ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದಲ್ಲಿ ಅಡುಗೆ ಎಣ್ಣೆ Cooking Oil ರೂ.130 ರಿಂದ 150 ರವರೆಗೆ ನಿಗದಿತ ದರ ಇರುತ್ತದೆ. ಆದರೆ ಎಲ್ಲಾ ಹೋಲ್ಸೇಲ್ ಮತ್ತು ರೀಟೈಲ್ ಅಂಗಡಿಗಳಲ್ಲಿ ರೂ.190ರಿಂದ 200ರವರೆಗೆ ಮಾರಾಟವಾಗುತ್ತಿದ್ದು, ಇದರಿಂದ ಜನಸಾಮಾನ್ಯರಿಗೆ ಹೊರೆಯಾಗುತ್ತಿದೆ. ಆದ್ದರಿಂದ ತಕ್ಷಣ ಈ ಬಗ್ಗೆ ಗಮನಹರಿಸಿ ವ್ಯಾಪಾರಸ್ಥರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಂಡು ನ್ಯಾಯವಾದ ಬೆಲೆಗೆ ಮಾರಾಟ ಮಾಡಲು ಆದೇಶ ನೀಡಿ, ಪಾಲನೆ ಮಾಡದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೋಟೆ ಗೆಳೆಯರ ಬಳಗ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post