No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇವರಿಗೆ ಮದ್ಯದಂಗಡಿ ಬೇಕು, ಅವರಿಗೆ ಮದ್ಯದಂಗಡಿ ಬೇಡ: ಶಿವಮೊಗ್ಗದಲ್ಲೊಂದು ವಿಲಕ್ಷಣ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 13, 2023
in ಶಿವಮೊಗ್ಗ
0
ಇವರಿಗೆ ಮದ್ಯದಂಗಡಿ ಬೇಕು, ಅವರಿಗೆ ಮದ್ಯದಂಗಡಿ ಬೇಡ: ಶಿವಮೊಗ್ಗದಲ್ಲೊಂದು ವಿಲಕ್ಷಣ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಗೋಪಾಲಗೌಡ ಬಡಾವಣೆಯಲ್ಲಿ ನೂತನ ಮದ್ಯದಂಗಡಿಗೆ ಅವಕಾಶ ನೀಡಬಾರದೆಂದು ಆಗ್ರಹಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಗೋಪಾಲಗೌಡ ಬಡಾವಣೆಯ ನೂರಡಿ ರಸ್ತೆಯ ಕೇಕ್ ಕೆಫೆ ಮುಂಭಾಗದ ಮದ್ಯದಂಗಡಿ ಎದುರು ಇಂದು ಪ್ರತಿಭಟನೆ ನಡೆಸಿ ಅಬಕಾರಿ ಉಪ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಗೋಪಾಲಗೌಡ ಬಡಾವಣೆ ಪ್ರತಿಷ್ಠಿತ ಬಡಾವಣೆಯಾಗಿದ್ದು, ವಾಸಕ್ಕೆ ಯೋಗ್ಯವಾದ ಸ್ಥಳವೆಂದು ಅನೇಕ ನಿವೃತ್ತ ನೌಕರರು ಇಲ್ಲಿ ಮನೆ ನಿರ್ಮಿಸಿಕೊಂಡು ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ. ಆದರೆ ಇತ್ತೀಚೆಗೆ ತರಾತುರಿಯಲ್ಲಿ ಕಟ್ಟಡ ಪರವಾನಿಗೆಯನ್ನೂ ಪಡೆಯದೆ ಅಕ್ರಮವಾಗಿ ದಿಢೀರ್ ಕಟ್ಟಡ ನಿರ್ಮಿಸಿ ನೂತನವಾಗಿ ಮದ್ಯದಂಗಡಿ ತೆರೆಯಲು ಪರವಾನಿಗೆ ನೀಡಲಾಗಿದೆ. ಈ ಸ್ಥಳದ ಪಕ್ಕದಲ್ಲಿಯೇ ಸ್ನೇಹಾಶ್ರಯ ಅರ್ಬನ್ ಅಂಡ್ ರೂರಲ್ ಡೆವಲಪ್‍ಮೆಂಟ್ ಸೊಸೈಟಿಯು ಈಗಾಗಲೇ ಪೂರ್ವ ಪ್ರಾಥಮಿಕ ಶಾಲೆ ಪ್ರಾರಂಭಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಸ್ಥಳದ ಕಣ್ಣಳತೆ ದೂರದಲ್ಲೇ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಟ್ರಸ್ಟ್‍ನ ಬಾಲನಿಕೇತನ ಶ್ರೀರಾಮಕೃಷ್ಣ ಮಕ್ಕಳ ತೋಟ ಎಂಬ ಹೆಸರಿನ ಪೂರ್ವ ಪ್ರಾಥಮಿಕ ಶಾಲೆ ಕಳೆದ ಹಲವು ವರ್ಷಗಳಿಂದ ಚಾಲನೆಯಲ್ಲಿದೆ. ಸಮೀಪದಲ್ಲೇ ಮಕ್ಕಳ ಆಟಿಕೆಯ ಉದ್ಯಾನ, ದಿನಬಳಕೆ ವಸ್ತುಗಳನ್ನು ಮಾರಾಟ ಮಾಡುವ ಸೂಪರ್ ಮಾರ್ಕೆಟ್ ಇವೆ.
ಸಣ್ಣ ಮಕ್ಕಳನ್ನು ಬಿಡಲು ತಾಯಂದಿರೇ ಹೆಚ್ಚಾಗಿ ಬರುವುದರಿಂದ ಈ ಸ್ಥಳದಲ್ಲಿ ಮದ್ಯದಂಗಡಿಗೆ ಪರವಾನಿಗೆ ನೀಡಿದರೆ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ. ಸಿಎಲ್2 ಪರವಾನಿಗೆ ನೀಡಿದರೆ ನಿಯಮಾನುಸಾರ ಸ್ಥಳದಲ್ಲಿ ಕುಡಿಯಲು ಅವಕಾಶ ಇಲ್ಲದೆ ಇರುವುದರಿಂದ ಮದ್ಯವ್ಯಸನಿಗಳು ಹತ್ತಿರದ ಉದ್ಯಾನವನದಲ್ಲಿ ಕುಡಿಯುತ್ತಾರೆ. ಇದರಿಂದ ವಾಯುವಿಹಾರಕ್ಕೆ ಬರುವ ಎಲ್ಲರಿಗೂ ತೊಂದರೆಯಾಗುತ್ತದೆ. ಈ ಎಲ್ಲಾ ಅಂಶ ಮನಗಂಡು ಮದ್ಯದಂಗಡಿಗೆ ಅವಕಾಶ ನೀಡಬಾರದು. ಬೇರೆ ವಾಸಕ್ಕೆ ಯೋಗ್ಯವಲ್ಲದ ಸ್ಥಳಕ್ಕೆ ವರ್ಗಾಯಿಸಬೇಕೆಂದು ನವಕರ್ನಾಟಕ ನಿರ್ಮಾಣ ವೇದಿಕೆ ಆಗ್ರಹಿಸಿದೆ.

