ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿವಿಧೆಡೆ ಬೈಕ್ ಕಳವು ಮಾಡುತ್ತಿದ್ದ ಆರೋಪದ ಮೇರೆಗೆ ಭದ್ರಾವತಿಯ ಮೂವರು ಆರೋಪಿಗಳನ್ನು, ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭದ್ರಾವತಿ ಸೀತಾಪುರದ ನಿವಾಸಿಗಳಾದ ಇಮ್ರಾನ್ (26), ಮದನ್ ಕುಮಾರ್ (18) ಹಾಗೂ ಹರೀಶ್ (18) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಬಂಧಿತರಿAದ 4 ಪಲ್ಸರ್, 1 ಅಪಾಚೆ, 1 ಸ್ಪ್ಲೆಂಡರ್ ಮತ್ತು 1 ರಾಯಲ್ ಎನ್ ಫೀಲ್ಡ್ ಸೇರಿದಂತೆ ಒಟ್ಟಾರೆ 7 ಬೈಕ್ ವಶಕ್ಕೆ ಪಡೆಯಲಾಗಿದೆ. ಇವುಗಳ ಮೌಲ್ಯ 9. 40 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.
ಆರೋಪಿಗಳ ಬಂಧನದಿAದ ಭದ್ರಾವತಿ, ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ 3 ಪ್ರಕರಣ, ಶಿಕಾರಿಪುರ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 2, ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ1 ಹಾಗೂ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 1 ಪ್ರಕರಣ ಬೆಳಕಿಗೆ ಬಂದಿದೆ.
ನ. 22 ರಂದು ಬೆಳಿಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪುರಲೆ ಗ್ರಾಮದ ಸುಬ್ಬಯ್ಯ ಮೆಡಿಕಲ್ ಕಾಲೇಜ್ ಹಿಂಭಾಗದ ಬೈಪಾಸ್ ರಸ್ತೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಹೆಚ್.ಸಿ.ವೆಂಕಟೇಶ್, ರಾಘವೇಂದ್ರ, ಕವನ್, ಕಾಶೀನಾಥ್, ಗಣೇಶ್, ಶ್ರೀಕಾಂತ್ ಮತ್ತು ಬಸವರಾಜ್ ಗಸ್ತಿನಲ್ಲಿದ್ದರು. ಈ ವೇಳೆ ಬಂಧಿತ ಮೂವರು ಆರೋಪಿಗಳು ಅನುನಾನಾಸ್ಪದವಾಗಿ ಎರಡು ಬೈಕ್ ಗಳನ್ನು ನಿಲ್ಲಿಸಿಕೊಂಡು ನಿಂತಿದ್ದರು. ಗಸ್ತಿನಲ್ಲಿದ್ದ ಸಿಬ್ಬಂದಿಗಳು ಸದರಿ ಆರೋಪಿಗಳನ್ನು ವಶಕ್ಕೆ ಪಡೆದು ಇನ್ಸ್ಪೆಕ್ಟರ್ ಸತ್ಯನಾರಾಯಣ ಅವರ ಮುಂದೆ ಹಾಜರುಪಡಿಸಿದ್ದರು.
ಆರೋಪಿಗಳನ್ನು ಕೂಲಂಕಷವಾಗಿ ವಿಚಾರಣೆಗೊಳಪಡಿಸಿದ ವೇಳೆ ಶಿಕಾರಿಪುರ ಪಟ್ಟಣದಲ್ಲಿ ಎರಡು ಬೈಕ್ ಕಳವು ಮಾಡಿದ್ದಾಗಿ ತಿಳಿಸಿದ್ದಾರೆ. ಜೊತೆಗೆ ವಿವಿಧೆಡೆ ಬೈಕ್ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಸಂಗತಿ ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post