ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಾಳಿ ಮಳೆಗೆ ಕೋಳಿ ಫಾರಂ ಸಂಪೂರ್ಣ ಕುಸಿದು ಬಿದ್ದಿದ್ದು, 5 ಸಾವಿರಕ್ಕೂ ಹೆಚ್ಚಿನ ಕೋಳಿಗಳು ಸಾವು ಕಂಡಿರುವ ಘಟನೆ ಸೋಮಿನಕೊಪ್ಪದ ಸಮೀಪದಲ್ಲಿರುವ ಹೊಸೂರು ಗ್ರಾಮದ ಬಳಿ ನಡೆದಿದೆ.
Also read: ಭರ್ತಿಯ ಮಟ್ಟ ತಲುಪಿದ ಲಿಂಗನಮಕ್ಕಿ ಜಲಾಶಯ | ಶರಾವತಿ ನದಿಗೆ ಬಾಗಿನ ಅರ್ಪಣೆ
ಇಮ್ತಿಯಾಝ್ ಎಂಬುವವರಿಗೆ ಸೇರಿದ ಕೋಳಿ ಫಾರಂ ಇದಾಗಿದ್ದು, ಸುಮಾರು 6ಸಾವಿರಕ್ಕೂ ಹೆಚ್ಚಿನ ಕೋಳಿಗಳ ಸಾಕಾಣಿಕೆ ಇಲ್ಲಿ ನಡೆಯುತ್ತಿತ್ತು. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಕೋಳಿ ಫಾರಂನ ಶೆಡ್ ಸಂಪೂರ್ಣ ಕುಸಿದು ಬಿದ್ದಿದೆ.
ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 












Discussion about this post