ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಆಡಳಿತವಾಧಿ ಮುಂದುವರೆಯಲಿದೆ. ಇನ್ನು ಮುಂದು ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಪಕ್ಷದ ಸ್ಥಾನವೇ ಶಾಶ್ವತ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಮುಕ್ತವಾಗಿರುವುದರಲ್ಲಿ ರಾಜಕೀಯ ಕೈವಾಡವಿದೆ ಎಂದು ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಡಿ.ಕೆ. ಶಿವಕುಮಾರ್ ಅವರಿಗೆ ತಾಕತ್ತು ಇದ್ದರೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತಾಗಿ ಹೈಕೋರ್ಟ್, ಸಪ್ರೀಂ ಕೋರ್ಟ್ ಎಲ್ಲಿ ಬೇಕಾದರೂ ಮೇಲ್ಮನವಿ ಸಲ್ಲಿಸಲಿ ಎಂದು ಸವಾಲು ಹಾಕಿದರು.
ಬಿಜೆಪಿ ಕಾರ್ಯಕರ್ತರನ್ನು ಟೀಕೆ ಮಾಡುವುದೇ ಕಾಂಗ್ರೆಸ್ ಕೆಲಸ. ಉತ್ತರಪ್ರದೇಶದಲ್ಲಿ ಕೇವಲ ಒಂದು ಸ್ಥಾನ ಗಳಿಸಿರುವ ಕಾಂಗ್ರೆಸ್, ರಾಜ್ಯದಲ್ಲೂ ನಿರ್ನಾಮವಾಗಲಿದೆ ಎಂದರು.
ಇಡಿ ಸಮನ್ಸ್ ವಿಚಾರವಾಗಿ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸುತ್ತಿದೆಯಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸೋನಿಯಾ ಅಕ್ರಮ ಮಾಡಿದರೂ, ಡಿ.ಕೆ. ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದರೂ ಯಾರೂ ಪ್ರಶ್ನಿಸುವಂತಿಲ್ಲ. ಆದರೆ, ಬಿಜೆಪಿ ಕಾರ್ಯಕರ್ತರಿಗೆ ಕ್ಲೀನ್ ಚೀಟ್ ದೊರೆತರೆ ಪ್ರತಿಭಟನೆಗೆ ಮುಂದಾಗುವುದು ಎಷ್ಟು ಸರಿ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post