ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಂ.ಆರ್.ಎಸ್. 110/11ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಪೂರೈಸುವ 110/11ಕೆವಿ ವಿದ್ಯುತ್ ಮಾರ್ಗದ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಸೆ. 21ರಂದು ಬೆಳಗ್ಗೆ 9ರಿಂದ ಸಂಜೆ 5.30ರವರೆಗೆ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಗ್ರಾಮಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ಹಾಗೂ ನಗರ ವ್ಯಾಪ್ತಿಯ ಎಂ.ಆರ್.ಎಸ್. ಕಾಲೋನಿ, ಹರಿಗೆ ಮಲವಗೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ವಡ್ಡಿನಕೊಪ್ಪ, ಜ್ಯೋತಿನಗರ, ವಿದ್ಯಾನಗರ, ಕಂಟ್ರೀಕ್ಲಬ್ ರಸ್ತೆ, ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ಧೇಶ್ವರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.










Discussion about this post