ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ೬೨೫ ಅಂಕಗಳಿಗೆ ೬೨೫ ಅಂಕ ಗಳಿಸಿದ್ದಾರೆ. ಶಿವಮೊಗ್ಗ ರಾಮಕೃಷ್ಣ ಶಾಲೆಯ ನಿತ್ಯಾ ಎಂ. ಕುಲಕರ್ಣಿ, ಕಲ್ಲಹಳ್ಳಿಯ ಶಿವಪ್ಪನಾಯಕ ಬಡಾವಣೆಯ ಪ್ರಿಯದರ್ಶಿನಿ ಹೈಸ್ಕೂಲ್‌ನ ನಮನಾ.ಕೆ, ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಶಾಲೆಯ ಸಹಿಷ್ಣು.ಎನ್ ಇವರು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದ ಪ್ರಥಮ ಸ್ಥಾನದಲ್ಲಿ ಹೆಸರು ಮಾಡಿದ್ದಾರೆ
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಪಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆ ನಾಲ್ಕನೇ (82.29) ಸ್ಥಾನ ಪಡೆಯುವ ಮೂಲಕ ಉತ್ತಮ ಶ್ರೇಣಿಗೆಯಲ್ಲಿ ಇರುವುದು ವಿಶೇಷ.
ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ರಾಜ್ಯದ ಪರೀಕ್ಷಾ ಪಲಿತಾಂಶದ ವಿವರವನ್ನು ನೀಡಿದರು.
ರಾಜ್ಯದಲ್ಲಿ ಈ ಬಾರಿ 66.14ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ೨೨ ವಿದ್ಯಾರ್ಥಿಗಳು ೬೨೫ಕ್ಕೆ ೬೨೫ ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನದಲ್ಲಿ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು ಕಲ್ಬುರ್ಗಿ ಕೊನೆಯ ಸ್ಥಾನ ಪಡೆದಿದೆ ಒಟ್ಟಾರೆ ವಿದ್ಯಾರ್ಥಿಗಳ ಸಾಧನೆ ವಿಶೇಷವಾಗಿದ್ದು ಸರ್ಕಾರಿ ಶಾಲೆಗಳ ಸಾಧನೆಯೂ ಸಹ ಗಮನಾರ್ಧವಾಗಿದೆ ಎಂಬುದು ಮಧು ಬಂಗಾರಪ್ಪ ಅವರ ಅಭಿಪ್ರಾಯ ಉತ್ತೇಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಕೋರಿರುವ ಮಧು ಬಂಗಾರಪ್ಪ ಅವರು ಅನುತ್ತೀರ್ಣ ವಿದ್ಯಾರ್ಥಿಗಳು ಗಾಬರಿಗೊಳ್ಳದೆ ಸದ್ಯದಲ್ಲೇ ನಡೆದಿರುವ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಮುಂದಿನ ವಿದ್ಯಾಭ್ಯಾಸವನ್ನು ಮುಂದುವರಿಸಲು ಕರೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post