No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

kalpa News by kalpa News
February 24, 2026
in ಶಿವಮೊಗ್ಗ
0
ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   |

ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧವಾದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ #Shri Marikamba Fair ಇಂದು ಆರಂಭವಾಯಿತು. ತವರು ಮನೆ ಎಂದೇ ಪ್ರಖ್ಯಾತಿ ಪಡೆದ ಗಾಂಧಿಬಜಾರಿನ ನಾಡಿಗರ ಮನೆಯವರು ದೇವಿಯನ್ನು ವಿಶೇಷವಾಗಿ ಪೂಜೆ ಮಾಡುವುದರೊಂದಿಗೆ ಚಾಲನೆ ನೀಡಲಾಯಿತು.

ಬೆಳಿಗ್ಗೆ 7 ಗಂಟೆಯಿಂದಲೇ ತವರು ಮನೆ ಗಾಂಧಿಬಜಾರಿನಲ್ಲಿ ಶ್ರೀ ಅಮ್ಮನವರಿಗೆ ಮಡಿಲಕ್ಕಿ ಅರ್ಪಣೆ ಮತ್ತು ಪೂಜೆ ಆರಂಭಗೊಂಡಿದ್ದು, ಬೆಳಗ್ಗೆ 5 ಗಂಟೆಗೆ ಸಮಿತಿ ವತಿಯಿಂದ ಮಂಗಳವಾದ್ಯದೊಂದಿಗೆ ನಾಡಿಗರ ಕುಟುಂಬದವರನ್ನು ಪೂಜೆಗೆ ಆಹ್ವಾನಿಸಲಾಯಿತು. ಆ ಸಮಾಜದ ಮುತ್ತೈದೆಯರು ಮಂಗಳ ದ್ರವ್ಯಾದಿಗಳೊಂದಿಗೆ ಮೆರವಣಿಗೆಯಲ್ಲಿ ಬಾಸಿಂಗದೊಂದಿಗೆ ಗಾಂಧಿ ಬಜಾರ್’ನ ತವರುಮನೆಯಲ್ಲಿರುವ ಶ್ರೀ ಮಾರಿಕಾಂಬೆಗೆ ಉಡಿ ತುಂಬಿ ಪೂಜೆ ಸಲ್ಲಿಸುತ್ತಾರೆ. ಇದೇ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದವರು ವಿಸರ್ಜನಾ ಮೂರ್ತಿಗೆ ಮಾಂಗಲ್ಯ ಧಾರಣೆ ಮಾಡಿ ಸಾರ್ವಜನಿಕವಾಗಿ ಪೂಜೆಯನ್ನು ಆರಂಭಿಸಿದರು.
ದೇವಿಯ ದರ್ಶನ ಪಡೆಯಲು ಭಕ್ತರು ಬೆಳಿಗ್ಗಿನಿಂದಲೇ ಕಿ.ಮೀ.ದೂರದಷ್ಟು ಸರತಿಯ ಸಾಲಿನಲ್ಲಿ ನಿಂತ್ತಿದ್ದು ಕಂಡು ಬಂದಿತು. ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದರೂ ಕೂಡ ಅಲ್ಲಿಯೂ ಸರದಿ ಸಾಲು ಉದ್ದವಾಗಿತ್ತು. ಪತ್ರಕರ್ತರು ಕೂಡ ಪರದಾಡುವಂತಾಯಿತು. ಭಕ್ತರ ಸರದಿ ಸಾಲು ಹೆಚ್ಚು ಕಡಿಮೆ ಗಾಂಧಿ ಬಜಾರ್ ನಿಂದ ಹೊಳೆ ಬಸ್ ನಿಲ್ದಾಣದವರೆಗೆ ಮತ್ತು ಬಸ್ ನಿಲ್ದಾಣ ಅಶೋಕ ವೃತ್ತದವರೆಗೆ, ರಾಮಣ್ಣ ಶ್ರೇಷ್ಠಿ ಪಾರ್ಕ್‍ನಿಂದ ಮಾರಿ ಗದ್ದುಗೆಯವರೆಗೂ ಹೀಗೆ ಮೂರು ಕಡೆಯಿಂದಲೂ ಕೂಡ ಸರದಿ ಸಾಲು ಉದ್ದವಾಗಿತ್ತು.

ಬೆಳಗ್ಗೆಯೇ ಬಿಸಿಲು ಸ್ವಲ್ಪ ಕಡಿಮೆ ಇದ್ದುದು ಭಕ್ತರಿಗೆ ಅನೂಕೂಲವಾಯಿತು. ಜೊತೆಗೆ ಜರ್ಮನ್ ಟೆಂಟ್‍ಗಳನ್ನು ಹಾಕಲಾಗಿತ್ತು. ಭಕ್ತರಿಗೆ ಅಲ್ಲಲ್ಲಿ ಮಜ್ಜಿಗೆ, ಪಾನಕದ ವ್ಯವಸ್ಥೆಯನ್ನು ಮಾಡಲಾಗಿತ್ತು. ಸುಮಾರು 5-6 ಗಂಟೆಗಳ ಕಾಲ ಸರದಿ ಸಾಲಲ್ಲಿ ನಿಂತು ಭಕ್ತರು ದೇವಿಯ ದರ್ಶನ ಪಡೆದರು.

