿದ ಅವರು, ಜಿಲ್ಲೆಯ ಕೆಲವು ಕಡೆಗಳಲ್ಲಿ ಸಂಕೀರ್ಣ ಸ್ಥಳದಲ್ಲಿ ಮಾರುಕಟ್ಟೆಗಳಿರುವುದನ್ನು ಗಮನಿಸಲಾಗಿದೆ. ಅಂತಹ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ಯಾವುದೇ ವ್ಯಕ್ತಿಗೆ ಅಡಚಣೆಯಾಗದಂತೆ ವ್ಯವಹರಿಸಲು ಸೂಚಿಸಿದರು.

ವೈನ್ಸ್, ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಸ್ಥಳೀಯವಾಗಿ ಸೇವೆ ಒದಗಿಸಲು ಇದ್ದ ಅವಕಾಶವನ್ನು ನಿರ್ಬಂಧಿಸಲಾಗಿದೆ. ಆದರೆ ಪಾರ್ಸಲ್ ಸರ್ವೀಸ್‌ಗೆ ಅವಕಾಶ ನೀಡಲಾಗಿದೆ. ಕೃಷಿ ಮತ್ತು ಕೃಷಿ ಸಂಬಂಧಿತ ವಹಿವಾಟು, ಸಾಗಾಣಿಕೆ, ಪೆಟ್ರೋಲ್ ಬಂಕ್, ಸೆಲೂನ್, ಬ್ಯೂಟಿಪಾರ್ಲರ್‌ಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ವಿಶೇಷವಾಗಿ ಜನಸಂದಣಿಯ ಬಟ್ಟೆ ಅಂಗಡಿಗಳು, ಚಿನ್ನ-ಬೆಳ್ಳಿ ಆಭರಣ ಮಳಿಗೆಗಳು ತೆರೆಯದಂತೆ ಸೂಚಿಸಲಾಗಿದೆ ಎಂದರು.

ಪೂರ್ವಯೋಜಿತ ಮದುವೆ, ಸಭೆ-ಸಮಾರಂಭಗಳಿಗೆ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆದು 50ಜನ ಮೀರದಂತೆ, ಅಂತ್ಯ ಸಂಸ್ಕಾರಗಳಿಗೆ 20ಜನಕ್ಕೆ ಮೀರದಂತೆ ಪಾಲ್ಗೊಳ್ಳಲು ಅವಕಾಶ ನೀಡಿದೆ. ಬಸ್‌ನಲ್ಲಿ ಶೇ.೫೦ರಷ್ಟು ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ ಎಂದರು.

ನೈಟ್ ಕರ್ಫ್ಯೂ :
ಪ್ರತಿದಿನ ರಾತ್ರಿ 9ರಿಂದ ಬೆಳಿಗ್ಗೆ 6ರವರೆಗೆ ಸಾರ್ವಜನಿಕ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈಗಾಗಲೇ ರಾತ್ರಿ ಪ್ರಯಾಣಕ್ಕೆ ಟಿಕೇಟ್ ಕಾಯ್ದಿರಿಸಿದ್ದಲ್ಲಿ, ರೋಗಿಗಳಿಗೆ, ಅಂಬುಲೆನ್ಸ್ ಓಡಾಟಕ್ಕೆ, ಔಷಧಗಳ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಮಾರ್ಗಸೂಚಿಗಳನ್ನು ಅನುಸರಿಸಿ ನಡೆಸುವ ಕೈಗಾರಿಕೆಗಳಿಗೆ ಅನುಮತಿ ನೀಡಲಾಗಿದೆ. ಕೈಗಾರಿಕೆಗಳ ಸಂಸ್ಥೆಯ ಮುಖ್ಯಸ್ಥರು ತಮ್ಮ ಸಿಬ್ಭಂದಿಗಳಿಗೆ ಗುರುತಿನ ಚೀಟಿ ನೀಡುವುದು ಕಡ್ಡಾಯ ಎಂದರು.

ವಾರಾಂತ್ಯದ ದಿನಗಳಲ್ಲಿ ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂಧಿಗಳಿಗೆ ಕೈಗಾರಿಕಾ ಸಂಸ್ಥೆಯ ಮುಖ್ಯಸ್ಥರು ಅವಕಾಶವಿದ್ದಲ್ಲಿ ಮನೆಯಿಂದ ಕಾರ್ಯನಿರ್ವಹಿಸುವ ಅವಕಾಶ ನೀಡುವಂತೆ ಸೂಚಿಸಿದ ಅವರು ಅನಗತ್ಯವಾಗಿ ಪ್ರಯಾಣಿಸುವವರನ್ನು ನಿರ್ಬಂಧಿಸಿದೆ. ಅಂತೆಯೇ ಬೆಳಿಗ್ಗೆ 6ರಿಂದ 10ವರೆಗೆದೈನಂದಿನ ಸರಕು ಸಾಮಾಗ್ರಿಗಳು ಮಾರಾಟ ಮತ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ನಗರದ ಸರ್ಕ್ಯೂಟ್‌ಹೌಸ್‌ನಿಂದ ಬಸ್‌ಸ್ಟ್ಯಾಂಡ್‌ವರೆಗೆ ರಸ್ತೆಗಳ ಇಕ್ಕೆಲಗಳಲ್ಲಿ ರಸ್ತೆ ಬದಿ ಅಂಗಡಿಗಳನ್ನು ತೆರೆವುಗೊಳಿಸುವಂತೆ ಸೂಚಿಸಲಾಗಿದೆ. ಕೈಗಾರಿಕೋದ್ಯಮಿಗಳು ತಮ್ಮ ಘಟಕದ ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಚವಾಗಿಟ್ಟುಕೊಳ್ಳುವಂತೆ ಸೂಚಿಸಿದೆ.

ಸಭೆಯಲ್ಲಿ ಉಪಸ್ಥಿತರಿದ್ದ ಮಹಾನಗರಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ಮಾತನಾಡಿ, ಮುಂದಿನ ಆದೇಶದವರೆಗೆ ಗಾಂಧಿಬಜಾರ್‌ನಲ್ಲಿ ನಡೆಸಲಾಗುತ್ತಿದ್ದ ಸಂತೆಯನ್ನು ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀಪ್ರಸಾದ್, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನುರಾಧ ಜಿ., ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: DC ShivakumarKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest NewsLatest News KannadaLocal NewsMalnad NewsNewsinKannadaNewsKannadaNight curfewShimogaShivamoggaShivamogga Newsಕೊರೋನಾಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ನೈಟ್ ಕರ್ಫ್ಯೂಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಣಿಯೂರು ಚಾಮುಂಡೇಶ್ವರಿ ದೇವಿ ಬ್ರಹ್ಮಕಲಶೋತ್ಸವ ಮುಂದೂಡಿಕೆ

Next Post

ಗಮನಿಸಿ: ಏ.25 ರಂದು ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಏ.25 ರಂದು ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL