ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದಿಂದ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ #Southwest Graduation and Teachers Constituency ಸ್ಪರ್ಧಿಸಿರುವ ಇಬ್ಬರು ಅಭ್ಯರ್ಥಿಗಳ ಗೆಲುವು ಖಚಿತ ಎಂದು ಜಿಲ್ಲಾ ಯುವ ಜನತಾದಳದ ಅಧ್ಯಕ್ಷ ಮಧುಕುಮಾರ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೈತ್ರಿಕೂಟದಿಂದ ಶಿಕ್ಷಕರ ಕ್ಷೇತ್ರಕ್ಕೆ ಎಸ್.ಎಲ್. ಭೋಜೇಗೌಡ ಅವರು ಸ್ಪರ್ಧಿಸಿದ್ದಾರೆ. ಪದವೀಧರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಅವರು ಸ್ಪರ್ಧಿಸಿದ್ದಾರೆ. ಇಬ್ಬರು ಈಗಾಗಲೇ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಮತದಾರರ ಸಂಪರ್ಕದಲ್ಲಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ತಿಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಾಗಾಗಿ ಇಬ್ಬರೂ ಗೆಲ್ಲುತ್ತಾರೆ ಎಂದರು.
Also read: ಜೂನ್ 5ರಿಂದ ಮುಂಗಾರು ಆರಂಭ | ಮೇ 31ರವರೆಗೂ ರಾಜ್ಯದಾದ್ಯಂತ ಮಳೆ ಸೂಚನೆ

ಪತ್ರಿಕಾಗೋಷ್ಠಿಯಲ್ಲಿ ದಾದಾಪೀರ್, ಸಿದ್ದಪ್ಪ, ಜ್ಞಾನೇಶಪ್ಪ, ಪ್ರೇಮ್ ಕುಮಾರ್, ಸಂಜಯ್, ಕನ್ನಪ್ಪ, ನಿಹಾಲ್, ನಿಖಿಲ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post