ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ಸರ್ಕಾರ ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ಪ್ರಣಾಳಿಕೆಯಲ್ಲಿನ ಅಂಶಗಳನ್ನು ಜಾರಿ ಮಾಡಿ, ಜನರಿಗೆ ತಲುಪಿಸುತ್ತೇವೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ Madhu Bangarappa ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಣಾಳಿಕೆ ಬಗ್ಗೆ ತಲೆ ಕೆಡಿಸಿಕೊಂಡು, ಸಮಯೋಚಿತವಾಗಿ ಮಾಡಿದ್ದೇವೆ. ಪ್ರಣಾಳಿಕೆ ಅಂಶಗಳನ್ನು ಅನುಷ್ಟಾನಗೊಳಿಸುತ್ತೇವೆ. ನೀಡಿರುವ ಅಷ್ಟು ಭರವಸೆಗಳನ್ನು ಈಡೇರಿಸುತ್ತೇವೆ ಎಂದರು.

ಪ್ರಣಾಳಿಕೆಯಲ್ಲಿ ಹಲವಾರು ಅಂಶಗಳನ್ನು ಸೇರಿಸಿದ್ದೇವೆ. ರಾಜ್ಯದ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಕರಾವಳಿ, ಮೈಸೂರು, ಬೆಂಗಳೂರು ಭಾಗಗಳಿಗೆ ಪ್ರತ್ಯೇಕವಾಗಿ ಅಂಶಗಳನ್ನು ಅಡಕ ಮಾಡಲಾಗಿದೆ. ಕರಾವಳಿ ಭಾಗದ ಸಮಸ್ಯೆಗಳನ್ನು ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಸರ್ವಜನಾಂಗದ ಶಾಂತಿಯ ತೋಟ ಎಂದು ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಪ್ರಸ್ತುತ ಇದು ರಾಜ್ಯಕ್ಕೆ ಅಗತ್ಯವಾಗಿದೆ ಎಂದರು.

ಪಿ.ಎಫ್.ಐ. ಬ್ಯಾನ್ ಮಾಡಿದ್ದಕ್ಕೆ ಪ್ರಶ್ನೆ ಮಾಡಲಾಗಿದೆ. ಅವರು ಸುಪ್ರೀಂ ಕೋರ್ಟ್ ಗೆ ಹೋಗ್ತಾರೆ. ನೈತಿಕ ಪೊಲೀಸ್ ಗಿರಿ ಸೇರಿದಂತೆ ಕೇಸು ಹಾಕಿಕೊಂಡ ಸಂಘಟನೆಗಳನ್ನು ನಿಷೇಧ ಮಾಡುತ್ತೆವೆಂದು ಹೇಳಿದ್ದೇವೆ. ನಮ್ಮ ಪ್ರಣಾಳಿಕೆಯನ್ನು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸುಟ್ಟು ಹಾಕಿದ್ದಾರೆ. ಚಳಿಯಲ್ಲಿ ಬೆಂಕಿ ಕಾಯಿಸಿಕೊಳ್ಳುವ ಚಟ ನನಗಿಲ್ಲ. ಅದು ಈಶ್ವರಪ್ಪರಿಗೆ ಇದೆ. ಹಾಗಾಗಿ ನಮ್ಮ ಪ್ರಣಾಳಿಕೆಗೆ ಬೆಂಕಿ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಾರಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ಪರವಾಗಿ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದರು.










Discussion about this post