Also read: ಅಂಗನವಾಡಿ ಮಕ್ಕಳಿಗೆ, ಗರ್ಭಿಣಿ, ಬಾಣಂತಿಯರಿಗೆ ನೀಡುವ ಪೌಷ್ಠಿಕ ಆಹಾರದ ದರ ಹೆಚ್ಚಿಸಿ

ಒಂದು ವೇಳೆ ಅವಕಾಶ ನೀಡಿದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದೆ. ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯಾಧ್ಯಕ್ಷ ಗೋ. ರಮೇಶ್ ಗೌಡ, ಜಿಲ್ಲಾಧ್ಯಕ್ಷ ಸಂತೋಷ್, ನಿಂಗರಾಜು, ನಯನ, ಲಕ್ಷ್ಮಣ್, ರಾಜು ಗುಜ್ಜರ್, ದೇವೇಂದ್ರಪ್ಪ, ಆಸೀಫ್, ರಾಜು ನಾಯ್ಕ ಸುರೇಶ್, ಮುನೀರ್ ಮತ್ತಿತರರಿದ್ದರು.
ಮದ್ಯದಂಗಡಿ ಬೇಕೇ ಬೇಕು:
ಮದ್ಯದಂಗಡಿ ಬೇಕೇ ಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ ವಿಲಕ್ಷಣ ಘಟನೆ ಗೋಪಾಳಗೌಡ ಬಡಾವಣೆಯಲ್ಲಿ ನಡೆದಿದೆ.
ಗೋಪಾಲಗೌಡ ಬಡಾವಣೆಯ ನೂರಡಿ ರಸ್ತೆಯಲ್ಲಿ ನಿನ್ನೆ ಮತ್ತು ಇಂದು ಸ್ಥಳೀಯ ಸಾರ್ವಜನಿಕರು ಮತ್ತು ವಿವಿಧ ಸಂಘಟನೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರಿಂದ ಮದ್ಯದಂಗಡಿಗೆ ಅವಕಾಶ ನೀಡಬಾರದೆಂದು ಪ್ರತಿಭಟನೆ ನಡೆಸಲಾಗಿತ್ತು. ಇಂದು ಮದ್ಯದಂಗಡಿಯ ಪರವಾಗಿ ಮಹಿಳೆಯರು ಸೇರಿದಂತೆ ಇನ್ನೊಂದು ಬಣದವರು ನೂರಡಿ ರಸ್ತೆಯ ಇಕ್ಕೆಲಗಳಲ್ಲೂ ವಾಣಿಜ್ಯ ಉದ್ದೇಶಕ್ಕೆ ಅವಕಾಶವಿದ್ದು, ಬೇರೆ ಕಡೆ ಲೈಸೆನ್ಸ್ ಇರುವ ಮದ್ಯದಂಗಡಿ ಇಲ್ಲಿಗೆ ಸ್ಥಳಾಂತರಗೊಂಡಿದೆ. ಯಾವುದೇ ಕಾರಣಕ್ಕೂ ಇಲ್ಲಿಂದ ಸ್ಥಳಾಂತರವಾಗಲು ಬಿಡುವುದಿಲ್ಲ. ಇಲ್ಲಿ ಮದ್ಯದಂಗಡಿ ಬೇಕೇ ಬೇಕು ಎಂದು ಕೆಲವರು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಮದ್ಯದಂಗಡಿ ಪರ ವಿರೋಧ ಪ್ರತಿಭಟನೆಗಳು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಈ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿತ್ತು. ಮದ್ಯದಂಗಡಿ ಪರವಾದ ಹೋರಾಟದಲ್ಲಿ ರಾಜಕುಮಾರ್, ಪಣಿ, ನಟರಾಜ್, ರವಿ ಮತ್ತಿತರರಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂಗನವಾಡಿ ಮಕ್ಕಳಿಗೆ, ಗರ್ಭಿಣಿ, ಬಾಣಂತಿಯರಿಗೆ ನೀಡುವ ಪೌಷ್ಠಿಕ ಆಹಾರದ ದರ ಹೆಚ್ಚಿಸಿ

Next Post

ಅಧಿಕ ಶ್ರಾವಣದ ನಿಮಿತ್ತ ಶನೈಶ್ಚರ ಸನ್ನಿಧಿಯಲ್ಲಿ ಕಾರ್ಯಕ್ರಮ: ಒಂದು ತಿಂಗಳು ಏನೆಲ್ಲಾ ನಡೆಯಲಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಧಿಕ ಶ್ರಾವಣದ ನಿಮಿತ್ತ ಶನೈಶ್ಚರ ಸನ್ನಿಧಿಯಲ್ಲಿ ಕಾರ್ಯಕ್ರಮ: ಒಂದು ತಿಂಗಳು ಏನೆಲ್ಲಾ ನಡೆಯಲಿದೆ?

ಅಧಿಕ ಶ್ರಾವಣದ ನಿಮಿತ್ತ ಶನೈಶ್ಚರ ಸನ್ನಿಧಿಯಲ್ಲಿ ಕಾರ್ಯಕ್ರಮ: ಒಂದು ತಿಂಗಳು ಏನೆಲ್ಲಾ ನಡೆಯಲಿದೆ?

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL