No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೇ 15ರಿಂದ ಭದ್ರಾ ನಾಲೆಗಳಿಗೆ ನೀರು ಬಂದ್: ಪವಿತ್ರಾ ರಾಮಯ್ಯ

ಭದ್ರಾ ಮೇಲ್ದಂಡೆ ಯೋಜನೆಯ ಡಿಪಿಆರ್ ನಲ್ಲಿ ಬದಲಾವಣೆ ಆಗಬೇಕು

kalpa News by kalpa News
April 28, 2022
in ಶಿವಮೊಗ್ಗ
0
ಮೇ 15ರಿಂದ ಭದ್ರಾ ನಾಲೆಗಳಿಗೆ ನೀರು ಬಂದ್: ಪವಿತ್ರಾ ರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ 20 ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿತು.

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ಇಂದು ಮಲವಗೊಪ್ಪದ ಕಚೇರಿಯಲ್ಲಿ ನಡೆದ 80 ನೇ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮಾತನಾಡಿ, ನೀರಾ ಸಲಹಾ ಸಮಿತಿ ಮತ್ತು ರೈತ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿ ಎಲ್ಲ ರೈತರ ಹಿತದೃಷಿಯಿಂದ ಭದ್ರಾ ಜಲಾಶಯದ ಬೇಸಿಗೆ ಬೆಳೆಗಳಿಗೆ ಹರಿಸುತ್ತಿದ್ದ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುತ್ತಿದೆ. ನೀರಿನ ಅವಶ್ಯಕತೆಗನುಗುಣವಾಗಿ ಮೇ 20 ರವರೆಗೆ ನೀರನ್ನು ಹರಿಸಲು ಸಮಿತಿ ನಿರ್ಧಾರ ಕೈಗೊಂಡಿದೆ.

ನಾನು ಪ್ರಾಧಿಕಾರದ ಅಧ್ಯಕ್ಷೆಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೀನಿ. ಅಧಿಕಾರಿಗಳಿಗೆ ಚುರುಕು ಮುಟ್ಟಿಸಿ ಕೆಲಸ ಮಾಡಿಸಿದ್ದೇನೆ. ನಾವು ಕೇವಲ ಅಧಿಕಾರಿಗಳ ಮೇಲೆ ಅವಲಂಬಿತರಾಗದೇ ಕೆಲಸ ಮಾಡಬೇಕು. ಹಿಂದೆ ಬರ ಇಲ್ಲದಿದ್ದ ಸಮಯದಲ್ಲೂ ಸಹ ಕಡೆಯ ಭಾಗಕ್ಕೆ ನೀರು ಸಿಕ್ಕಿರಲಿಲ್ಲ. ಆದರೆ ಕಾಳಜಿ ಮತ್ತು ಜವಾಬ್ದಾರಿ ವಹಿಸಿದಲ್ಲಿ ಎಲ್ಲರಿಗೆ ನ್ಯಾಯ ಒದಗಿಸಬಹುದು. ಜೊತೆಗೆ ಅಧಿಕಾರಿಗಳು ಸರಿ ಹೋಗ್ತಾರೆ. ಕಳೆದ ಬಾರಿ ಹಾಗೂ ಈ ಬಾರಿ ಎರಡೂ ಸಲ ಜಲಾಶಯದಲ್ಲಿ ನೀರು ಉಳಿಕೆ ಮಾಡಿದ್ದೇವೆ. ಅನಾವಶ್ಯಕವಾಗಿ ಹರಿಯುತ್ತಿದ್ದ ನೀರನ್ನು ವಾಣಿವಿಲಾಸ ಜಲಾಶಯಕ್ಕೆ ಹರಿಸಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆಯ ಡಿಪಿಆರ್ ನಲ್ಲಿ ಬದಲಾವಣೆ ಆಗಬೇಕು. ಶಾಸಕರು ಸಹ ಈ ಬಗ್ಗೆ ಇಚ್ಚಾಶಕ್ತಿ ತೋರಬೇಕೆಂದರು.

