ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಹೃದಯ ಭಾಗದಲ್ಲಿರುವ ದುರ್ಗಿಗುಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಫೇಸ್ ಬಯೋಮೆಟ್ರಿಕ್ ಹಾಜರಾತಿ ಸಾಧನವನ್ನು ದೇಣಿಗೆಯಾಗಿ ನೀಡಲಾಗಿದ್ದು, ಈ ಮೂಲಕ ಇಂತಹ ಅತ್ಯಾಧುನಿಕ ವ್ಯವಸ್ಥೆಯನ್ನು ಅಳವಡಿಸಿಕೊಂಡ ಸರ್ಕಾರಿ ಶಿಕ್ಷಣ ಸಂಸ್ಥೆ ಎಂಬ ಖ್ಯಾತಿಗೆ ಪಾತ್ರವಾಗಿದೆ.
ಶಾಲೆಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಬೆಳವಣಿಗೆಯಲ್ಲಿ ಪ್ರಮುಖ ಬದಲಾವಣೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಆದೇಶಕ್ಕೆ ಬೆಂಬಲವಾಗಿ ದುರ್ಗಿಗುಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಫೇಸ್ ಬಯೋಮೆಟ್ರಿಕ್ ಹಾಜರಾತಿ ಸಾಧನವನ್ನು ದೇಣಿಗೆಯಾಗಿ ನೀಡಲಾಗಿದೆ.
ನಗರದ `ಉತ್ತಿಷ್ಠ ಭಾರತ ಮತ್ತು ಸಿಹಿಮೊಗೆ ಕ್ರಿಕೆಟ್ ಅಕಾಡೆಮಿ’ ಸಂಸ್ಥೆಯ ವತಿಯಿಂದ ನೀಡಲಾದ ಈ ಸಾಧನವನ್ನು ಸಂಸ್ಥೆಯ ಕಾರ್ಯದರ್ಶಿಯಾದ ಬಾಲಕೃಷ್ಣ ನಾಯ್ಡುರವರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ನಾಗರಾಜ್ ಮೂಲಕ ಹಸ್ತಾಂತರಿಸಿದರು.
Also read: 3 ವರ್ಷದ ನಂತರ ತಾಯಿಗೆ ಸರ್ಪ್ರೈಸ್ ಕೊಟ್ಟ ಮಗ: ವೈರಲ್ ವೀಡಿಯೋ ನೋಡಿ
ಈ ಸಂದರ್ಭದಲ್ಲಿ ನಿವೃತ್ತ ಪ್ರೊಫೆಸರ್ ಹಾಗೂ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಸಂಸ್ಥೆಯ ಸಂಘಟನಾ ಕಾರ್ಯದರ್ಶಿಯಾದ ಸತೀಶ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post