ಇಂದು ರಾತ್ರಿ 9 ಗಂಟೆಯವರೆಗೂ ಗಾಂಧಿಬಜಾರ್‌ನಲ್ಲಿ ದರ್ಶನ ವ್ಯವಸ್ಥೆ ಇರಲಿದ್ದು, ನಂತರ ಮಾರಿಕಾಂಬೆಯನ್ನು ರಥದಲ್ಲಿ ಕೂರಿಸಿ ಮೆರವಣಿಗೆಯನ್ನು ಉಪ್ಪಾರ ಸಮಾಜದವರು ಮಾಡಲಿದ್ದಾರೆ. ಗಂಗಾಮತ ಸಮಾಜದವರು ಅಮ್ಮನವರಿಗೆ ಪೂಜೆ ಸಲ್ಲಿಸುವರು. ನಾಳೆ ಬೆಳಗ್ಗೆ ಸುಮಾರು 4 ಗಂಟೆಯ ವೇಳೆಗೆ ಹರಿಜನ ಸಮಾಜದವರು ಬೇವಿನುಡುಗೆಯೊಂದಿಗೆ ಆಗಮಿಸಿ ಮಾರಿಕಾಂಬೆಗೆ ಪೂಜೆ ಸಲ್ಲಿಸಿದ ನಂತರ ಅಮ್ಮನವರನ್ನು ಗದ್ದುಗೆಗೆ ಕೂರಿಸುವರು. ಅಲ್ಲಿ ನಾಳೆಯಿಂದ ಫೆ. 28ರವರೆಗೆ ಪ್ರತಿದಿನ ಹರಕೆ, ಪೂಜೆ ಪ್ರಸಾದ ಇರುತ್ತದೆ.
28ರಂದು ರಾತ್ರಿ 7 ಗಂಟೆಗೆ ರಾಜಬೀದಿ ಉತ್ಸವದೊಂದಿಗೆ ಶ್ರೀ ಅಮ್ಮನವರ ವನಪ್ರವೇಶ ಮಾಡುವುದರೊಂದಿಗೆ ಜಾತ್ರೆ ಸಮಾಪ್ತಿಗೊಳ್ಳಲಿದೆ.

ಹಬ್ಬದ ಹಿನ್ನೆಲೆಯಲ್ಲಿ ಇಡೀ ನಗರ ಅಲಂಕಾರದಿಂದ ಕಂಗೊಳಿಸುತ್ತಿದೆ. ಮಾರಿಕಾಂಬ ದೇವಸ್ಥಾನದಲ್ಲೂ ಕೂಡ ಶ್ರೀಕಾಂತ್ ಅವರ ಕೊಡುಗೆಯಿಂದಾಗಿ ಹೂವು ಹಣ್ಣಿನ ಅಲಂಕಾರ ಮಾಡಲಾಗಿದ್ದು ಭಕ್ತರ ಕಣ್ಮನ ಸೆಳೆಯುತ್ತಿದೆ. ಈ ಬಾರಿ ಜಾತ್ರೆಯ ಸುತ್ತಮುತ್ತಲ ಪ್ರದೇಶದಲ್ಲಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿಲ್ಲ. ದೇವಾಲಯದ ಅನತಿ ದೂರದಲ್ಲಿ ಅಂಗಡಿ ಮುಂಗಟ್ಟುಗಳು ತಲೆ ಎತ್ತಿವೆ. ಈ ಅಂಗಡಿಗಳ ಮುಂದೆ ವ್ಯಾಪಾರ ಜೋರಾಗಿದ್ದುದು ಕಂಡು ಬಂದಿತು. ಹೂವು ಹಣ್ಣು ಕಾಯಿ ವ್ಯಾಪಾರ ಕೂಡ ಹೆಚ್ಚಾಗಿದೆ.

ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸಜ್ಜಾಗಿದೆ. ಜನದಟ್ಟಣೆ ತಡೆಯುವ ನಿಟ್ಟಿನಲ್ಲಿ ಸಂಚಾರ ಮಾರ್ಗವನ್ನು ಕೂಡ ಬದಲಾಯಿಸಲಾಗಿದೆ. ಪಾರ್ಕಿಂಗ್ ವ್ಯವಸ್ಥೆಯನ್ನು ಕೂಡ ಅಲ್ಲಲ್ಲಿ ಮಾಡಲಾಗಿದೆ. ಕಳ್ಳತನವಾಗುವ ನಿರೀಕ್ಷೆ ಇರುವುದರಿಂದ ಬಹುತೇಕ ಕಡೆಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಜೊತೆಗೆ 8 ಪೊಲೀಸ್ ಟವರ್ ಗಳನ್ನು ಕೂಡ ನಿರ್ಮಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsShri Marikamba fairಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

Next Post

From Complex Revisions to Robotic Spine Care: Narayana Health City Marks 10,000 Surgery Milestone

kalpa News

kalpa News

Next Post
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL