No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Sunday, April 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರದ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ನೌಕರರ ಪಾತ್ರ ಮಹತ್ವದ್ದು: ಶಾಸಕ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 17, 2022
in ಶಿವಮೊಗ್ಗ
0
ಸರ್ಕಾರದ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ನೌಕರರ ಪಾತ್ರ ಮಹತ್ವದ್ದು: ಶಾಸಕ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಹಿರಿಯರು ತಮ್ಮ ಕುಟುಂಬದ ಕಿರಿಯರೊಂದಿಗೆ ಸೇರಿ ದೈನಂದಿನ ಕೆಲ ಸಮಯವನ್ನಾದರೂ ಕ್ರೀಡೆ ಹಾಗೂ ಮನೋರಂಜನೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಉತ್ತಮ ಹವ್ಯಾಸಗಳಲ್ಲೊಂದಾಗಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಅವರು ಹೇಳಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸುವ ವಿವಿಧ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರ್ಕಾರಿ ನೌಕರರ ಪಾತ್ರ ಪ್ರಮುಖವಾದುದ್ದಾಗಿದೆ. ಆರೋಗ್ಯ ಸುಧಾರಣಾ ಕ್ಷೇತ್ರದಲ್ಲಿ ರಾಜ್ಯ ಸರ್ಕಾರವು ರೂಪಿಸಿರುವ ಹಲವು ಯೋಜನೆಗಳ ಅನುಷ್ಠಾನದಿಂದಾಗಿ ದೇಶದಲ್ಲಿಯೇ ಕರ್ನಾಟಕ ಮುಂಚೂಣಿಯಲ್ಲಿದೆ. ಇಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೆರೆಯ ರಾಜ್ಯದ ಪ್ರತಿನಿಧಿಗಳು ವೀಕ್ಷಿಸಿ ಅನುಸರಿಸುತ್ತಿರುವುದು ಸಂತಸದ ಸಂಗತಿ ಎಂದರು.

ರಾಜ್ಯದಲ್ಲಿ ಅನುಷ್ಠಾನಗೊಳಿಸುವ ಕಾರ್ಯಕ್ರಮಗಳ ಶುಭಾರಂಭಗೊಳ್ಳುವುದು ಶಿವಮೊಗ್ಗದಿಂದಲೇ. ಇಲ್ಲಿನ ಅಧಿಕಾರಿ-ಸಿಬ್ಬಂಧಿಗಳ ಪರಿಶ್ರಮದಿಂದ ಬಹುತೇಕ ಎಲ್ಲಾ ಯೋಜನೆಗಳು ಯಶಸ್ವಿಯಾಗಿ ಕಾಲಮಿತಿಯಲ್ಲಿ ಅನುಷ್ಠಾನಕ್ಕೆ ಬಂದಿವೆ ಅದಕ್ಕಾಗಿ ಎಲ್ಲಾ ಅಧಿಕಾರಿಗಳು ಅಭಿನಂದನಾರ್ಹರು. ಹರ್ ಘರ್ ಜಲ್ ಯೋಜನೆಯಡಿ ಜಿಲ್ಲೆಯ ಪ್ರತಿ ಮನೆಮನೆಗೆ ನೀರು ಒದಗಿಸುವಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ ಎಂದರು.
ಜಿಲ್ಲೆಯಲ್ಲಿ ಆಶ್ರಯ ಯೋಜನೆಯಡಿ ಸುಮಾರು 3000 ಮನೆಗಳನ್ನು ನಿರ್ಮಿಸಲಾಗಿದೆ. ಕೇಂದ್ರ ಪುರಸ್ಕೃತ ಸ್ಮಾರ್ಟ್ಸಿಟಿ ಯೋಜನೆ ಅತಿ ವೇಗದಲ್ಲಿ ಸಾಗುತ್ತಿದೆ ಎಂದ ಅವರು, ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗುವ ಎಲ್ಲಾ ಸ್ಪರ್ಧಿಗಳು ರಾಜ್ಯ ಮಟ್ಟದಲ್ಲಿ ವಿಜೇತರಾಗಿ ಬರುವಂತೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾತನಾಡಿ, ದಿನನಿತ್ಯ ಒತ್ತಡದಲ್ಲಿ ದಿನಕಳೆಯುವ ನೌಕರರು ಕೆಲ ಸಮಯವಾದರೂ ಎಲ್ಲಾ ಒತ್ತಡಗಳಿಂದ ಹೊರಬಂದು ನೆಮ್ಮದಿಯ ಕ್ಷಣಗಳನ್ನು ಕಳೆಯಲು, ಇಲಾಖೆಗಳ, ಅಧಿಕಾರಿ-ಸಿಬ್ಬಂಧಿಗಳೊಂದಿಗೆ ಸ್ನೇಹದ ವಾತಾವರಣ ನಿರ್ಮಿಸುವಲ್ಲಿಯೂ ಈ ಕ್ರೀಡಾಕೂಟ ಸಹಕಾರಿಯಾಗಿದೆ ಎಂದರು.
ಪ್ರತಿಯೊಬ್ಬರೂ ಪ್ರತಿನಿತ್ಯ ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳಲ್ಲಿ ಸಕ್ರಿಯರಾಗುವುದರಿಂದ, ಯೋಗ-ಧ್ಯಾನ ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಉಲ್ಲಾಸ ಹಾಗೂ ಕಾರ್ಯಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಉತ್ತೇಜನ ದೊರೆಯಲಿದೆ ಎಂದರು.

