ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರತ್ ಸ್ಕೌಟ್ ಮತ್ತು ಗೈಡ್ಸ್ ಆಯೋಜಿಸಿದ್ದ ರಾಜ್ಯ ಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಫರ್ಧೆಯಲ್ಲಿ ನಗರದ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ತೃತೀಯ ಬಹುಮಾನ ಗಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಜೈನ್ ಪಬ್ಲಿಕ್ ಶಾಲೆಯ ಎಂಟನೆಯ ತರಗತಿ ವಿದ್ಯಾರ್ಥಿಗಳು ತೃತೀಯ ಬಹುಮಾನ ಗಳಿಸಿ ಶಾಲೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ.
ಪಠ್ಯ ಚಟುವಟಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗೂ ಹೆಚ್ಚಿನ ಆದ್ಯತೆಯನ್ನು ನೀಡಿ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಹುಡುಕಿ ಅದನ್ನು ಹೊರ ಹಾಕಿ ವಿದ್ಯಾರ್ಥಿಗಳನ್ನು ಪ್ರಗತಿ ಸಾಧನೆಗೆ ಪೂರಕವಾಗಿ ಜೈನ್ ಪಬ್ಲಿಕ್ ಶಾಲೆ ಶ್ರಮಿಸುತ್ತಿದೆ.
Also read: ತೀರ್ಥಹಳ್ಳಿ, ಭದ್ರಾವತಿ ಎರಡು ಕ್ಷೇತ್ರದಲ್ಲಿ ಪ್ರಜಾಧ್ವನಿ ಯಾತ್ರೆಗೆ ಉತ್ತಮ ಬೆಂಬಲ: ಡಿ.ಕೆ. ಶಿವಕುಮಾರ್
ಬಹುಮಾನ ಪಡೆದ ಎಲ್ಲ ವಿದ್ಯಾರ್ಥಿಗಳು ಹಾಗೂ ತರಬೇತಿ ನೀಡಿದ ವಸಂತ್ ಅವರಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು ಹಾಗೂ ಶಿಕ್ಷಕೇತರ ವರ್ಗದವರು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post