ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜಕೀಯ ಭಾಷಣ ಮಾಡುವುದಕ್ಕಿಂತ ಜನ ಸಾಮಾನ್ಯರಿಗೆ ಹತ್ತಿರವಿದ್ದು, ಸೇವೆ ಸಲ್ಲಿಸುವುದು ಮುಖ್ಯ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಹೇಳಿದರು.
ವಿನೋಬನಗರದ ಶ್ರೀರಾಮ ನಗರ (ಬೆಂಕಿನಗರ) ನಿವಾಸಿಗಳಿಂದ ಮಂಗಳವಾರ ಆಯೋಜಿಸಿದ್ದ ‘ನವ ಸಂವತ್ಸರದ ಸಂಭ್ರಮದಲ್ಲಿ ಗೀತಕ್ಕ, ಶಿವಣ್ಣ ನಮ್ಮೊಂದಿಗೆ’ ಶೀರ್ಷಿಕೆಯಡಿಯ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

Also read: ನಾಮಪತ್ರ ಠೇವಣಿಗಾಗಿ ಈಶ್ವರಪ್ಪ ಅವರಿಗೆ ಹಣ ನೀಡಿದ ಭೀಮನಕಟ್ಟೆ ಸ್ವಾಮಿಗಳು
ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಹಣದ ಅವಶ್ಯಕತೆ ಇಲ್ಲ. ಜನ ಸಾಮಾನ್ಯರಿಗೆ ಸೇವೆ ಸಲ್ಲಿಸಲು ಈ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದ್ದರಿಂದ, ಗೀತಾ ಅವರಿಗೆ ಮತ ನೀಡಿ ಹರಸಬೇಕು ಎಂದರು.

ಕಾಂಗ್ರೆಸ್ ಮುಖಂಡ ಎಚ್.ಸಿ. ಯೋಗೀಶ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಆಡಳಿತಾವಧಿಯಲ್ಲಿ ಜಿಲ್ಲೆಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಗೀತಕ್ಕ ಕೂಡ ಸಮಾಜ ಸೇವೆ ಸಲ್ಲಿಸುವುದರಲ್ಲಿ ತಂದೆಯ ಹಾದಿಯಲ್ಲಿ ಸಾಗುತ್ತಿದ್ದಾರೆ. ಅವರಿಗೆ ಮತ ನೀಡಿ ಆಶೀರ್ವದಿಸೋಣ ಎಂದರು.

ಸೂಡ ಅಧ್ಯಕ್ಷ ಎಚ್.ಎಸ್. ಸುಂದರೇಶ್, ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಆಯನೂರು ಮಂಜುನಾಥ, ಎಂ. ಶ್ರೀಕಾಂತ್, ಜಿ.ಡಿ. ಮಂಜುನಾಥ, ಪಾಲಾಕ್ಷಪ್ಪ, ಎಸ್.ಕೆ. ಮರಿಯಪ್ಪ, ವಿಶ್ವನಾಥ ಕಾಶಿ, ಕೆ.ರಂಗನಾಥ, ಗಿರೀಶ್ ಇದ್ದರು.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ನೆರವಿನಿಂದ ಬದುಕ ನಡೆಸುತ್ತಿದ್ದೇನೆ. ಹಿಂದೆ ಮನೆ ನಿರ್ಮಾಣಕ್ಕೆ ಬಂಗಾರಪ್ಪ ನೆರವಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಗೀತಾಕ್ಕ ಸೋತಿದ್ದರು. ಈ ಬಾರಿಯ ಚುನಾವಣೆಯಲ್ಲಿ ಗೀತಕ್ಕ ಗೆದ್ದು ಬರಲಿ ಎಂದು ನಗರದ ಆಶ್ರಯ ಬಡಾವಣೆ ನಿವಾಸಿ ಕಲಾವತಿ ಹರಸಿದರು.
ಇದೇ ವೇಳೆ, ಕಲಾವತಿ ಅವರು, ಗೀತಾ ಶಿವರಾಜಕುಮಾರ್ ಅವರಿಗೆ ಬೆಳ್ಳಿ ಕಡ್ಗವನ್ನು ಉಡುಗೊರೆಯಾಗಿ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post