ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಹೊರಗಿನವರಿಂದ ಧಕ್ಕೆ ಬಂದ ಕಾಲಘಟ್ಟದಲ್ಲಿ ಹಿಂದೂ ಧರ್ಮವನ್ನು ಉಳಿಸುವಲ್ಲಿ ಶಂಕರಾಚಾರ್ಯರ ಪಾತ್ರ ಮಹತ್ವದ್ದಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತದ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಆದಿಗುರು ಶಂಕರಾಚಾರ್ಯರ ಜಯಂತಿಯಲ್ಲಿ ಅವರು ಮಾತನಾಡಿದರು.
ಅದ್ವೈತ ತತ್ವವನ್ನು ಜಗತ್ತಿಗೆ ಪ್ರತಿಪಾದಿಸಿದ ಮತ್ತು ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದವರು ಜಗದ್ಗುರು ಶ್ರೀ ಶಂಕರಾಚಾರ್ಯರು. ಅವರ ಜೀವನ ತತ್ವ ಹಾಗೂ ಸಿದ್ಧಾಂತಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದೆ. ದೇಶದ ನಾಲ್ಕೂ ದಿಕ್ಕಿನಲ್ಲಿ ಅವರು, ಸ್ಥಾಪಿಸಿದ ನಾಲ್ಕು ಪೀಠಗಳು ದೇಶದ ಶಕ್ತಿ ಕೇಂದ್ರಗಳಾಗಿವೆ ಎಂದರು.
ಸಂಸದ ಬಿ.ವೈ. ರಾಘವೇಂದ್ರ, ವಿಪ್ರ ಸಮಾಜದ ಪ್ರಮುಖರಾದ ದತ್ತಾತ್ರಿ, ನಟರಾಜ್ ಭಾಗವತ್, ಎಮ್‌ಎಲ್‌ಸಿ ಆಯನೂರು ಮಂಜುನಾಥ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಡಿ.ಎಸ್. ಅರುಣ್ ಸೇರಿದಂತೆ ಹಲವರಿದ್ದರು.
ಕೋವಿಡ್ ನಿಯಮಾವಳಿಗಳ ಹಿನ್ನೆಲೆಯಲ್ಲಿ ಕುವೆಂಪು ರಂಗಮಂದಿರದಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post