ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಗಾಂಧಿನಗರದ ಅಂಗಡಿಯೊಂದರ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಲಾಕ್‌ಡೌನ್‌ನ ಪ್ರಯೋಜನ ಪಡೆದುಕೊಂಡು ಕಳ್ಳರು ಗಾಂಧಿನಗರ ಉದ್ಯಾನ ಮುಂಭಾಗದಲ್ಲಿರುವ ಮಂಜುನಾಥ್ ಪ್ರಾವಿಜನ್ ಸ್ಟೋರ್‌ನ ಬೀಗ ಮುರಿದು ಕಳ್ಳತನ ಮಾಡಿದ್ದಾರೆ.
ಮಧ್ಯರಾತ್ರಿ ಬೈಕ್‌ನಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಅಂಗಡಿ ಮುಂದೆ ಅನುಮಾನಾಸ್ಪದವಾಗಿ ಓಡಾಡುತಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇವರ ಮೇಲೆ ಶಂಖೆ ವ್ಯಕ್ತ ಪಡಿಸಲಾಗಿದೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್‌ಪಿ. ಡಾ.ಎಚ್.ಟಿ.ಶೇಖರ್, ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಮತ್ತು ಜಯನಗರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post