ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ ಎನ್ ಎಸ್ ಎಸ್ ದ್ಯೇಯ ವಾಕ್ಯ ‘ನನಗಲ್ಲ ನಿನಗೆ ‘, ನಿಸ್ವಾರ್ಥವಾದ ಸೇವೆಗೆ ತಕ್ಕ ಪ್ರತಿಫಲ ಸಿಗುತ್ತದೆ ಎಂದು ಎನ್‌ಎಸ್‌ಎಸ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ. ಕುಂದನ್ ಬಸವರಾಜ್ ತಿಳಿಸಿದರು.
ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ವಿದ್ಯಾರ್ಥಿಗಳಲ್ಲಿ ಆತ್ಮಭಿಮಾನ ಹೆಚ್ಚಾಗಬೇಕಿದೆ. ಉಸಿರು ತೆಗೆದುಕೊಂಡು ಉಸಿರು ಬಿಡುವ ಒಳಗೆ ಹೆಸರು ಮಾಡಬೇಕು. ಸಮಾಜದ ಸೇವೆಯೊಂದಿಗೆ ವ್ಯಕ್ತಿ ವಿಕಾಸ ಸಾಧ್ಯ ಎಂದರು.
ಎನ್ ಎಸ್ ಎಸ್ ಅಧಿಕಾರಿ ಡಾ. ಹಾಲಮ್ಮ ಪ್ರಾಸ್ಥಾವಿಕ ಮಾತನಾಡಿ, ವಿದ್ಯಾರ್ಥಿಗಳು ಸಮುದಾಯಮುಖಿಯಾಗಿ ಚಲಿಸಬೇಕು ಎಂದು ಸಲಹೆ ನೀಡಿದರು.
ಕುವೆಂಪು ವಿಶ್ವ ವಿದ್ಯಾಲಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ ಮಾತನಾಡಿ, ನಮ್ಮನ್ನು ನಾವು ಸೇವೆಯಲ್ಲಿ ಹೇಗೆ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಲಾ ಕಾಲೇಜಿನ ಪ್ರಾಚಾರ್ಯ ಡಾ. ಕೆ. ಬಿ. ಧನಂಜಯ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ಕಲಾ ತಂಡದ ಡಾ. ನಿಂಗರಾಜ್ ಮತ್ತು ಡಾ. ಮಧುಸೂದನ್ ಮೈಸೂರು ಇವರು’ಜನಪದ ವೈಭವ ಕಾರ್ಯಕ್ರಮ ನಡೆಸಿಕೊಟ್ಟರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post