ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಮಾನ್ಯ ಜನರ ಜೀವನದಲ್ಲಿ ಸದಾ ಕಾಲ ಸರ್ಕಾರದ ಸಹಕಾರವೇ ಗೃಹಲಕ್ಷ್ಮಿಯಂತಹ Gruhalakshmi ಯೋಜನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ Madhu Bangarappa ನುಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಮಹಾನಗರಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಗೃಹಲಕ್ಷ್ಮಿ ಯೋಜನೆಯ ಅನುಷ್ಟಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಕ್ಷಾ ಬಂಧನದ ದಿನದಂದು ರಾಜ್ಯ ಸರ್ಕಾರ ಸಹೋದರನ ಸ್ಥಾನದಲ್ಲಿ ನಿಂತು ಮನೆಯ ಯಜಮಾನಿಯರಾಗಿರುವ ಸಹೋದರಿಯರಿಗೆ ರೂ.2000 ಕೊಡುಗೆಯನ್ನು ನೀಡುತ್ತಿರುವ ಸಂತೋಷದ ದಿನ ಇದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾದ ಮಹಿಳಾ ಫಲಾನುಭವಿಗಳ ಖಾತೆಗೆ ಇಂದಿನಿಂದ ಪ್ರತಿ ತಿಂಗಳು ರೂ.2000 ಜಮೆಯಾಗಲಿದೆ.
– ಎಸ್. ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು

Also read: ಮಹಾಭಾರತ ಬರೆದಿದ್ದು ಖಾಜಿ ನಜ್ರುಲ್ ಇಸ್ಲಾಂ: ಮಮತಾ ಬ್ಯಾನರ್ಜಿ ವ್ಯಂಗ್ಯ
ಯಾವುದೇ ವ್ಯಕ್ತಿ ಹಸಿವಿನಿಂದ ಮಲಗಿದರೆ ಸರ್ಕಾರದಕ್ಕೆ ಗೌರವ ಸಿಗುವುದಿಲ್ಲ. ಆದ್ದರಿಂದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿಯನ್ನು ನೀಡುವ ಭರವಸೆಯನ್ನು ಸರ್ಕಾರ ನೀಡಿತ್ತು. ಸದ್ಯಕ್ಕೆ ಅಕ್ಕಿ ಲಭ್ಯತೆ ಸಾಕಷ್ಟು ಇಲ್ಲದ ಕಾರಣ, 5 ಕೆಜಿ ಅಕ್ಕಿ ಬದಲಾಗಿ ಕುಟುಂಬದ ತಲಾ ಸದಸ್ಯರಿಗೆ ರೂ.170 ಗಳನ್ನು ನೀಡಲಾಗುತ್ತಿದೆ. ಹಾಗೂ 32 ವರ್ಷದಿಂದ ರೈತರಿಗೆ 10 ಹೆಚ್‍ಪಿ ಪಂಪ್‍ಸೆಟ್‍ಗೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಈವರೆಗೆ 360294 ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿದ್ದು, ಇನ್ನೂ 32000 ಮಹಿಳೆಯರ ನೋಂದಣಿ ಬಾಕಿ ಇದೆ. ನೋಂದಣಿಯಾದ ಫಲಾನುಭವಿಗಳು ತಮ್ಮ ಅಕ್ಕಪಕ್ಕದವರಿಗೆ ಈ ಬಗ್ಗೆ ತಿಳಿಸಿ ಸಹಕರಿಸಬೇಕು. ಹಾಗೂ ಜಿಲ್ಲಾಧಿಕಾರಿಗಳು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳು ಇನ್ನು 7 ರಿಂದ 10 ದಿನಗಳ ಒಳಗೆ ಈ ಬಾಕಿ ನೊಂದಣಿ ಮಾಡಿಸಿ ಶೇ.100 ಗುರಿ ತಲುಪಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಶಾಸಕರಾದ ಆರ್.ಪ್ರಸನ್ನಕುಮಾರ್, ಪಾಲಿಕೆ ಸದಸ್ಯರಾದ ಹೆಚ್.ಸಿ.ಯೋಗೇಶ್, ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಎಸಿ ಸತ್ಯನಾರಾಯಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸಂತೋಷ್ ಕುಮಾರ್, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸುಂದರೇಶ್, ಇತರೆ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post