ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಹಸೂಡಿ ನೀರು ಬಳಕೆದಾರರ ಸಹಕಾರ ಸಂಘಕ್ಕೆ ಸೇರುವ ಜಾಗವನ್ನು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯು ಅತಿಕ್ರಮಿಸಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲು ತಯಾರಿ ನಡೆಸಿರುವ ಸ್ಥಳಕ್ಕೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭದ್ರಾ ಕಾಡಾ ಪ್ರಾಧಿಕಾರದ ಸಹಕಾರ ಇಲಾಖೆಯ ಹಾಗೂ ಸಂಘದ ಪದಾಧಿಕಾರಿಗಳ ಗಮನಕ್ಕೆ ತರದೇ, ಯಾವುದೇ ಒಪ್ಪಿಗೆ ಪಡೆಯದೆ ಜಾಗ ಅತಿಕ್ರಮಿಸಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲು ತಯಾರಿ ನಡೆಸಿದೆ. ಯಾವುದೇ ಕಾರಣಕ್ಕೂ ನಮ್ಮ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯಿಲ್ಲ. ಈ ಕೂಡಲೇ ಬದಲಿ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಈ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ಗಮನಕ್ಕೆ ತಂದು ಚರ್ಚಿಸುವುದಾಗಿ ಸಂಘದ ಪದಾಧಿಕಾರಿಗಳಿಗೆ ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post