ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸುಮಾರು 1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಫೆ.27ರಂದು ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ತಿಳಿಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ವಿಮಾನ ನಿಲ್ದಾಣ ಉದ್ಘಾಟನೆ ಜೊತೆಯಲ್ಲಿಯೇ ಪ್ರಧಾನಿಯವರು ಜಿಲ್ಲೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ಸಹ ನೆರವೇರಿಸಲಿದ್ದಾರೆ ಎಂದರು.
Also read: ಶಿವಮೊಗ್ಗ-ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕೆ ಪ್ರಧಾನಿಯಿಂದ ಶಂಕುಸ್ಥಾಪನೆ
ಇನ್ನು, 43.90 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಿವಮೊಗ್ಗ ವಿದ್ಯಾನಗರದ ವೃತ್ತಾಕಾರದ ಸೇತುವೆಯನ್ನೂ ಸಹ ಪ್ರಧಾನಿಯವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಯಾವೆಲ್ಲಾ ಕಾಮಗಾರಿ?
- ಹೊಸನಗರದ ಮಾವಿನಕೊಪ್ಪ ವೃತ್ತದಿಂದ ಆಡುಗೋಡಿವರೆಗೂ 316.50 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ (766 ಸಿ) ಅಭಿವೃದ್ಧಿ
- ಬೈಂದೂರಿನಿಂದ ನಾಗೋಡಿವರೆಗೂ ರಾಷ್ಟ್ರೀಯ ಹೆದ್ದಾರಿ (766 ಸಿ) 395 ಕೋಟಿ ರೂ. ವೆಚ್ಚದಲ್ಲಿ ಅಗಲೀಕರಣ
- 66 ಕೋಟಿ ರೂ. ವೆಚ್ಚದಲ್ಲಿ ಶಿಕಾರಿಪುರ ಪಟ್ಟಣದ ಬೈಪಾಸ್ ರಸ್ತೆ ಕಾಮಗಾರಿ
- 96.29 ಕೋಟಿ ರೂ. ವೆಚ್ಚದಲ್ಲಿ ತೀರ್ಥಹಳ್ಳಿ-ಮೇಗರವಳ್ಳಿ-ಆಗುಂಬೆ ರಸ್ತೆ ಅಭಿವೃದ್ಧಿ
- 56 ಕೋಟಿ ರೂ. ವೆಚ್ಚದಲ್ಲಿ ಭಾರತೀಪುರ ಭಾಗದ ರಸ್ತೆ ಅಭಿವೃದ್ಧಿ
- 4.60 ಕೋಟಿ ರೂ. ವೆಚ್ಚದಲ್ಲಿ ಹೊಳೆಹೊನ್ನೂರು ಸೇತುವೆ ಮರುನಿರ್ಮಾಣ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















