ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳಿಂದ ಗೆದ್ದು ಬಿಜೆಪಿ ಜಯಭೇರಿ ಭಾರಿಸುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು PM Narendra Modi ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಕಳೆದ ಬಾರಿಗಿಂತ ಹೆಚ್ಚು ಸ್ಥಾನವನ್ನು ನಾವು ಈ ಬಾರಿ ಗೆಲ್ಲುತ್ತೇವೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Ragahavendra ವಿಶ್ವಾಸ ವ್ಯಕ್ತಪಡಿಸಿದರು.
2024ರ ಲೋಕಸಭಾ ಚುನಾವಣೆ Parliamentary Election ಕಾರ್ಯಾಲಯವನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿಯೂ ಕೂಡ ಒಳ್ಳೆಯ ವಾತಾವರಣವಿದೆ. ಅಭಿವೃದ್ಧಿಯ ಹಿನ್ನಲೆಯಿದೆ. ನಾವು ಮಾಡಿದ ಅಭಿವೃದ್ಧಿ ಕೆಲಸಗಳೇ ನಮ್ಮನ್ನು ಗೆಲ್ಲಿಸುತ್ತದೆ. ಬಿಜೆಪಿ ಕಾರ್ಯಕರ್ತರನ್ನು ಒಳಗೊಂಡಂತೆ ನಾಯಕರುಗಳೆಲ್ಲ ಸೇರಿಕೊಂಡು ಈ ಬಾರಿ ಅತ್ಯಧಿಕ ದಾಖಲೆ ರೀತಿಯ ಸೀಟುಗಳನ್ನು ಪಡೆದು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತದೆ ಎಂದರು.
ಲೋಕಸಭಾ ಕ್ಷೇತ್ರದ ಸಂಚಾಲಕ ಹಾಗೂ ಮಾಜಿ ಶಾಸಕ ರಘುಪತಿ Raghupathi ಮಾತನಾಡಿ, ಶ್ರೀರಾಮಮಂದಿರ ಪ್ರತಿಷ್ಠಾಪನೆ ಆದ ಮೇಲೆ ಜನರು ಚುನಾವಣೆಗಾಗಿಯೇ ಕಾಯುತ್ತಿದ್ದಾರೆ. ಬಿಜೆಪಿಯನ್ನು ಯಾವಾಗ ಗೆಲ್ಲಿಸುತ್ತೇವೆ ಎಂಬ ಉತ್ಸಾಹದಲ್ಲಿ ಇದ್ದಾರೆ. ಬಿಜೆಪಿ ಗೆಲ್ಲುವಿಗೆ ಸಂಕಲ್ಪ ತೊಟ್ಟಿದ್ದಾರೆ. ಇಡೀ ಜಿಲ್ಲೆಯಲ್ಲೂ ಕೂಡ ಅಭಿವೃದ್ಧಿ ಕೆಲಸ ಆಗಿದೆ. ದೇಶದೆಲ್ಲೆಡೆ ನರೇಂದ್ರ ಮೋದಿಯವರ ಗುಣಗಾನವೇ ನಡೆಯುತ್ತಿದೆ. ಎಲ್ಲರೂ ಒಟ್ಟಾಗಿ ಬಿಜೆಪಿಯನ್ನು ಗೆಲ್ಲಿಸೋಣ, ನಮ್ಮ ಜವಬ್ದಾರಿಯನ್ನು ನಿರ್ವಹಿಸೋಣ ಎಂದರು.
Also read: ಹನುಮ ಧ್ವಜ ಘರ್ಷಣೆ: ಕೆರಗೋಡು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ
ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ಬಿಜೆಪಿ ಕಚೇರಿಯಲ್ಲಿ ಲೋಕಸಭಾ ಚುನಾವಣಾ ಕಾರ್ಯಾಲಯ ಆರಂಭಗೊಂಡಿದೆ. ಕಾರ್ಯಕರ್ತರು ಅತ್ಯಂತ ಉತ್ಸಾಹದಲ್ಲಿದ್ದಾರೆ. ಇಡೀ ಜಿಲ್ಲೆಯಲ್ಲಿ ಬಿಜೆಪಿಯ ಪರವಾದ ಅಲೆ ಎದಿದ್ದೆ. ಕಾರ್ಯಕರ್ತರ ಮತ್ತು ನಾಯಕರ ಶ್ರಮದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರವು ಸೇರಿದಂತೆ ಇಡೀ ದೇಶದಲ್ಲಿ ಬಿಜೆಪಿ ಅತ್ಯಧಿಕ ಹೆಚ್ಚಿನ ಮತದಿಂದ ಗೆದ್ದು ಸಂಭ್ರಮಿಸಲಿದೆ. ವಿಶ್ವವಿಖ್ಯಾತ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಎಸ್.ರುದ್ರೇಗೌಡರು, ಚುನಾವಣಾ ನಿರ್ವಹಣಾ ಸಮಿತಿ ಅಧ್ಯಕ್ಷ ಆರ್.ಕೆ.ಸಿದ್ರಾಮಣ್ಣಾ, ಜಿಲ್ಲಾ ಪ್ರಭಾರಿ ಗಿರೀಶ್ ಪಟೇಲ್, ಪ್ರಮುಖರಾದ ಎಸ್.ದತ್ತಾತ್ರಿ, ಶಿವರಾಜ್, ಮಾಲತೇಶ್ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post