ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಷ್ಟ್ರಪತಿಗಳ ಬಗ್ಗೆ ಏಕವಚನದಲ್ಲಿ ಮಾತಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ S L Bojegowda ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರಪತಿಗಳ ಬಗ್ಗೆ ಏಕವಚನದಲ್ಲಿ ಮಾತಾಡುವುದು ಸರಿಯಲ್ಲ ಎಂದು ರಾಷ್ಟ್ರಪತಿಗಳ ಕುರಿತು ಸಿದ್ದರಾಮಯ್ಯ ಏಕವಚನ ಬಳಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ರಾಷ್ಟ್ರಪತಿಗಳು ಅವರು ದೇಶದ ಪ್ರಥಮ ಪ್ರಜೆ. ಮುಖ್ಯಮಂತ್ರಿಯಾಗಿ ಈ ರೀತಿ ಅಗೌರವ ತೋರುವುದು ಸರಿಯಲ್ಲ. ಅದು ಸಿದ್ದರಾಮಯ್ಯನವರಿಗೆ Siddaramaiah ಶೋಭೆ ತರೋದಿಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವ ಕೊಡಬೇಕು ಎಂದರು
Also read: ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳಿಂದ ಗೆದ್ದು ಬಿಜೆಪಿ ಜಯಭೇರಿ ಭಾರಿಸುತ್ತದೆ: ಸಂಸದ ರಾಘವೇಂದ್ರ
ಮಂಡ್ಯ ಲೋಕಸಭಾ ಕ್ಷೇತ್ರ ಮೈತ್ರಿ ವಿಚಾರದ ಬಗ್ಗೆ ಮಾತನಾಡಿ, ಮಂಡ್ಯ ಲೋಕಸಭಾ ಸ್ಪರ್ಧೆ ಬಗ್ಗೆ ಇನ್ನೂ ಚರ್ಚೆ ಆಗಿದೆ. ಇನ್ನೂ ಅಂತಿಮ ಆಗಿಲ್ಲ ಎಂದರು.
ಸುಮಲತಾ ಅಂಬರೀಶ್ Sumalatha Ambrish ಅವರ ಸ್ಪರ್ಧೆ ವಿಚಾರದ ಬಗ್ಗೆ ಮಾತನಾಡಿ, ಸುಮಲತಾ ಬಿಜೆಪಿಗೆ ಸೇರಿದರೆ ಮಂಡ್ಯ ಕ್ಷೇತ್ರದ ಬಗ್ಗೆ ಪ್ರಶ್ನೆ ಬರಲ್ಲ. ಜೆಡಿಎಸ್ ಬಹುಶಃ ನಾಲ್ಕು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇವೆ. ನಾನು ಪರಿಷತ್ ಚುನಾವಣೆಗೆ ಆಕಾಂಕ್ಷಿ ಆಗಿದ್ದು ಸಿದ್ದತೆ ಮಾಡಿಕೊಳ್ಳುತ್ತಿದ್ದೇನೆ ಎಂದರು.
ಹನುಮ ಧ್ವಜ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ರಾಮ ಮಂದಿರ ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯ ಮಾಡಿದೆ. ವಿನಃ ಕಾರಣ ಬಿಜೆಪಿಯ ಮೇಲೆ ಆರೋಪ ಮಾಡಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post