ಪ್ರಸಕ್ತ ಸರ್ಕಾರವು ನೌಕರರ ಸ್ನೇಹಿಯಾಗಿದ್ದು, ನೌಕರರ ಅಗತ್ಯಗಳಿಗೆ ಪೂರಕವಾಗಿ ಸ್ಪಂದಿಸಿದೆ. ಅದಕ್ಕಾಗಿ ಸಹಕರಿಸಿದ ಎಲ್ಲಾ ಶಾಸಕರು, ಸಚಿವರು, ಉನ್ನತ ಮಟ್ಟದ ಅಧಿಕಾರಿಗಳು ಅಭಿನಂದನಾರ್ಹರು ಎಂದ ಅವರು, ನೌಕರರ ಆರೋಗ್ಯ ಯೋಜನೆ ಜನವರಿ ಮಾಹೆಯಲ್ಲಿ ಅನುಷ್ಠಾನಗೊಳ್ಳಲಿದೆ. ಜಿಲ್ಲೆಯಲ್ಲಿ ಜನವರಿಯಲ್ಲಿ ನೌಕರರಿಗಾಗಿ ಕ್ಯಾಂಟೀನ್ ಆರಂಭಗೊಳ್ಳುತ್ತಿದ್ದು, ಶೇ.10 ರಿಂದ 50ರವರೆಗೆ ರಿಯಾಯಿತಿ ದರದಲ್ಲಿ ದಿನಬಳಕೆಯ ವಸ್ತುಗಳು ದೊರೆಯಲಿವೆ. ಜಿಲ್ಲೆಯ ನೌಕರರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ನಿವೇಶನಗಳನ್ನು ವಿತರಿಸಲಾಗುತ್ತಿದೆ. ನೌಕರರ ಕುಟುಂಬ ಹಾಗೂ ಅವರ ಅವಲಂಬಿತರ ಮದುವೆ, ಸಭೆ-ಸಮಾರಂಭಗಳಿಗಾಗಿ ಅತ್ಯಾಧುನಿಕ ಸಭಾಭವನವನ್ನು ಸಜ್ಜುಗೊಳಿಸಲಾಗಿದೆ. ಈ ಭವನದ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು ಸುಮಾರು 18 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಈ ಅನುದಾನ ಬಿಡುಗಡೆಗೊಳಿಸಿದ ಮಾನ್ಯ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿನಂದನಾರ್ಹರು. ಈ ಭವನಕ್ಕೆ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನೇ ನಾಮಕರಣಗೊಳಿಸಲು ನಿರ್ಣಯಿಸಲಾಗಿದೆ ಎಂದರು.
ನೌಕರರ ಕೌಟುಂಬಿಕ ಅನುಕೂಲಗಳಿಗಾಗಿ ಅತ್ಯಂತ ಕಡಿಮೆ ದರದಲ್ಲಿ ಹಾಗೂ ಅರ್ಜಿ ಸಲ್ಲಿಸಿದ ಒಂದು ಗಂಟೆಯೊಳಗಾಗಿ ೧೦ರೂ.ಗಳ ವರೆಗೆ ಆರ್ಥಿಕ ನೆರವನ್ನು ಒದಗಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಭೋಜೆಗೌಡ, ಡಿ.ಎಸ್.ಅರುಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷ ಷಡಾಕ್ಷರಿ, ಆರ್.ಮೋಹನ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ.ಪ್ರಕಾಶ್ ಅವರು ಧ್ವಜಾರೋಹಣ ನೆರವೇರಿಸಿ, ಬಲೂನ್‌ಗಳನ್ನು ಹಾರಿಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ವಾಣಿ ಮತ್ತು ಸಂಗಡಿಗರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಅವರು ಸ್ವಾಗತಿಸಿ ವಂದಿಸಿದರು.

ಸಭಾ ಕಾರ್ಯಕ್ರಮದ ನಂತರ ನೆಹರೂ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ, ನೌಕರರ ಸಂಘದ ಸಭಾಂಗಣಗಳಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಜಿಲ್ಲೆಯ ಸಹಸ್ರಾರು ಸಂಖ್ಯೆಯ ನೌಕರರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

Healthcare system should move towards preventive-oriented approach: Health Minister Dr K Sudhakar

Next Post

ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿವೃದ್ಧಿಗೆ ಐದು ಕೋಟಿ ಅನುದಾನ: ಸಚಿವ ಆನಂದ್ ಸಿಂಗ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಧರ್ಮಸ್ಥಳ ಪ್ರವಾಸ ಮುಂದೂಡುವಂತೆ ಭಕ್ತರಿಗೆ ವೀರೇಂದ್ರ ಹೆಗ್ಗಡೆ ಮನವಿ

ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿವೃದ್ಧಿಗೆ ಐದು ಕೋಟಿ ಅನುದಾನ: ಸಚಿವ ಆನಂದ್ ಸಿಂಗ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

April 18, 2026
ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

April 18, 2026
ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

April 18, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

April 18, 2026
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL