ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಲ್ಲಿ ಎನ್‌ಎಸ್‌ಎಸ್ ಮಹತ್ತರ ಪಾತ್ರ ವಹಿಸುತ್ತದೆ ಎಂದು ರಾಜ್ಯ ಎನ್‌ಎಸ್‌ಎಸ್ ಪ್ರಶಸ್ತಿ ಪುರಸ್ಕೃತ, ಎಟಿಎನ್‌ಸಿ ಕಾಲೇಜಿನ ಪ್ರೊ. ಕೆ.ಎಂ. ನಾಗರಾಜು ಹೇಳಿದರು.
ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಅಭಿವೃದ್ಧಿಯಲ್ಲಿ ಎನ್‌ಎಸ್‌ಎಸ್ ಪಾತ್ರ ತುಂಬಾ ದೊಡ್ಡದು. ಎನ್‌ಎಸ್‌ಎಸ್ ಶಿಬಿರ ನಡೆಯುತ್ತಿರುವ ಗ್ರಾಮಾಂತರ ಪ್ರದೇಶದಲ್ಲಿ ಸ್ಥಳೀಯರು ಕೈಜೋಡಿಸಿ ಸಹಕಾರ ನೀಡಬೇಕು. ಸಂಘ ಸಂಸ್ಥೆಗಳ ಸಹಕಾರವು ಉತ್ತಮ ಸೇವೆ ಸಲ್ಲಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಹೇಳಿದರು.

Also read: ಬಂಡಾಯ ಶಮನಗೊಳಿಸಿದ ಸಚಿವ ಮಧು ಬಂಗಾರಪ್ಪ: ರಮೇಶ್ ಶೆಟ್ಟಿ ನಾಮಪತ್ರ ವಾಪಸ್
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ನಿವೃತ್ತ ಅಧಿಕಾರಿ ಚಂದ್ರಶೇಖರಯ್ಯ, ಡಾ. ಪರಮೇಶ್ವರ ಶಿಗ್ಗಾವ್, ಅರುಣ್ ದೀಕ್ಷಿತ್, ನಿವೃತ್ತ ಪ್ರಾಚಾರ್ಯ ಡಾ. ಧನಂಜಯ, ಪ್ರದೀಪ್ ಎಲಿ, ಕೇಶವಪ್ಪ, ಸಂತೋಷ್, ಕಾರ್ಯದರ್ಶಿ ಕಿಶೋರ್ ಕುಮಾರ್, ಗಣೇಶ್ ಎಂ.ಅಂಗಡಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post