Also read: ಕುವೆಂಪು ವಿವಿ ಅಧ್ಯಾಪಕೇತರ ನೌಕರರ ಸಂಘದವರು ಪ್ರತಿಭಟನೆ ನಡೆಸಿದ್ದೇಕೆ?

ಸಮಿತಿ ಸದಸ್ಯರು ಹಾಗೂ ರೈತ ಮುಖಂಡರಾದ ಹೆಚ್.ಆರ್.ಬಸವರಾಜಪ್ಪ ಮಾತನಾಡಿ, ಕಡೆಯ ಭಾಗದ ರೈತರು ಸೇರಿದಂತೆ ಎಲ್ಲರ ಹಿತದೃಷ್ಟಿಯಿಂದ ನೀರನ್ನು ಮೇ 15 ಕ್ಕೆ ನಿಲ್ಲಿಸುವ ನಿರ್ಧಾರಕ್ಕೆ ಬರಲಾಗಿದೆ. 29.9 ಟಿಎಂಸಿ ನೀರು ಹರಿಸುವ ಭದ್ರಾ ಮೇಲ್ದಂತೆ ಯೋಜನೆಗೆ ತುಂಗಾದಿಂದ 17.4 ಟಿಂಎಂಸಿ ಮತ್ತು ಭದ್ರಾ ಜಲಾಶಯದಿಂದ 12.5 ಟಿಎಂಸಿ ನೀರು ಬಿಡಬೇಕೆಂದು ಡಿಪಿಆರ್ ಆಗಿದೆ. ಆದರೆ ಭದ್ರಾದ ಬದಲಾಗಿ ಸಂಪೂರ್ಣ 29.9 ಟಿಎಂಸಿ ನೀರು ತುಂಗಾದಿಂದಲೇ ಹರಿಸುವಂತೆ ಆಗಬೇಕೆಂದು ಮನವಿ ಮಾಡಿದರು.

ರೈತರ ಹಿತವೇ ನಮ್ಮ ಮೂಲ ಉದ್ದೇಶ. ಕಾಡಾ ಅಧ್ಯಕ್ಷರು ಈ ಪ್ರಾಧಿಕಾರಕ್ಕೆ ಸೂಕ್ತವಾದ ವ್ಯಕ್ತಿಗಳಾಗಿದ್ದು, ಅತ್ಯುತ್ತಮವಾಗಿ ನೀರಿನ ನಿರ್ವಹಣೆ ಮಾಡಿ, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ಸಂಪೂರ್ಣವಾಗಿ ತುಂಗಾದಿಂದಲೇ ನೀರು ಹರಿಸುವ ಸಂಬಂಧ ಹಾಗೂ ನೀರಾವರಿಗೆ ಸಂಬಂಧಿಸಿದ ಇತರೆ ಸಮಸ್ಯೆಗಳ ಕುರಿತು ನೀರಾವರಿ ಸಚಿವರೊಂದಿಗೆ ಮಾತನಾಡುತ್ತೇನೆ. ಹಾಗೂ ಅನುದಾನ, ಮತ್ತಿತರೆ ಸಮಸ್ಯೆಗಳ ಪರಿಹಾರದ ಕುರಿತು ಪ್ರಯತ್ನ ಮಾಡುತ್ತೇನೆ ಹಾಗೂ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ಸಹ ತರುತ್ತೇನೆ. ನನ್ನ ಸಹಕಾರ ಸದಾ ಪ್ರಾಧಿಕಾರಕ್ಕೆ ಇದೆ.
-ಡಿ.ಎಸ್.ಅರುಣ್, ವಿಧಾನ ಪರಿಷರ್ ಶಾಸಕರು


