Thursday, August 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಗಣೇಶ ಕೂರಿಸುವವರೇ ಇಲ್ಲಿ ಗಮನಿಸಿ | ಇವುಗಳು ಕಡ್ಡಾಯ, ಇವುಗಳ ನಿಷೇಧ | ಇಲ್ಲಿದೆ ವಿವರ

August 14, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜೇಡಿಮಣ್ಣಿನ ಗಣಪತಿ ವಿಗ್ರಹಗಳನ್ನು ನೈಸರ್ಗಿಕ ಮಣ್ಣು ಮತ್ತು ಸರಳ ಜೇಡಿಮಣ್ಣಿನಿಂದ ತಯಾರಿಸಲಾಗುತ್ತದೆ, ನೈಸರ್ಗಿಕ ರಾಸಾಯನಿಕಗಳಿಂದ ಅಲಂಕರಿಸಲಾಗುತ್ತದೆ. ಈ ವಿಗ್ರಹಗಳನ್ನು ನೀರಿನಲ್ಲಿ ಮುಳುಗಿಸಿದಾಗ ಅಥವಾ ಪ್ರಕೃತಿಗೆ ಬಿಟ್ಟಾಗ, ಅವು ಯಾವುದೇ ವಿಷಕಾರಿ ವಸ್ತುಗಳನ್ನು ಬಿಡುಗಡೆ ಮಾಡದೆ ಕರಗುತ್ತವೆ. ಪ್ರಕೃತಿ ಪರಿಸರ ಸ್ನೇಹಿ ಜೇಡಿಮಣ್ಣಿನ ಗಣಪತಿ ವಿಗ್ರಹಗಳನ್ನು ಸ್ಥಳೀಯ ಕುಶಲಕರ್ಮಿಗಳಿಂದ ಪಡೆಯಲಾಗುತ್ತದೆ, ನೈಸರ್ಗಿಕ ಸಸ್ಯ ಆಧಾರಿತ ಬಣ್ಣಗಳಿಂದ ಅಲಂಕರಿಸಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯನ್ನಾಗಿ ಆಚರಿಸಲು ಸಂಕಲ್ಪ ಮಾಡೋಣ. ಹಸಿರು ಪಟಾಕಿಯನ್ನೇ ಬಳಸೋಣ.
– ಗುರುದತ್ತ ಹೆಗಡೆ, ಜಿಲ್ಲಾಧಿಕಾರಿಗಳು, ಶಿವಮೊಗ್ಗ

ಜಿಲ್ಲೆಯಾದ್ಯಂತ ಆಗಸ್ಟ್ 27ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆ.5 ನಡೆಯಲಿರುವ ಈದ್ ಮಿಲಾದ್ ಹಬ್ಬಗಳನ್ನು ಸರ್ವಧರ್ಮಗಳ ಬಂಧುಗಳು ಸೌಹಾರ್ಧಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆಯ ಅಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಹಬ್ಬಗಳ ಸಂದರ್ಭದಲ್ಲಿ ಬೈಕ್ ರ‍್ಯಾಲಿ ನಡೆಸದಂತೆ, ಡಿಜೆ ಧ್ವನಿವರ್ಧಕಗಳನ್ನು ಬಳಸಿ ಮೆರವಣಿಗೆ ಮಾಡದಂತೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಅಲ್ಲದೇ ವಿಶೇಷವಾಗಿ ಗಣಪತಿ ವಿಸರ್ಜನಾ ಸ್ಥಳಗಳಲ್ಲಿ ತೆಪ್ಪ ಇಟ್ಟುಕೊಂಡಿರಬೇಕು. ನೀರಿಗಿಳಿಯುವವರು ಈಜು ಬಲ್ಲವರಾಗಿದ್ದು, ಮೂರ್ನಾಲ್ಕು ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನ ನೀರಿಗೆ ಇಳಿಯಬಾರದು. ಅಲ್ಲದೇ ಲೈಫ್ ಜಾಕೇಟ್’ಗಳನ್ನು ಕಡ್ಡಾಯವಾಗಿ ಧರಿಸಿರಬೇಕು ಎಂದವರು ತಿಳಿಸಿದರು.

 

ಗಣಪತಿ ಅಥವಾ ಈದ್ ಮಿಲಾದ್ ಹಬ್ಬ ಸಂಭ್ರಮದ ಮೆರವಣಿಗೆಗಳು ಅತ್ಯಂತ ಶಾಂತಿಯುತವಾಗಿದ್ದು, ಮತ್ತೊಂದು ಸಮುದಾಯ, ಧರ್ಮ, ಜನಾಂಗಕ್ಕೆ ಅಥವಾ ಅವರ ಭಾವನೆಗಳಿಗೆ ಧಕ್ಕೆ ಉಂಟಾಗದಂತಿರಲಿ ಎಂದರು.

ನಡೆಯುವ ಪ್ರಮುಖ ಬೀದಿಗಳಲ್ಲಿ, ವರ್ತುಲಗಳಲ್ಲಿ ಸಾಕಷ್ಟು ಬೀದಿದೀಪಗಳನ್ನು ಅಳವಡಿಸಲು ಸೂಚಿಸಲಾಗಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಅಗತ್ಯವಿರುವಲ್ಲಿ ಡ್ರೋಣ ಕಣ್ಗಾವಲು ಇಡಲಾಗುವುದು ಎಂದರು.

ಇವುಗಳ ನಿಷೇಧ
ಹಬ್ಬದ ಸಂದರ್ಭದಲ್ಲಿ ಡಿಜೆ ಬಳಕೆ ನಿಷೇಧ
ಜಿಲ್ಲೆಯಲ್ಲಿ ಬೈಕ್ ರ‍್ಯಾಲಿ ನಡೆಸುವಂತಿಲ್ಲ
ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವಂತಿಲ್ಲ
ಥರ್ಮೋಕೋಲ್, ಪಿಒಪಿ ಗಣಪತಿ ಬಳಸುವಂತಿಲ್ಲ
ಇವುಗಳು ಕಡ್ಡಾಯ
ಗಣೇಶ ವಿಸರ್ಜನೆ ವೇಳೆ ತೆಪ್ಪ ಬಳಸಬೇಕು
ತೆಪ್ಪ ಬಳಸುವ ವೇಳೆ ಲೈಫ್ ಜಾಕೇಟ್ ಬಳಸಬೇಕು
ವಿಸರ್ಜನೆಗೆ 4 ಜನಕ್ಕೂ ಹೆಚ್ಚು ಜನ ಇಳಿಯುವಂತಿಲ್ಲ
ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ

ಗಣಪತಿ ವಿಸರ್ಜನಾ ಸ್ಥಳಗಳಲ್ಲಿ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿನ ಕೆರೆ, ಕಟ್ಟೆ-ಕಾಲುವೆಗಳು ಸುರಕ್ಷಿತ ತಾಣಗಳಾಗಿರುವ ಬಗ್ಗೆ ಹಾಗೂ ಅಗತ್ಯವಿರುವಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ಈ ಬಗ್ಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಗಮನಹರಿಸಬೇಕೆಂದವರು ತಿಳಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಧರ್ಮಗಳ ಹಬ್ಬ ಆಚರಣೆಗಳು ಶಾಂತಿ-ಸೌಹಾರ್ಧಯುತವಾಗಿ ನಡೆಯುವಲ್ಲಿ ಮಹಾನಗರಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು ಸ್ಥಳೀಯ ಪೊಲೀಸ್‌ಇಲಾಖೆಯ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದರು.ಉತ್ಸವ, ಮೆರವಣಿಗೆಗಳು ನಡೆಯುವ ಸ್ಥಳಗಳಲ್ಲಿ ಸಿಸಿ ಕ್ಯಾಮರಾ, ಬೀದಿದೀಪ ಅಳವಡಿಕೆ ಹಾಗೂ ರಾಜಬೀದಿಗಳ ಸ್ವಚ್ಚತೆ ಹಾಗೂ ಕಲ್ಲುಮಣ್ಣುಗಳ ರಾಶಿಗಳು ಇಲ್ಲದಿರುವಂತೆ ಗಮನಹರಿಸಬೇಕು. ಆರೋಗ್ಯ ಇಲಾಖೆಯಿಂದ ಅಂಬುಲೆನ್ಸ್’ಗೂ ಸ್ಥಳೀಯ ಸಂಸ್ಥೆಗಳಿಂದ ಶುದ್ಧ ಕುಡಿಯುವ ನೀರಿನ ಸ್ಥಾವರಗಳನ್ನು ಅಗತ್ಯವಿರುವಲ್ಲಿ ಸ್ಥಾಪಿಸುವಂತೆ ಸೂಚಿಸಲಾಗಿದೆ. ಈ ಕಾರ್ಯದಲ್ಲಿ ಪೊಲೀಸ್ ಇಲಾಖೆಯು ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಲಿದೆ ಎಂದರು.

ಶಿವಮೊಗ್ಗ, ಭದ್ರಾವತಿ ಸೇರಿದಂತೆ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ವೀಕ್ಷಣಾ ಗೋಪುರಗಳನ್ನು ನಿರ್ಮಿಸಲು ಸ್ಥಳೀಯ ಆಡಳಿತ ಗಮನಹರಿಸಬೇಕು. ಸಂಘ-ಸಂಸ್ಥೆಗಳ ಹಲವು ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಸ್ಥಳೀಯ ಸಂಸ್ಥೆಗಳು ನೀಡಿರುವ ಪ್ರಚಾರ ಸಾಮಗ್ರಿಗಳನ್ನು ತಕ್ಷಣದಿಂದಲೇ ತೆರವುಗೊಳಿಸಲು ಸೂಚಿಸಬೇಕು. ಸರ್ಕಾರಿ ಸ್ವತ್ತುಗಳಿಗೆ ಹಾನಿ ಉಂಟಾದಲ್ಲಿ ಕಾರ್ಯಕ್ರಮಗಳ ಆಯೋಜಕರೇ ಹೊಣೆಗಾರರಾಗಿದ್ದು, ಅಲ್ಲಿನ ನಷ್ಟವನ್ನು ಭರಿಸಿಕೊಡಲು ಬದ್ದರಾಗಿರಬೇಕು. ಕೆಲವು ಸಂದರ್ಭಗಳಲ್ಲಿ ಮತೀಯ, ಜನಾಂಗೀಯ ವಿಷಯಗಳಿದ್ದಾಗ ಸೂಕ್ಷ್ಮವಾಗಿ ಕ್ರಮ ಕೈಗೊಳ್ಳಬೇಕು. ಇಂತಹ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಹಕಾರ ಪಡೆದುಕೊಳ್ಳುವಂತೆ ಅವರು ಸೂಚಿಸಿದರು.

ಈ ಹಬ್ಬಗಳ ಆಚರಣೆಯ ದಿನಗಳಲ್ಲಿ, ಮೆರವಣಿಗೆ ಸಾಗುವಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ಗಣಪತಿ ಪ್ರತಿಷ್ಠಾಪನೆಗಾಗಿ ಏಕಗವಾಕ್ಷಿ ಸೌಲಭ್ಯದ ಮೂಲಕ ನಿಬಂಧನೆಗಳಿಗೊಳಪಟ್ಟು ಅನುಮತಿ ನೀಡಲು ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಉಪವಿಭಾಗಾಧಿಕಾರಿ ಸತ್ಯನಾರಾಯಣ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಯಲಕ್ಷö್ಮಮ್ಮ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಥರ್ಮೋಕೋಲ್, ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ತಯಾರಿಸಲ್ಪಟ್ಟ ಗಣೇಶನ ವಿಗ್ರಹಗಳನ್ನು ಪೂಜೆಗೆ ಬಳಸದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಇವು ನೈಸರ್ಗಿಕವಾಗಿ ಜೈವಿಕವಾಗಿ ವಿಘಟನೀಯವಲ್ಲದವು ಮತ್ತು ಅವುಗಳು ದೀರ್ಘಕಾಲದವರೆಗೆ ನೀರಿನ ಮೇಲೆ ತೇಲುತ್ತಲೇ ಇರುತ್ತವೆ. ಇದರಿಂದಾಗಿ ಜಲಮೂಲಗಳು ಮತ್ತು ಜಲ ಪರಿಸರ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ವಿಗ್ರಹಗಳನ್ನು ಹೆಚ್ಚಾಗಿ ಸೀಸ ಮತ್ತು ಪಾದರಸದಿಂದ ಕೂಡಿದ ಬಣ್ಣಗಳಿಂದ ಅಲಂಕರಿಸಲಾಗುತ್ತದೆ, ಇದು ಜಲಮೂಲಗಳ ಸಸ್ಯ ಮತ್ತು ಪ್ರಾಣಿಗಳನ್ನು ನಾಶಮಾಡುವ ನಿರಂತರ ಪ್ರಕ್ರಿಯೆಗೆ ಕಾರಣವಾಗುತ್ತದೆ.
ಜೇಡಿಮಣ್ಣಿನ ಗಣಪತಿ ವಿಗ್ರಹಗಳನ್ನು ನೈಸರ್ಗಿಕ ಮಣ್ಣು ಮತ್ತು ಸರಳ ಜೇಡಿಮಣ್ಣಿನಿಂದ ತಯಾರಿಸಲಾಗುತ್ತದೆ, ನೈಸರ್ಗಿಕ ರಾಸಾಯನಿಕಗಳಿಂದ ಅಲಂಕರಿಸಲಾಗುತ್ತದೆ. ಈ ವಿಗ್ರಹಗಳನ್ನು ನೀರಿನಲ್ಲಿ ಮುಳುಗಿಸಿದಾಗ ಅಥವಾ ಪ್ರಕೃತಿಗೆ ಬಿಟ್ಟಾಗ, ಅವು ಯಾವುದೇ ವಿಷಕಾರಿ ವಸ್ತುಗಳನ್ನು ಬಿಡುಗಡೆ ಮಾಡದೆ ಕರಗುತ್ತವೆ. ಪ್ರಕೃತಿ ಪರಿಸರ ಸ್ನೇಹಿ ಜೇಡಿಮಣ್ಣಿನ ಗಣಪತಿ ವಿಗ್ರಹಗಳನ್ನು ಸ್ಥಳೀಯ ಕುಶಲಕರ್ಮಿಗಳಿಂದ ಪಡೆಯಲಾಗುತ್ತದೆ, ನೈಸರ್ಗಿಕ ಸಸ್ಯ ಆಧಾರಿತ ಬಣ್ಣಗಳಿಂದ ಅಲಂಕರಿಸಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯನ್ನಾಗಿ ಆಚರಿಸಲು ಸಂಕಲ್ಪ ಮಾಡೋಣ. ಹಸಿರು ಪಟಾಕಿಯನ್ನೇ ಬಳಸೋಣ.
-ಗುರುದತ್ತ ಹೆಗಡೆ, ಜಿಲ್ಲಾಧಿಕಾರಿಗಳು, ಶಿವಮೊಗ್ಗ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

                                               

Tags: Ganesha ChaturthiKannada News WebsiteLatest News KannadaShimogaShivamoggaಈದ್ ಮಿಲಾದ್ಗಣಪತಿಗುರುದತ್ತ ಹೆಗಡೆಜಿಲ್ಲಾಧಿಕಾರಿಜೇಡಿಮಣ್ಣಿನ ಗಣಪತಿಬೈಕ್‌ ರ‍್ಯಾಲಿಲೈಫ್ ಜಾಕೇಟ್ಶಾಂತಿ ಸುವ್ಯವಸ್ಥೆಶಿವಮೊಗ್ಗ
Previous Post

ಕಾರು ಬದಲಿಸಿ ಗುಪ್ತವಾಗಿ ಪತ್ನಿ ನಿವಾಸಕ್ಕೆ ದರ್ಶನ್ | ಬೆಂಬಿಡದೇ ತೆರಳಿ ಬಂಧಿಸಿದ ಪೊಲೀಸರು

Next Post

ಆನಂದಕಂದ ಲೇಖನ ಮಾಲಿಕೆ | ಅಯೋಧ್ಯಾವರ್ಣನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆನಂದಕಂದ ಲೇಖನ ಮಾಲಿಕೆ | ಅಯೋಧ್ಯಾವರ್ಣನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭದ್ರಾವತಿ | ಅನ್ಯಭಾಗ್ಯ ಅಕ್ಕಿ ಅಕ್ರಮ ಮಾರಾಟ | ಕಾನೂನು ಕ್ರಮಕ್ಕೆ ಆಗ್ರಹ

August 14, 2025

ರಾಯರ ಆರಾಧನೆ | ರಾಯಚೂರು ಶೇಷಗಿರಿದಾಸ್ ವೃಂದದಿಂದ ‘ಹರಿದಾಸ ವಾಣಿ’ ಕಾರ್ಯಕ್ರಮ 

August 14, 2025

ಸತ್ತವರಿಗೂ ಡಯಾಲಿಸಿಸ್ ಬಿಲ್, ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕ್ಷಿ ಸಮೇತ ಅವ್ಯವಸ್ಥೆ ಬಯಲು: ಡಿ.ಎಸ್. ಅರುಣ್

August 14, 2025

ಆನಂದಕಂದ ಲೇಖನ ಮಾಲಿಕೆ | ಅಯೋಧ್ಯಾವರ್ಣನೆ

August 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭದ್ರಾವತಿ | ಅನ್ಯಭಾಗ್ಯ ಅಕ್ಕಿ ಅಕ್ರಮ ಮಾರಾಟ | ಕಾನೂನು ಕ್ರಮಕ್ಕೆ ಆಗ್ರಹ

August 14, 2025

ರಾಯರ ಆರಾಧನೆ | ರಾಯಚೂರು ಶೇಷಗಿರಿದಾಸ್ ವೃಂದದಿಂದ ‘ಹರಿದಾಸ ವಾಣಿ’ ಕಾರ್ಯಕ್ರಮ 

August 14, 2025

ಸತ್ತವರಿಗೂ ಡಯಾಲಿಸಿಸ್ ಬಿಲ್, ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕ್ಷಿ ಸಮೇತ ಅವ್ಯವಸ್ಥೆ ಬಯಲು: ಡಿ.ಎಸ್. ಅರುಣ್

August 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!