ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಾವೇರಿಯಲ್ಲಿ ನಡೆದ ಭೀಕರ ಅಪಘಾತ ದುಃಖ ತಂದಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ವಿಷಾದ ವ್ಯಕ್ತಪಡಿಸಿದರು.
ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಎಮ್ಮೆಹಟ್ಟಿ ಗ್ರಾಮದ ಒಂದೇ ಕುಟುಂಬದ 13 ಸದಸ್ಯರು ಸಾವನಪ್ಪಿದ್ದಾರೆ. ಸರ್ಕಾರ ಈಗಾಗಲೇ ಎರಡು ಲಕ್ಷ ಪರಿಹಾರ ಘೋಷಣೆ ಮಾಡಿದೆ. ಇನ್ನು ಹೆಚ್ಚಿನ ಪರಿಹಾರ ನೀಡಬೇಕು. ಕನಿಷ್ಠ ಒಬ್ಬರಿಗೆ 5 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ನಡೆದ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಸಂಸದ ರಾಘವೇಂದ್ರ, ಸಹಕಾರಿ ಪ್ರಕೋಷ್ಟದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅವರು ಸಾಕಷ್ಟು ವರ್ಷದಿಂದ ಅಧಿಕಾರಿದಲ್ಲಿದ್ದಾರೆ. ಅವರ ಪಕ್ಷವೇ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಹಾಗಾಗಿ ಅವರು ಸಹಕಾರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ ಎಂದರು.

Also read: ಸಿಎಂ, ಡಿಸಿಎಂ ಬದಲಾವಣೆ ವಿಚಾರ | ಸಚಿವ ಮಧು ಬಂಗಾರಪ್ಪ ರಿಯಾಕ್ಷನ್ ಏನು?
ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದರು, ಒಂದು ವರ್ಷ ತುಂಬಿದ ಮೇಲೆ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುವ ಕೆಲಸ ಸರ್ಕಾರದಿಂದ ಆಗ್ತಿದೆ. ಹಾಲಿನ ದರ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಆಗಿದೆ. ಜನರ ಜೇಬಿಗೆ ಕೈ ಹಾಕಿ ಹಣ ಕಿತ್ತುಕೊಳ್ಳುವ ಕೆಲಸ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post