ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಸ್ನಾತಕೋತ್ತರ ಪದವಿ, ಪದವಿ ಮತ್ತು ಬಿಎಡ್ ಪದವಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಈ ಬಗ್ಗೆ ವಿವಿಯ ಅಧಿಕೃತ ಆದೇಶ ನಾಳೆ ಬೆಳಿಗ್ಗೆ ಹೊರಬೀಳಲಿದೆ.ಉಳಿದಂತೆ, ವಿಶ್ವವಿದ್ಯಾಲಯದ ಕಚೇರಿ ಮತ್ತು ವಿಭಾಗಗಳಲ್ಲಿ ಸಿಬ್ಬಂದಿ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಕುಲಸಚಿವರಾದ ಜಿ. ಅನುರಾಧ ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post