ಸಮಿತಿ ಸದಸ್ಯರಾದ ಷಡಕ್ಷರಪ್ಪ ಗೌಡ್ರು ಮಾತನಾಡಿ, ಸಭೆಗೆ ಕೃಷಿ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಹಾಜರಾಗಬೇಕೆಂದು ಠರಾವು ಮಾಡಿ ಸರ್ಕಾರಕ್ಕೆ ಕಳುಹಿಸಬೇಕು ಹಾಗೂ ಶಾಸಕರೂ ಸಹ ಸಭೆಗೆ ಹಾಜರಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸದಸ್ಯರಾದ ಲಿಂಗರಾಜ್ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆ ಎಂಬ ಹೆಸರಿನಿಂದ ಕರೆಯಲಾಗುತ್ತಿರುವ ಈ ಯೋಜನೆಯು ಏತ ನೀರಾವರಿ ಆಗಿರುವುದರಿಂದ ಸದರಿ ಯೋಜನೆಗೆ ಭದ್ರಾ ಏತ ನೀರಾವರಿ ಯೋಜನೆ ಎಂದು ನೇಮಕ ಮಾಡಬೇಕೆಂದು ಸಲಹೆ ನೀಡಿದರು.


ಸದಸ್ಯರಾದ ತೇಜಸ್ವಿ ಪಟೇಲ್, ವೈ.ಸಿ.ಮಲ್ಲಿಕಾರ್ಜುನ, ರುದ್ರಮೂರ್ತಿ, ಮಂಜುನಾಥ್ ರೆಡ್ಡಿ, ಮಹೇಶ್ ಇತರೆ ಸದಸ್ಯರು ಹಾಗೂ ರೈತ ಸಂಘಟನೆ ಪದಾಧಿಕಾರಿಗಳು, ರೈತ ಮುಖಂಡರು ಮಾತನಾಡಿ. ಸಲಹೆ ಸೂಚನೆಗಳನ್ನು ನೀಡಿದರು.

ಭದ್ರಾ ಜಲಾಶಯದ ನೀರಿನ ಪ್ರಮಾಣ : ದಿ: 27.04.2022 ರಂದು ಹಾಲಿ ಬಳಕೆಗೆ ಬರುವ ನೀರಿನ ಪ್ರಮಾಣ 25.894 ಟಿಎಂಸಿ. 2021-22 ನೇ ಸಾಲಿನ ಬೇಸಿಗೆ ಬೆಳೆಗಳಿಗೆ ಹೆಚ್ಚುವರಿ ದಿನಗಳಿಗೆ ಹರಿಸಲು ಬೇಕಾಗಬಹುದಾದ ಸರಾಸರಿ ನೀರಿನ ಪ್ರಮಾಣ 6.20 ಟಿಂಎಂಸಿ. ಒಟ್ಟು ಬಳಕೆಯಾಗುವ ನೀರಿನ ಪ್ರಮಾಣ 17.24 ಟಿಂಎಂಸಿ. ಭದ್ರಾ ಜಲಾಶಯದಲ್ಲಿ ಉಳಿಯಬಹುದಾದ ನೀರಿನ ಪ್ರಮಾಣ 8.65 ಟಿಎಂಸಿ.

ಸಭೆಯಲ್ಲಿ ಭದ್ರಾ ನೀರಾವರಿ ಸಲಹಾ ಸಮಿತಿ ಸದಸ್ಯರು, ರೈತ ಮುಖಂಡರು, ಆಡಳಿತಾಧಿಕಾರಿ ಅರುಣ್, ಕನೀನಿನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಚಂದ್ರಹಾಸ್, ಇತರೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿ ಅಧ್ಯಾಪಕೇತರ ನೌಕರರ ಸಂಘದವರು ಪ್ರತಿಭಟನೆ ನಡೆಸಿದ್ದೇಕೆ?

Next Post

ಜಿಲ್ಲೆಯ ಹಲವೆಡೆ ಅಬ್ಬರಿಸಿದ ವರುಣ: ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ

kalpa News

kalpa News

Next Post
ಜಿಲ್ಲೆಯ ಹಲವೆಡೆ ಅಬ್ಬರಿಸಿದ ವರುಣ: ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ

ಜಿಲ್ಲೆಯ ಹಲವೆಡೆ ಅಬ್ಬರಿಸಿದ ವರುಣ: ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL