ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದಶಗ್ರಂಥ ಘನಪಾಠಿಗಳ ಗೌರವ ಸಮರ್ಪಣಾ ಸಮಿತಿಯ ಸಭೆ-ಶೋಭಾಯಾತ್ರೆಗೂ ಶ್ರೀಮಠಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಶ್ರೀಗಳು #Shri Vidhyabhinava Vidhyaranya Bharathi Shri ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಿವಮೊಗ್ಗದಲ್ಲಿ ಅಕ್ಟೋಬರ್ 19 ರಂದು ದಶಗ್ರಂಥ ಘನಪಾಠಿಗಳ ಗೌರವ ಸಮರ್ಪಣಾ ಸಮಿತಿಯ ಹೆಸರಿನಲ್ಲಿ ಶ್ರೀಮದ್ ಜಗದ್ಗುರು ಶ್ರೀ ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನಮ್ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಮ್ ಕೂಡಲಿ ಮಠದಿಂದ ಕಂಠಸ್ಥ ಹಾಗೂ ಏಕಾಕೀ ದಶಗ್ರಂಥ ಸಹಿತ ಸಂಪೂರ್ಣ ಋಗ್ವೇದ ಘನ ಪಾರಾಯಣ ಸಮಾರೋಪ ಸಮಾರಂಭ ಹಾಗೂ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ನಾವು ಮಾಧ್ಯಮಗಳಲ್ಲಿ ಗಮನಿಸಿದ್ದು, ಇದು ನಮ್ಮ ಗಮನಕ್ಕೆ ತಾರದೇ ಮಾಡುತ್ತಿರುವ ಕಾರ್ಯಕ್ರಮವಾಗಿದೆ ಎಂದು ಮಠದ ಪೀಠಾಧಿಪತಿ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಮಹಾಸ್ವಾಮಿಗಳು ತಿಳಿಸಿದ್ದಾರೆ.
Also read: ಶಿವಮೊಗ್ಗ | ಜಿಲ್ಲಾದಾದ್ಯಂತ ಸಡಗರ ಸಂಭ್ರಮದ ಭೂಮಿ ಹುಣ್ಣಿಮೆ ಆಚರಣೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post